ಬೆಳ್ಳಂಬೆಳಗ್ಗೆ ಮುಂಡಗೋಡದಲ್ಲಿ ಪೊಲೀಸ್ ದಾಳಿ! ರೌಡೀಶೀಟರ್ಗಳ ಮನೆಗಳ ಮೇಲೆ ಏಕಕಾಲದ ರೇಡ್
Police raid in Mundagoda in the early hours of the morning! Simultaneous raids on the houses of rowd
ಲೋಕದರ್ಶನ ವರದಿ
ಮುಂಡಗೋಡ 24 : ತಾಲೂಕಿನಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮುಂಡಗೋಡ ಪೊಲೀಸರು ಬುಧವಾರ ಬೆಳಗ್ಗಿನ ಜಾವ ರೌಡೀಶೀಟರ್ಗಳ ಮನೆಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿ ತಪಾಸಣೆ ನಡೆಸಿದರು. ತಾಲೂಕಿನ ವಿವಿಧ ಭಾಗಗಳಲ್ಲಿ ವಾಸವಾಗಿರುವ ಒಟ್ಟು 14 ರೌಡೀಶೀಟರ್ಗಳ ಮನೆಗಳ ಮೇಲೆ ಈ ಕಾರ್ಯಾಚರಣೆ ನಡೆದಿದ್ದು, ಮುಂಜಾನೆಲೇ ಪೊಲೀಸರು ಮನೆಗಳಿಗೆ ತೆರಳಿ ಪರೀಶೀಲನೆ ನಡೆಸಿದರು. ಕೆಲವರ ಚಲನವಲನ, ಹಾಜರಾತಿ ಹಾಗೂ ಅವರ ಚಟುವಟಿಕೆಗಳ ಕುರಿತು ಮಾಹಿತಿ ಸಂಗ್ರಹಿಸಲಾಯಿತು.
ಶಿರಸಿ ಉಪವಿಭಾಗದ ಡಿವೈಎಸ್ಪಿ ಗೀತಾ ಪಾಟೀಲ್ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ ಮುಂಡಗೋಡ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ರಮೇಶ ಹಾನಪೂರ, ಹಾಗೂ ಪಿಎಸ್ಐ ಮಂಜುನಾಥ ಗೌಡರ,ಸೇರಿದಂತೆ ಸಿಬ್ಬಂದಿ ಭಾಗವಹಿಸಿದ್ದರು. ಕಾನೂನು ಸುವ್ಯವಸ್ಥೆಗೆ ಧಕ್ಕೆಯುಂಟು ಮಾಡುವ ವ್ಯಕ್ತಿಗಳ ಮೇಲೆ ನಿಗಾ ವಹಿಸುವ ಉದ್ದೇಶದಿಂದಲೇ ಈ ದಾಳಿ ನಡೆಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಇಂತಹ ವಿಶೇಷ ಕಾರ್ಯಾಚರಣೆಗಳು ಮುಂದುವರಿಯಲಿವೆ. ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗಿರುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು” ಎಂದು ಪೊಲೀಸರು ಸ್ಪಷ್ಟ ಎಚ್ಚರಿಕೆ ನೀಡಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 