ಐದು ವರ್ಷದೊಳಗಿನ ಪ್ರತಿ ಮಗುವಿಗೂ ಪೋಲಿಯೋ ಹನಿ ಕಡ್ಡಾಯ: ಅಶೋಕ್ ಚಲವಾದಿ
Polio drops mandatory for every child under five years of age: Ashok Chalwadi
ಮುಂಡಗೋಡ 28: ಪೋಲಿಯೋದಿಂದ ಉಂಟಾಗುವ ಶಾಶ್ವತ ಅಂಗವೈಕಲ್ಯವನ್ನು ತಡೆಯಲು ಐದು ವರ್ಷದೊಳಗಿನ ಪ್ರತಿಯೊಂದು ಮಗುವಿಗೂ ಎರಡು ಹನಿ ಪೋಲಿಯೋ ಲಸಿಕೆ ಹಾಕಿಸುವುದು ಅತ್ಯಗತ್ಯವಾಗಿದೆ. ಯಾವುದೇ ಕಾರಣಕ್ಕೂ ಈ ಅವಕಾಶವನ್ನು ಪೋಷಕರು ಕೈಚೆಲ್ಲಬಾರದು ಎಂದು ಮಾಜಿ ಪಟ್ಟಣ ಪಂಚಾಯಿತಿ ಸದಸ್ಯ ಅಶೋಕ್ ಚಲವಾದಿ ಮನವಿ ಮಾಡಿದರು. ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ಪಟ್ಟಣ ಪಂಚಾಯಿತಿ, ರೋಟರಿ ಕ್ಲಬ್ ಹಾಗೂ ತಾಲೂಕು ಆರೋಗ್ಯ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಭಾನುವಾರ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮದ ಅಂಗವಾಗಿ ನಡೆದ ಉದ್ಘಾಟನಾ ಸಮಾರಂಭದಲ್ಲಿ ಮಗುವಿಗೆ ಪೋಲಿಯೋ ಹನಿ ಹಾಕುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಮುಖ್ಯ ಅತಿಥಿಯಾಗಿ ಮಾತನಾಡಿದ ಡಾ. ಪಿ.ಪಿ. ಛಬ್ಬಿ, ಭಾರತವು ಕಳೆದ 13 ವರ್ಷಗಳಿಂದ ಪೋಲಿಯೋ ಮುಕ್ತ ರಾಷ್ಟ್ರವಾಗಿ ಗುರುತಿಸಿಕೊಂಡಿರುವುದು ಹೆಮ್ಮೆಯ ಸಂಗತಿ ಎಂದರು. ಆದರೆ ಪಾಕಿಸ್ತಾನ ಹಾಗೂ ಆಫ್ಘಾನಿಸ್ತಾನದಲ್ಲಿ ಇನ್ನೂ ಪೋಲಿಯೋ ಪ್ರಕರಣಗಳು ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಅಗತ್ಯವಾಗಿದೆ. ದೇಶದ ಪೋಲಿಯೋ ಮುಕ್ತ ಸ್ಥಾನಮಾನವನ್ನು ಕಾಯ್ದುಕೊಳ್ಳಲು ಐದು ವರ್ಷದೊಳಗಿನ ಪ್ರತಿಯೊಂದು ಮಗುವಿಗೂ ತಪ್ಪದೇ ಪೋಲಿಯೋ ಲಸಿಕೆ ನೀಡಬೇಕು ಎಂದು ಅವರು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ತಾಲೂಕು ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ಸ್ವರೂಪರಾಣಿ ಪಾಟೀಲ್ ಮಾತನಾಡಿ, ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮದ ಉದ್ದೇಶ ಒಂದೇ ದಿನದಲ್ಲಿ ಐದು ವರ್ಷದೊಳಗಿನ ಎಲ್ಲ ಮಕ್ಕಳಿಗೂ ಪೋಲಿಯೋ ಹನಿ ನೀಡಿ ವೈರಾಣುವಿನ ಹರಡುವಿಕೆಯನ್ನು ತಡೆಯುವುದಾಗಿದೆ. ಪ್ರತಿಯೊಬ್ಬ ಪೋಷಕರೂ ತಮ್ಮ ಮಕ್ಕಳಷ್ಟೇ ಅಲ್ಲದೆ, ಸುತ್ತಮುತ್ತಲಿನ ಎಲ್ಲ ಮಕ್ಕಳಿಗೂ ಲಸಿಕೆ ದೊರೆಯುವಂತೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು. ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಎಸ್.ಎಸ್. ಪಟ್ಟಣಶೆಟ್ಟಿ ಕಾರ್ಯಕ್ರಮದ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿ, ಅತಿಥಿಗಳನ್ನು ಸ್ವಾಗತಿಸಿ ವಂದಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ನೋಡಲ್ ಅಧಿಕಾರಿ ಬಸವರಾಜ್ ಕಣ್ಣಕ್ನವರ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ (ಕಾರವಾರ) ಕಿರಣ್ ಕುಮಾರ್, ತಾಲೂಕು ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ಸ್ವರೂಪರಾಣಿ ಪಾಟೀಲ್, ಡಾ. ಶ್ರೀದೇವಿ ಹಿರೇಮಠ, ಡಾ. ಮಲ್ಲಿಕಾರ್ಜುನ, ಆರೋಗ್ಯ ಇಲಾಖೆ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಸಾರ್ವಜನಿಕರು ಹಾಗೂ ಮಕ್ಕಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ 