ಪೋಲಿಯೋ ಹನಿ ಕಾರ್ಯಕ್ರಮ ಯಶಸ್ವಿ
Polio honey program a success
ಬಳ್ಳಾರಿ 21: ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಂಗ ಸಂಸ್ಥೆಯಾದ ಚೇಂಬರ್ ಉಚಿತ ಆಸ್ಪತ್ರೆಯ ಸಭಾಂಗಣದಲ್ಲಿ ನಮ್ಮ ಕ್ಲಿನಿಕ್ ವತಿಯಿಂದ ಪೋಲಿಯೋ ಹನಿ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಲಾಯಿತು. ಕಾರ್ಯಕ್ರಮಕ್ಕೆ ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಅವ್ವಾರ್ ಮಂಜುನಾಥ್ ಹಾಗೂ ಗೌರವ ಕಾರ್ಯದರ್ಶಿಗಳಾದ ಶ್ರೀ ಕೆ.ಸಿ. ಸುರೇಶ್ ಬಾಬು ಅವರು ಭಾಗವಹಿಸಿ ಪೋಲಿಯೋ ಹನಿ ಹಾಕುವ ಮೂಲಕ ಕಾರ್ಯಕ್ರಮಕ್ಕೆ ಅಧಿಕೃತ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಚೇಂಬರ್ ಉಚಿತ ಆಸ್ಪತ್ರೆ ಚೇರ್ಮನ್, ಶ್ರೀ ಬಿ. ಸುರೇಂದ್ರ ಕುಮಾರ್, ಹಾಗೂ ನಮ್ಮ ಕ್ಲಿನಿಕ್ ನ ವೈದ್ಯಾಧಿಕಾರಿಗಳಾದ, ಡಾ ಅಭಿಷೇಕ್, ಮತ್ತು ಸಿಬ್ಬಂದಿ ವರ್ಗದವರು, ಹೆಚ್ಚಿನ ಸಂಖ್ಯೆಯಲ್ಲಿ ತಾಯಂದಿರು ತಮ್ಮ ಮಕ್ಕಳೊಂದಿಗೆ ಭಾಗವಹಿಸಿ ಮಕ್ಕಳಿಗೆ ಪೋಲಿಯೋ ಹನಿ ಹಾಕಿಸುವ ಮೂಲಕ ಕಾರ್ಯಕ್ರಮವನ್ನು ನೆರವೇರಿಸಿದರು. ಮಕ್ಕಳ ಆರೋಗ್ಯ ಮತ್ತು ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಸಾರ್ವಜನಿಕರು ತೋರಿದ ಉತ್ತಮ ಸಹಕಾರ ಶ್ಲಾಘನೀಯವಾಗಿದೆ. ಪೋಲಿಯೋ ರಹಿತ ಸಮಾಜ ನಿರ್ಮಾಣಕ್ಕೆ ಸಹಕರಿಸಿದ ಎಲ್ಲಾ ತಾಯಂದಿರಿಗೆ ನಮ್ಮ ಕ್ಲಿನಿಕ್ ವತಿಯಿಂದ ಧನ್ಯವಾದಗಳನ್ನು ಸಲ್ಲಿಸಲಾಯಿತು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 