ಕಿತ್ತಗಾನಹಳ್ಳಿ ಕೆರೆಗೆ ಮಾಲಿನ್ಯ: ರಾಜ್ಯ ಸರ್ಕಾರಕ್ಕೆ 10 ಲಕ್ಷ ರೂ.ದಂಡ ವಿಧಿಸಿ ಹಸಿರು ನ್ಯಾಯಾಧೀಕರಣ
ನವದೆಹಲಿ, ಜೂ.22, ಬೆಂಗಳೂರಿನ ಬೊಮ್ಮಸಂದ್ರ ವ್ಯಾಪ್ತಿಯ ಕಿತ್ತಗಾನಹಳ್ಳಿ ಕೆರೆಯ ಮಾಲಿನ್ಯ ತಡೆಗಟ್ಟಲು ವಿಫಲವಾದ ರಾಜ್ಯ ಸರ್ಕಾರಕ್ಕೆ ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ ದಂಡ ವಿಧಿಸಿದೆ. ನಿಯಮ ಉಲ್ಲಂಘಿಸಿದ ರಾಜ್ಯ ಸರ್ಕಾರಕ್ಕೆ ನ್ಯಾಯಾಧೀಕರಣ 10 ಲಕ್ಷ ರೂ. ದಂಡ ವಿಧಿಸಿ ತೀರ್ಪು ನೀಡಿದೆ. ಮಾಲಿನ್ಯ ನಿಯಂತ್ರಣ ಮಾಡುವಲ್ಲಿ ವಿಫಲವಾದ ಕರ್ನಾಟಕ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ, ನಿಯಮ ಪಾಲನೆ ಮಾಡುವಂತೆ ಸೂಚಿಸಿದೆ.ಮಾಲಿನ್ಯಕಾರಕ ವಸ್ತುಗಳು ಕೆರೆಯನ್ನು ಸೇರುತ್ತಿವೆ. ಸಂಸ್ಕರಿಸಿದ ಒಳಚರಂಡಿ ನೀರು, ಕೆರೆ ಪಾಲಾಗುತ್ತಿದೆ. ಇದರಿಂದ ಜನರ ಆರೋಗ್ಯದ ಮೇಲೆ ಪರಿಣಾಮ ಬೀರಲಿದೆ ಎಂದು ನ್ಯಾಯಾಧೀಕರಣ ಹೇಳಿದೆ.ಮಾಲಿನ್ಯ ತಡೆಯಲು ವಿಫಲವಾದ ಅಧಿಕಾರಿಗಳ ವಿರುದ್ಧ ಕ್ರಮಕ್ಕಾಗಿ ಅರ್ಜಿದಾರ ಸಂಜಯ್ ರಾವ್ ಎಂಬವರು ನ್ಯಾಯಾಧೀಕರಣದ ಗಮನಕ್ಕೆ ತಂದಿದ್ದರು. ಇದು ಕ್ರಿಮಿನಲ್ ಅಪರಾಧವಾಗಿದೆ ಎಂದು ಪೀಠ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ.ಪುರಸಭೆ ಮತ್ತು ರಾಜ್ಯ ಸರ್ಕಾರ, ಸುಪ್ರೀಂಕೋರ್ಟ್ ಮತ್ತು ಎನ್ ಜಿಟಿ ಆದೇಶವನ್ನು ಪಾಲಿಸಿಲ್ಲ. ಇದು ದುರದೃಷ್ಟಕರ ವಿಷಯ, ತಕ್ಷಣವೇ ತ್ವರಿತ ಪರಿಹಾರ ಪಡೆದುಕೊಳ್ಳಬೇಕಿದೆ. ಪರಿಸರಕ್ಕೆ ಹಾನಿ ಮಾಡಿದ ಕಾರಣಕ್ಕಾಗಿ ದಂಡ ಪಾವತಿ ಮಾಡಿ ಎಂದು ಹೇಳಿದ ನ್ಯಾಯಾಧೀಕರಣ, ಪುರಸಭೆಗೆ 5 ಲಕ್ಷ ಮತ್ತು ರಾಜ್ಯ ಸರ್ಕಾರಕ್ಕೆ 10 ಲಕ್ಷ ದಂಡ ಆದೇಶ ವಿಧಿಸಿ ಆದೇಶ ಹೊರಡಿಸಿದೆ.
ಬೈಲಹೊಂಗಲದಲ್ಲಿ ಮಳೆಯ ಅರ್ಭಟ : ನದಿಯಂತಾದ ರಸ್ತೆಗಳು, ನೀರಿನ ಸೆಳೆತಕ್ಕೆ ಸಿಲುಕಿದ ದ್ವಿಚಕ್ರ ವಾಹನಗಳು
ಕನ್ನಡಪರ ನಿರ್ಣಯಕ್ಕೆ ಹಿಂದೇಟು : ಪಾಲಿಕೆಯಲ್ಲಿ ನಿರ್ಣಯ ಮಂಡಿಸಲು ಮುಂದಾದ ಶಾಸಕ ಸೇಠ್
ಒಬ್ಬರಿಗೆ ಒಂದೇ ಹುದ್ದೆ ಕಾಂಗ್ರೆಸ್ ಪಕ್ಷದ ನಿಯಮದಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈ ತಪ್ಪಿದೆ : ಸಚಿವ ಸತೀಶ ಜಾರಕಿಹೊಳಿ
ಖಾತೆ ಮುಟ್ಟುಗೋಲಾದರೂ ಶಿವಂ ಸಂಸ್ಥೆಗೆ ಜನರಿಂದ ಇನ್ನೂ ದುಡ್ಡು ಠೇವಣಿ : ವಂಚನೆ ಜಾಲದಿಂದ ದೂರ ಇರಿ, ಜನರಿಗೆ ಸಿಐಡಿ ಡಿಐಜಿಪಿ ಗುಳೇದ್ ಮನವಿ
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ 