ಪೋಷಣ ಅಭಿಯಾನ, ಸ್ವಚ್ಛತೆಯೇ ಸೇವೆ ಮತ್ತು ಕೇಂದ್ರ ಸರ್ಕಾರದ ಯೋಜನೆಗಳ ಜಾಗೃತಿ ಕಾರ್ಯಕ್ರಮ
ಧಾರವಾಡ 28: ಭಾರತ ಸರ್ಕಾರದ ಕೇಂದ್ರ ಸಂವಹನ ಇಲಾಖೆ, ಧಾರವಾಡ ಹಾಗೂ ತಾಲೂಕು ಆಡಳಿತ, ತಾಲೂಕು ಪಂಚಾಯತ್, ಶಿಶು ಅಭಿವೃದ್ಧಿ ಯೋಜನೆ, ಆರೋಗ್ಯ ಇಲಾಖೆ, ಪೊಲೀಸ ಇಲಾಖೆ ಹಾಗೂ ಶಿಕ್ಷಣ ಇಲಾಖೆ, ಶಿರಹಟ್ಟಿ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರ, ವಿವಿಧ ಶಾಲೆಗಳು ಹಾಗೂ ಗ್ರಾಮ ಪಂಚಾಯತ, ಬೆಳ್ಳಟ್ಟಿ ಇವರ ಸಂಯುಕ್ತಾಶ್ರಯದಲ್ಲಿ ಪೋಷಣ ಅಭಿಯಾನ, ಸ್ವಚ್ಛತೆಯೇ ಸೇವೆ, ಹೊಸ ಕ್ರಿಮಿನಲ್ ಕಾನೂನುಗಳು, ಪ್ರಧಾನ ಮಂತ್ರಿ ಸೂರ್ಯ ಘರ್ ಯೋಜನೆ, ಪ್ರಧಾನ ಮಂತ್ರಿಯವರ ದೂರದೃಷ್ಟಿ-2047, ಏಕ್ ಭಾರತ- ಶ್ರೇಷ್ಠ ಭಾರತ ಹಾಗೂ ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಕುರಿತು ವಿಶೇಷ ಜಾಗೃತಿ ಕಾರ್ಯಕ್ರಮವನ್ನು ಸಪ್ಟೆಂಬರ್ 30 ರಂದು ಮದ್ಯಾಹ್ನ 01 ಗಂಟೆಗೆ ಬೆಳ್ಳಟ್ಟಿ ಗ್ರಾಮದ ಎ. ಪಿ. ಎಂ. ಸಿ. ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮವನ್ನು ಮಾಜಿ ಮುಖ್ಯಮಂತ್ರಿಗಳು ಹಾಗೂ ಸಂಸದರಾದ ಬಸವರಾಜ ಬೊಮ್ಮಾಯಿ ಅವರು ಉದ್ಘಾಟಿಸುವರು. ಶಿರಹಟ್ಟಿ ಶಾಸಕ ಡಾ.ಚಂದ್ರು ಕೆ. ಲಮಾಣಿ, ಗ್ರಾಮ ಪಂಚಾಯತ ಅಧ್ಯಕ್ಷರು, ಉಪಾಧ್ಯಕ್ಷರು, ಸರ್ವಸದಸ್ಯರು, ವಿವಿಧ ಇಲಾಖೆಯ ಅಧಿಕಾರಗಳು ಸ್ಥಳೀಯ ಸಾರ್ವಜನಿಕರು ಭಾಗವಹಿಸುವರು. ಈ ಕಾರ್ಯಕ್ರಮದ ಅಂಗವಾಗಿ ಅಂದು ಬೆಳಿಗ್ಗೆ 10.30 ಗಂಟೆಗೆ ಶಾಲಾ ವಿದ್ಯಾರ್ಥಿಗಳಿಂದ ಗ್ರಾಮದಲ್ಲಿ ಜಾಗೃತಿ ಜಾಥಾ, ಸ್ವಚ್ಛತೆಯೇ ಸೇವೆ ಭಾಗವಾಗಿ ಬಸ್ ನಿಲ್ದಾಣದ ಅವರಣದಲ್ಲಿ ಶ್ರಮದಾನ, ಪ್ರಧಾನ ಮಂತ್ರಿಯವರ ಆಶಯದಂತೆ ತಾಯಿಯ ಹೆಸರಲ್ಲಿ ಒಂದು ಸಸಿ ನೆಡುವ ಅಭಿಯಾನ, ಆಯುಷ್ಮಾನ ಕಾರ್ಡ ನೋಂದಣಿ, ಆರೋಗ್ಯ ತಪಾಸಣಾ ಶಿಬಿರ ಹಾಗೂ ವೇದಿಕೆ ಕಾರ್ಯಕ್ರಮ ಏರಿ್ಡಸಲಾಗಿದೆ ಎಂದು ಧಾರವಾಡದ ಕೇಂದ್ರ ಸಂವಹನ ಇಲಾಖೆಯ ಕಾರ್ಯಕ್ರಮ ಸಂಯೋಜಕರಾದ ಮುರಳಿಧರ ತುಕ್ಕಪ್ಪ ಕಾರಭಾರಿ ಪ್ರಕಟಣೆಯಲ್ಲಿ ತಳಿಸಿದ್ದಾರೆ.