ಪೋಷಣ ಮಾಸಾಚರಣೆ: ವಿವಿಧ ಜಾಗೃತಿ ಕಾರ್ಯಕ್ರಮ
Poshan Maah Celebration: Various Awareness Programs
ಗದಗ 25: ರಾಷ್ಟ್ರೀಯ ಪೋಷಣ ಅಭಿಯಾನದಡಿ ಪೋಷಣ ಮಾಸಾಚರಣೆ ಅಂಗವಾಗಿ ಗದಗ ನಗರದ ಶ್ರೀರಾಮನಗರದ ಸುಡುಗಾಡು ಸಿದ್ದರ ಸಮುದಾಯ ಭವನದಲ್ಲಿ ಶುಕ್ರವಾರ “ನಮ್ಮ ನಿರ್ದಿಷ್ಟ ಜವಾಬ್ದಾರಿ” ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಗರ್ಭಿಣಿಯರ ಸೀಮಂತ, ಅನ್ನಪ್ರಾಶನ ಹಾಗೂ “ಬೇಟಿ ಪಡಾವೋ” ಯೋಜನೆಯಡಿ ಹೆಣ್ಣು ಮಕ್ಕಳ ಜನ್ಮೋತ್ಸವ ಆಚರಿಸಲಾಯಿತು. ಇದೇ ಸಂದರ್ಭದಲ್ಲಿ ಪೋಷಣ ವಾಟಿಕಾ ಯೋಜನೆಯಡಿ ಅಂಗನವಾಡಿ ಆವರಣದಲ್ಲಿ ಗಿಡಗಳನ್ನು ನೆಡಲಾಯಿತು.
ಮೂರರಿಂದ ಆರು ವರ್ಷದ ಮಕ್ಕಳಿಗಾಗಿ ಮೆನು ಕುರಿತು ಪ್ರಾತ್ಯಕ್ಷಿಕೆ ನೀಡಲಾಯಿತು. ಸ್ಥಳೀಯ ಮುಖಂಡ ದುರ್ಗೇಶ್ ವಿಭೂತಿ ಮಾತನಾಡಿ, ತಾಯಿ ಮತ್ತು ಮಕ್ಕಳ ಆರೋಗ್ಯ ಕಾಪಾಡುವಲ್ಲಿ ಪೌಷ್ಟಿಕ ಆಹಾರದ ಮಹತ್ವವನ್ನು ವಿವರಿಸಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಿಡಿಪಿಒ ಸುರೇಖಾ ಮಲ್ಲಾಪುರ, ಫಾತಿಮಾ ಚಳಕೆ, ರೇಣುಕಾ ಮಾಗಡಿ, ಪೋಷಣ ಅಭಿಯಾನದ ಜಿಲ್ಲಾ ಸಹಾಯಕ ಪವನ್ ಕಟೇಗಾರ್, ಡಾ. ಕಬಾಡಿ, ಡಾ. ಕೊಪ್ಪಳ ಸೇರಿದಂತೆ ಅಧಿಕಾರಿಗಳು ಹಾಗೂ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು. ಆಆಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು, ಆಶಾ ಕಾರ್ಯಕರ್ತೆಯರು, ಮಹಿಳೆಯರು, ಮಕ್ಕಳು, ಪೋಷಕರು ಹಾಗೂ ಸ್ಥಳೀಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಗಣೇಶ ವಿಸರ್ಜನೆ ವೇಳೆ ದುರಂತ : ಬೆಳಗಾವಿಯ ಯುವಕ ನೀರಲ್ಲಿ ಮುಳುಗಿ ಸಾವು
ಚನ್ನಮ್ಮ ಪ್ರತಿಮೆ ಪ್ರತಿಷ್ಠಾಪನೆಗೆ ನವೆಂಬರ 1ರ ಗಡುವು ನೀಡಿದ ಕನ್ನಡ ಸಂಘಟನೆಗಳು
ಎನ್ಒಸಿ ನೀಡಲು ಲಂಚ : ಖಾನಾಪುರ ತಾಲೂಕು ಆರೋಗ್ಯಾಧಿಕಾರಿ ಲೋಕಾಯುಕ್ತ ಬಲೆಗೆ
ಅರ್ಧಕ್ಕೆ ನಿಂತ ಚನ್ನಮ್ಮ ಪ್ರತಿಮೆ ಕಾಮಗಾರಿ: ಅವ್ಯವಹಾರದ ಶಂಕೆ : ಲೆಕ್ಕ ಕೊಡಿ ಹೋರಾಟಕ್ಕೆ ಕನ್ನಡ ಹೋರಾಟಗಾರರು ಸಜ್ಜು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ 