ಪೋಷಣ್ ಮಾಸಾಚರಣೆ ಕಾರ್ಯಕ್ರಮ
ಮುಂಡಗೋಡ 16:ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ತಾಲೂಕು ಆಡಳಿತ, ತಾಲೂಕು ಪಂಚಾಯತ, ಶಿಶು ಅಭಿವೃದ್ಧಿ ಯೋಜನೆ ಹಾಗೂ ಇತರ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಪೋಷಣ ಅಭಿಯಾನ ಯೋಜನೆಯಡಿ ಪೋಷಣ್ ಮಾಸಾಚರಣೆ ಕಾರ್ಯಕ್ರಮವನ್ನು ತಾಲೂಕಿನ ಓರಲಗಿ(ಓಣಿಕೇರಿ) ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಬರುವ ಓಣಿಕೇರಿ ಅಂಗನವಾಡಿ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿತ್ತು.
ಈ ವೇಳೆ ಗ್ರಾ.ಪಂ.ಅಧ್ಯಕ್ಷ ಸುರೇಶ ಸುಭಾಂಜಿ, ಉಪಾಧ್ಯಕ್ಷ ಕುಬೇರ ಕೋಣನಕೇರಿ, ಎಪಿಎಮ್ಸಿ ಮಾಜಿ ಅಧ್ಯಕ್ಷ ಬಾಬಣ್ಣ ಕೋಣನಕೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೇಲ್ವಿಚಾರಕಿ ಮಂಜುಳಾ, ಉರ್ದು ಶಾಲೆಯ ಎಸ್ಡಿಎಮ್ಸಿ ಅಧ್ಯಕ್ಷ ಬಾಬಾಸಾಬ ಮನಿಯಾರ, ಪ್ರಾಥಮಿಕ ಶಾಲೆಯ ಎಸ್ಡಿಎಮ್ಸಿ ಅಧ್ಯಕ್ಷ ನಾಗರಾಜ ಕೋಣನಕೇರಿ, ಶಾಲಾ ಮುಖ್ಯೋಪಾಧ್ಯಾಯ, ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು, ಆಶಾ ಕಾರ್ಯಕರ್ತೆಯರು, ಶೌರ್ಯ ವಿಪತ್ತು ನಿರ್ವಹಣಾ ತಂಡದವರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.