ಮನರಂಜನೆ

ಪುನೀತ್ ರಾಜ್ ಕುಮಾರ್ ಗೆ ಮರಣೋತ್ತರ ಬಸವಶ್ರೀ ಪ್ರಶಸ್ತಿ ಘೋಷಣೆ

ಪುನೀತ್  ರಾಜ್ ಕುಮಾರ್ ಗೆ  ಮರಣೋತ್ತರ  ಬಸವಶ್ರೀ ಪ್ರಶಸ್ತಿ ಘೋಷಣೆ


ಚಿತ್ರದುರ್ಗ, ನ 4 : ಕನ್ನಡ ಚಿತ್ರರಂಗದ ಹೆಸರಾಂತ ನಟ ಪವರ್‌ಸ್ಟಾರ್ ದಿ| ಪುನೀತ್ ರಾಜಕುಮಾರ್ ಅವರಿಗೆ ಮರಣೋತ್ತರವಾಗಿ  ಜಗದ್ಗುರು ಮುರುಘ ರಾಜೇಂದ್ರ ಬೃಹನ್ಮಠದ ಪ್ರತಿಷ್ಠಿತ ೨೦೨೧ನೇ ಸಾಲಿನ ಬಸವಶ್ರೀ ಪ್ರಶಸ್ತಿ   ನೀಡಲಾಗುವುದು ಎಂದು ಡಾ. ಶಿವಮೂರ್ತಿ ಮುರುಘಾ ಶರಣರು  ಪ್ರಕಟಿಸಿದ್ದಾರೆ.

ಶ್ರೀಮಠದಲ್ಲಿ  ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ  ಮುರುಘಾ ಶರಣರು,  ಪುನೀತ್ ರಾಜಕುಮಾರ್ ಅವರು, ಬಾಲನಟನಾಗಿ, ನಾಯಕ ನಟನಾಗಿ, ಹಿನ್ನೆಲೆ ಗಾಯಕರಾಗಿ, ನಿರ್ಮಾಪಕರಾಗಿ ಕನ್ನಡ ಚಿತ್ರರಂಗಕ್ಕೆ ಅಪಾರ ಕೊಡುಗೆ   ನೀಡಿದ್ದಾರೆ. ಅಲ್ಲದೇ, ಕರ್ನಾಟಕ ರಾಜ್ಯ ಸರ್ಕಾರದ ವಿವಿಧ ಯೋಜನೆಗಳ ರಾಯಭಾರಿಯಾಗಿ, ಸಾಮಾಜಿಕ ಜಾಗೃತಿಯ ಪ್ರಚಾರಕರಾಗಿಯೂ ಸಮಾಜ ಸೇವೆ ಸಲ್ಲಿಸಿದ್ದಾರೆ ಎಂದು ನುಡಿದರು.

ಇಂತಹ ಮೇರುನಟ ಇತ್ತೀಚೆಗೆ ಹೃದಯಾಘಾತದಿಂದ ನಮ್ಮನ್ನು ಅಗಲಿರುವುದು ಕೋಟ್ಯಂತರ ಅಭಿಮಾನಿಗಳಿಗೆ ನೋವನ್ನುಂಟು ಮಾಡಿದೆ. ಅವರ ಕುಟುಂಬದವರು ನೋವನ್ನು ಸಹಿಸಿಕೊಳ್ಳಲು ಬಸವಾದಿ ಪ್ರಮಥರ ಆಶೀರ್ವಾದ ಸದಾ ಇರಲಿ. ಮಾನವೀಯ ಮೌಲ್ಯಗಳನ್ನೊಳಗೊಂಡಿದ್ದ ಪುನೀತ್ ಅವರ ಸಾಧನೆ ದೊಡ್ಡದು. ಚಿಕ್ಕ ವಯಸ್ಸಿನಲ್ಲಿಯೇ ಅದ್ವಿತೀಯ ಸಾಧನೆ ಮಾಡಿ ಹೋಗಿದ್ದಾರೆ ಎಂದರು 

ಪ್ರಶಸ್ತಿಯು ೫ ಲಕ್ಷ ನಗದು ಮತ್ತು ಪ್ರಶಸ್ತಿ ಫಲಕ ಒಳಗೊಂಡಿದೆ. ಪ್ರಶಸ್ತಿಯನ್ನು ಬರುವ ಬಸವ ಜಯಂತಿ ಕಾರ್ಯಕ್ರಮದಲ್ಲಿ ಪ್ರದಾನ ಮಾಡಲಾಗುವುದು  ಇದೇ ತಿಂಗಳು ೧೦ನೇ ತಾರೀಕು ಬೆಂಗಳೂರಿನ ಅವರ ಮನೆಗೆ ತೆರಳಿ ಕುಟುಂಬವರ್ಗದವರಿಗೆ ಸಾಂತ್ವನ ಹೇಳಲಾಗುವುದು ಎಂದರು.

ಈ  ಸಂದರ್ಭದಲ್ಲಿ  ಎಸ್.ಜೆ.ಎಂ. ವಿದ್ಯಾಪೀಠದ ಕಾರ‍್ಯದರ್ಶಿ ಎ.ಜೆ. ಪರಮಶಿವಯ್ಯ, ಆಡಳಿತ ಮಂಡಳಿ ಸದಸ್ಯ ಕೆಇಬಿ ಷಣ್ಣುಕಪ್ಪ ಇದ್ದರು.

ಸುದ್ದಿ ಓದಿ