ಅಧಿಕಾರ ಶಾಶ್ವತವಲ್ಲ, ಜನರ ಸೇವೆ ಮಾಡಿ: ಸವದಿ
Power is not permanent; serve the people: Savadi
ಅಧಿಕಾರ ಶಾಶ್ವತವಲ್ಲ, ಜನರ ಸೇವೆ ಮಾಡಿ: ಸವದಿ
ಅಥಣಿ 13: ಅಧಿಕಾರ, ಅಂತಸ್ತು ಶಾಶ್ವತವಲ್ಲ. ಅಧಿಕಾರದಲ್ಲಿರುವಾಗ ಸಾರ್ವಜನಿಕರ ಸೇವೆ ಮಾಡುವ ಮೂಲಕ ಒಳ್ಳೆಯ ಹೆಸರು ಗಳಿಸಿದಾಗ ಮಾತ್ರ ಅಧಿಕಾರದ ಸದುಪಯೋಗವಾಗುತ್ತದೆ ಎಂದು ಸಹಕಾರ ಸಚಿವ ಲಕ್ಷ್ಮಣ ಸವದಿ ಹೇಳಿದರು. ಅವರು ಅಥಣಿಯಲ್ಲಿ ನಡೆದ ‘ಪ್ರಜಾ ಸೇವೆ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. “ಮೊದಲು ಶಾಸಕನಾಗಿದ್ದೆ, ಈಗ ಸಚಿವನಾಗಿದ್ದೇನೆ. ಈ ಅಧಿಕಾರ ಯಾವಾಗ ಹೋಗುತ್ತದೆ ಎಂಬುದು ಗೊತ್ತಿಲ್ಲ. ಆದರೆ ಅಧಿಕಾರಾವಧಿಯಲ್ಲಿ ಮಾಡಿದ ಜನಪರ ಹಾಗೂ ಉತ್ತಮ ಕಾರ್ಯಗಳು ಮಾತ್ರ ಜನರ ಮನಸ್ಸಿನಲ್ಲಿ ಶಾಶ್ವತವಾಗಿ ಉಳಿಯುತ್ತವೆ” ಎಂದು ಹೇಳಿದರು. ಸರಕಾರಿ ಅಧಿಕಾರಿಗಳು ತಮ್ಮ ಅಧಿಕಾರವನ್ನು ಜವಾಬ್ದಾರಿ ಎಂದು ಭಾವಿಸಿ ಜನರ ಸೇವೆ ಮಾಡಬೇಕು. ಆಗ ಮಾತ್ರ ಜನ ಮೆಚ್ಚುವ ಅಧಿಕಾರಿಗಳಾಗಲು ಸಾಧ್ಯ ಎಂದರು. ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಕಂದಾಯ ನೀರೀಕ್ಷಕರು ಹಾಗೂ ಗ್ರಾಮ ಲೆಕ್ಕಾಧಿಕಾರಿಗಳು ಸರಕಾರಿ ನಿಯಮದಂತೆ ತಮ್ಮ ಕೇಂದ್ರ ಸ್ಥಾನಗಳಲ್ಲಿಯೇ ವಾಸ್ತವ್ಯ ಇರಬೇಕು. ಸಾರ್ವಜನಿಕರ ಅನುಕೂಲಕ್ಕಾಗಿ ಅಧಿಕಾರಿಗಳೇ ಜನರ ಬಳಿಗೆ ತೆರಳಬೇಕು. ಆದರೆ ಜನರು ತಮ್ಮ ಕೆಲಸಗಳಿಗಾಗಿ ಅಧಿಕಾರಿಗಳನ್ನು ಹುಡುಕಿಕೊಂಡು ಅಥಣಿಗೆ ಬರುವ ಪರಿಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ಅಧಿಕಾರಿಗಳು ತಮ್ಮ ಸೇವಾವಧಿಯಲ್ಲಿ ಸ್ಥಳೀಯವಾಗಿ ಲಭ್ಯವಿರಬೇಕು ಎಂದು ಸವದಿ ಸೂಚಿಸಿದರು. ಕಾರ್ಯಕ್ರಮದಲ್ಲಿ ಸಚಿವರು ನೂರಕ್ಕೂ ಹೆಚ್ಚು ಸಾರ್ವಜನಿಕರಿಂದ ಅರ್ಜಿಗಳನ್ನು ಸ್ವೀಕರಿಸಿ, ಆಯಾ ಇಲಾಖೆಗಳ ಅಧಿಕಾರಿಗಳ ಸಹಯೋಗದಲ್ಲಿ ಸ್ಥಳದಲ್ಲಿಯೇ ವಿಲೇವಾರಿ ಮಾಡಿದರು. ಚಿವಂದೇ ಮಾತರಂ ಗೀತೆಯೊಂದಿಗೆ ಆರಂಭವಾದ ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಸಿದರಾಯ ಭೋಸಗಿ, ತಾಲೂಕು ಪಂಚಾಯಿತಿ ಸಿಇಒ ಶಿವಾನಂದ ಕಲ್ಲಾಪುರ, ಪುರಸಭಾಧ್ಯಕ್ಷೆ ಶಿವಲೀಲಾ ಬುಟಾಳಿ, ಉಪಾಧ್ಯಕ್ಷೆ ಭುವನೇಶ್ವರಿ ಯಕ್ಕಂಚಿ, ಸ್ಥಾಯಿ ಸಮಿತಿ ಅಧ್ಯಕ್ಷ ದತ್ತಾ ವಾಸ್ಟರ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 