ವಿದ್ಯುತ್ ವ್ಯತ್ಯಯ ಜೂನ್ 4 ರಂದು

ವಿದ್ಯುತ್ ವ್ಯತ್ಯಯ ಜೂನ್ 4 ರಂದು Power outage on June 4th

 ಬೆಳಗಾವಿ, ಜೂನ್ 02: ಹುವಿಸಕಂನಿ ವತಿಯಿಂದ ತುರ್ತು ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳುತ್ತಿರುವುದರಿಂದ ಜೂನ್ 4 2026 ರಂದು ಬೆಳಿಗ್ಗೆ 9 ಘಂಟೆಯಿಂದ ಸಂಜೆ 5 ಘಂಟೆಯವರೆಗೆ 33 ಕೆ.ವ್ಹಿ. ಬಾಳೇಕುಂದ್ರಿ ಉಪಕೇಂದ್ರದಿಂದ ಸರಬರಾಜು ಆಗುವ ಕ್ಯಾಂಪ್‌ಬೆಲ್, ಮಾರಿಹಾಳ, ಕರಡಿಗುದ್ದಿ, ಪಂತಬಾಳೇಕುಂದ್ರಿ, ಬಾಳೇಕುಂದ್ರಿ, ಹೊನ್ನಿಹಾಳ, ಮಾವಿನಕಟ್ಟಿ, ತಾರಿಹಾಳ, ಚಂದನ ಹೊಸೂರ, ಎಮ್‌.ಇ.ಎಸ್, ಸಾಂಬ್ರಾ, ಮುತಗಾ, ಸುಳೇಭಾವಿ, ಪಂತ ನಗರ, ಮೋದಗಾ, ಯದ್ದಲಭಾವಿಹಟ್ಟಿ, ಖನಗಾಂವ, ಚಂದೂರ, ಚಂದಗಡ ಹಾಗೂ ಗಣಿಕೊಪ್ಪ ಗ್ರಾಮಗಳಿಗೆ ಹಾಗೂ ಸದರಿ ಗ್ರಾಮಗಳ ನೀರಾವರಿ ಪಂಪ್‌ಸೆಟ್‌ಗಳ ಪ್ರದೇಶಗಳಿಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಹುವಿಸಕಂನಿ ಕಾ ಮತ್ತು ಪಾ ಬೆಳಗಾವಿ ಗ್ರಾಮೀಣ ವಿಭಾಗದ ಕಾರ್ಯನಿರ್ವಾಹಕ ಇಂಜೀನೀಯರರು(ವಿ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.