ಸ್ಪರ್ಧಾತ್ಮಕ ಜಗತ್ತಿನಲ್ಲಿ ಯಶಸ್ಸಿಗೆ ಶಿಕ್ಷಣದ ಜತೆಗೆ ಪ್ರಾಯೋಗಿಕ ಕೌಶಲ್ಯ ಅಗತ್ಯ: ಗುರುಪಾದಯ್ಯ ಹಿರೇಮಠ
Practical skills alongside education are essential for success in a competitive world: Gurupadayya H
ಲೋಕದರ್ಶನ ವರದಿ
ವಿಜಯಪುರ, ಸೆ.1: ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಯಶಸ್ಸು ಸಾಧಿಸಲು ಕೇವಲ ಶಿಕ್ಷಣವಷ್ಟೇ ಸಾಲದು. ಪ್ರಾಯೋಗಿಕ ಕೌಶಲ್ಯಗಳನ್ನು ಬೆಳೆಸಿಕೊಳ್ಳುವುದು ಅತ್ಯಂತ ಅಗತ್ಯ ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಹಾಗೂ ಉದ್ಯೋಗಾಧಿಕಾರಿ ಗುರುಪಾದಯ್ಯ ಹಿರೇಮಠ ಹೇಳಿದರು.
ನಗರದ ಬಿ.ಎಲ್.ಡಿ.ಇ. ಸಂಸ್ಥೆಯ ಪದವಿ ಕಾಲೇಜಿನಲ್ಲಿ ಬಿಸಿಎ ವಿಭಾಗ ಹಾಗೂ ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆ ವತಿಯಿಂದ ಬಿಸಿಎ ದ್ವಿತೀಯ ಹಾಗೂ ಅಂತಿಮ ವರ್ಷದ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ನಾಲ್ಕು ದಿನಗಳ ಕೌಶಲ್ಯ ಮತ್ತು ಅಭಿವೃದ್ಧಿ ತರಬೇತಿ ಶಿಬಿರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಬದಲಾಗುತ್ತಿರುವ ತಂತ್ರಜ್ಞಾನಕ್ಕೆ ತಕ್ಕಂತೆ ಹೊಂದಿಕೊಳ್ಳಲು ಡಿಜಿಟಲ್ ವ್ಯವಸ್ಥೆ ಹಾಗೂ ಕ್ರಿಯಾತ್ಮಕ ಕೌಶಲ್ಯಗಳನ್ನು ಬೆಳೆಸಿಕೊಳ್ಳುವುದು ಅನಿವಾರ್ಯ. ಶಿಕ್ಷಣವು ನಮಗೆ ಸೈದ್ಧಾಂತಿಕ ಜ್ಞಾನವನ್ನು ನೀಡುತ್ತದೆ. ಆದರೆ ಆ ಜ್ಞಾನವನ್ನು ನೈಜ ಜೀವನದ ಸಮಸ್ಯೆಗಳಿಗೆ ಹೇಗೆ ಬಳಸಬೇಕು ಎಂಬುದನ್ನು ಕೌಶಲ್ಯಗಳು ಕಲಿಸಿಕೊಡುತ್ತವೆ ಎಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಡಾ. ಪಿ.ಡಿ. ಪೋಳ್ ಮಾತನಾಡಿ, ವಿದ್ಯಾರ್ಥಿಗಳು ನಾಲ್ಕು ದಿನಗಳ ತರಬೇತಿಯ ಸಂಪೂರ್ಣ ಪ್ರಯೋಜನ ಪಡೆದುಕೊಂಡು ತಮ್ಮ ಕೌಶಲ್ಯಗಳನ್ನು ವೃದ್ಧಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ವೇದಿಕೆಯಲ್ಲಿ ಸಂಪನ್ಮೂಲ ವ್ಯಕ್ತಿಗಳಾದ ಶ್ರೀನಿವಾಸ ಕುಲಕರ್ಣಿ, ಗೀರೀಶ ಕುಲಕರ್ಣಿ, ಮಂಜುನಾಥ ಅಂಗಡಿ, ಬಿಸಿಎ ವಿಭಾಗದ ಸಂಯೋಜಕ ಪ್ರೊ. ಬಸವರಾಜ ಗಲಗಲಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 