ತಾಳಿಕೋಟಿ

ಬಾವೂರ ಗ್ರಾಮದಲ್ಲಿ ಪ್ರಜಾ ಸೇವಾ ಆಂದೋಲನ ಸಭೆ

ಬಾವೂರ ಗ್ರಾಮದಲ್ಲಿ ಪ್ರಜಾ ಸೇವಾ ಆಂದೋಲನ ಸಭೆ


             ತಾಳಿಕೋಟಿ  15: ತಾಲೂಕಾ ಆಡಳಿತದ ವತಿಯಿಂದ ತಾಲೂಕಿನ ಬಾವೂರ ಗ್ರಾಮದಲ್ಲಿ ಪ್ರಜಾಸೇವಾ ಆಂದೋಲನ ಸಭೆಯನ್ನು ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಅಪ್ಪಾಜಿ ನಾಡಗೌಡರ ಅಧ್ಯಕ್ಷತೆಯಲ್ಲಿ ಶನಿವಾರ ಹಮ್ಮಿಕೊಳ್ಳಲಾಯಿತು.                            ಸಮಾರಂಭ ಉದ್ಘಾಟಿಸಿ ಮಾತನಾಡಿದ ಶಾಸಕ ಅಪ್ಪಾಜಿ ನಾಡಗೌಡರು ಸರ್ಕಾರದ ಸೇವೆ ಜನರ ಮನೆ ಬಾಗಿಲಿಗೆ ತಲುಪಿಸುವ ಉದ್ದೇಶದಿಂದ ನಮ್ಮ ಸರಕಾರವು ಜಾರಿಗೆ ತಂದಿರುವ ಈ ವಿನೂತನ ಕಾರ್ಯಕ್ರಮವು ಜನರಲ್ಲಿ ಜಾಗೃತಿ ಮೂಡಿಸಿ ಸರ್ಕಾರ ಮತ್ತು ಜನರ ನಡುವೆ ಉತ್ತಮ ಸಂಪರ್ಕ ಬೆಳೆಸುವ ಮಹತ್ವದ ಪ್ರಯತ್ನವಾಗಿದೆ ಎಂದರು.

           ನಂತರ ಅವರು ಸಾರ್ವಜನಿಕರಿಂದ ಅವಾಲುಗಳನ್ನು ಸ್ವೀಕರಿಸಿ ಇವುಗಳಿಗೆ ಸ್ಥಳದಲ್ಲಿ ಉಪಸ್ಥಿತರಿದ್ದ ಅಧಿಕಾರಿಗಳಿಂದ ಪರಿಹಾರವನ್ನು ನೀಡುವ ಪ್ರಯತ್ನವನ್ನು ಮಾಡಿದರು. ಸಭೆಯಲ್ಲಿ ಸುಮಾರು 75 ಕಿಂತಲೂ ಹೆಚ್ಚು ಅಹವಾಲಗಳನ್ನು ಸ್ವೀಕರಿಸಲಾಯಿತು. ಕಾರ್ಯಕ್ರಮದ ವೇದಿಕೆಯಲ್ಲಿ ಪ್ರಭಾರಿ ತಹಸಿಲ್ದಾರ್ ಎಂಎಸ್ ಅರಕೇರಿ,

              ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಅನುಸೂಯಾ ಚಲವಾದಿ, ಸಿಪಿಐ ಮೊಹಮ್ಮದ್ ಫಸಿವುದ್ದೀನ, ತಾಲೂಕ ಗ್ಯಾರಂಟಿ ಸಮಿತಿ ಅಧ್ಯಕ್ಷ ಸಂಗಮೇಶ ದೇಸಾಯಿ, ಪಿಎಸ್‌ಐ ಜ್ಯೋತಿ ಖೋತ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ತಾಲೂಕು ಆಡಳಿತ ವರ್ಗದ ಎಲ್ಲ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯತಿ ವ್ಯಾಪ್ತಿಗೆ ಬರುವ ಗ್ರಾಮಗಳ ಸಾವಿರಾರು ಸಾರ್ವಜನಿಕರು ಆಗಮಿಸಿದ್ದರು. 


ಸುದ್ದಿ ಓದಿ