ಬೆಳಗಾವಿ

17ರಂದು ಹಂದಿಗುಂದದಲ್ಲಿ ಪ್ರಜಾಸೇವೆ ಆಂದೋಲನ ಸಭೆ

17ರಂದು ಹಂದಿಗುಂದದಲ್ಲಿ ಪ್ರಜಾಸೇವೆ ಆಂದೋಲನ ಸಭೆ


ಪಾಲಬಾವಿ 15: ರಾಯಬಾಗ ತಾಲೂಕಿನ ಕುಡಚಿ ಮತಕ್ಷೇತ್ರದ ಹಂದಿಗುಂದ ಗ್ರಾಮದಲ್ಲಿ ಅಕ್ಟೋಬರ್ 17ರಂದು ಶನಿವಾರ ಪ್ರಜಾಸೇವೆ ಆಂದೋಲನ ಸಭೆ ನಡೆಯಲಿದೆ. ಗ್ರಾಮದ ಸಿದ್ದೇಶ್ವರ ವಿರಕ್ತ ಮಠದ ಸಮೀಪದ ಸಮುದಾಯ ಭವನದಲ್ಲಿ ಶಾಸಕ ಮಹೇಂದ್ರ ತಮ್ಮಣ್ಣವರ ನೇತೃತ್ವದಲ್ಲಿ ಬೆಳಿಗ್ಗೆ 10.30ಕ್ಕೆ ಸಭೆ ಆಯೋಜಿಸಲಾಗಿದೆ. ತಾಲೂಕು ಆಡಳಿತದ ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ತಹಸೀಲ್ದಾರ್ ಮಹಾದೇವ ಸನಮುರಿ, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಅರುಣ ಮಾಚಕನೂರ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಸಭೆಗೆ ಆಗಮಿಸಲಿದ್ದಾರೆ. ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿ, ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ಉದ್ದೇಶದಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಹಂದಿಗುಂದ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಮ್ಮ ಸಮಸ್ಯೆಗಳನ್ನು ಅಧಿಕಾರಿಗಳ ಗಮನಕ್ಕೆ ತರಬೇಕೆಂದು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶೋಭಾ ಪೂಜಾರಿ ಹಾಗೂ ಗ್ರಾಮ ಆಡಳಿತಾಧಿಕಾರಿ ಆನಂದ ಕಾಂಬಳೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 


ಸುದ್ದಿ ಓದಿ