ಪ್ರಜಾಸೇವಾ ಆಂದೋಲನ ಸಭೆ ಇಡೀ ದೇಶಕ್ಕೆ ಮಾದರಿ: ಶಾಸಕರ ಶ್ಲಾಘನೆ
Prajaseva Andolan meeting is a model for the whole country: MLAs praise
ಲೋಕದರ್ಶನ ವರದಿ
ಬಳ್ಳಾರಿ, ಸೆ.5 (ಕರ್ನಾಟಕ ವಾರ್ತೆ): ರಾಜ್ಯದಲ್ಲಿ ಜನರ ಮನೆ ಬಾಗಿಲಿಗೆ ಸರ್ಕಾರದ ಸೇವೆಗಳನ್ನು ತಲುಪಿಸುವ ಹಾಗೂ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಥಳೀಯವಾಗಿಯೇ ನಿಗದಿತ ಕಾಲಮಿತಿಯಲ್ಲಿ ಪರಿಹಾರ ಒದಗಿಸುವ ಉದ್ದೇಶದಿಂದ ಆರಂಭಿಸಿರುವ ಪ್ರಜಾಸೇವಾ ಆಂದೋಲನ ಸಭೆ ಇಡೀ ದೇಶಕ್ಕೆ ಮಾದರಿಯಾಗಲಿದೆ ಎಂದು ಬಳ್ಳಾರಿ ಗ್ರಾಮೀಣ ಶಾಸಕ ಬಿ. ನಾಗೇಂದ್ರ ಹಾಗೂ ನಗರ ಶಾಸಕ ನಾರಾ ಭರತ್ ರೆಡ್ಡಿ ಶ್ಲಾಘಿಸಿದರು.
ಬಳ್ಳಾರಿ ನಗರದ ಮುನ್ಸಿಪಲ್ ಮೈದಾನದಲ್ಲಿ ಶನಿವಾರ ನಡೆದ ಪ್ರಜಾಸೇವಾ ಆಂದೋಲನ ಸಭೆಯ ಚಾಲನಾ ಸಮಾರಂಭ ಉದ್ಘಾಟಿಸಿ ಮಾತನಾಡಿದ ಶಾಸಕ ಬಿ. ನಾಗೇಂದ್ರ, ಸಾರ್ವಜನಿಕರು ತಮ್ಮ ಸಣ್ಣಪುಟ್ಟ ಸಮಸ್ಯೆಗಳ ಪರಿಹಾರಕ್ಕಾಗಿ ಜಿಲ್ಲಾ ಕೇಂದ್ರ ಹಾಗೂ ರಾಜಧಾನಿಗೆ ಅಲೆದಾಡುವ ಪರಿಸ್ಥಿತಿ ಇನ್ನು ಮುಂದೆ ಇರಬಾರದು. ಸರ್ಕಾರವೇ ನೇರವಾಗಿ ಜನರ ಮನೆಬಾಗಿಲಿಗೆ ತಲುಪಿ, ಸ್ಥಳೀಯ ಸಮಸ್ಯೆಗಳನ್ನು ಕಾನೂನಿನ ಚೌಕಟ್ಟಿನೊಳಗೆ ನಿಗದಿತ ಅವಧಿಯಲ್ಲಿ ಪರಿಹರಿಸುವ ಉದ್ದೇಶದಿಂದ ಈ ಕಾರ್ಯಕ್ರಮ ರೂಪಿಸಲಾಗಿದೆ ಎಂದರು.
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ದೂರದೃಷ್ಟಿಯ ಯೋಜನೆಯಂತೆ ಪ್ರತ್ಯೇಕ ಇಲಾಖೆ ಹಾಗೂ ಸಚಿವಾಲಯವನ್ನು ಆರಂಭಿಸಿ ಅಗತ್ಯ ಹುದ್ದೆಗಳನ್ನು ಭರ್ತಿ ಮಾಡಲಾಗಿದೆ. ಪ್ರತಿ ಶನಿವಾರ ಅಧಿಕಾರಿಗಳು ನಿಗದಿತ ಸ್ಥಳಗಳಿಗೆ ಭೇಟಿ ನೀಡಿ ಸಾರ್ವಜನಿಕರ ಅಹವಾಲುಗಳನ್ನು ಆಲಿಸಲಿದ್ದಾರೆ. ಪಿಂಚಣಿ, ಭೂವಿವಾದ, ಮನೆ, ನಿವೇಶನ, ಪಂಚಗ್ಯಾರಂಟಿ ಯೋಜನೆಗಳು, ಸರ್ಕಾರಿ ಸೌಲಭ್ಯಗಳು ಹಾಗೂ ಖಾತೆ ಬದಲಾವಣೆ ಸೇರಿದಂತೆ ವಿವಿಧ ಸಮಸ್ಯೆಗಳ ಅರ್ಜಿಗಳನ್ನು ಸ್ವೀಕರಿಸಿ ನಿಗದಿತ ಕಾಲಮಿತಿಯಲ್ಲಿ ಪರಿಹಾರ ಒದಗಿಸಲಾಗುವುದು ಎಂದು ತಿಳಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 