ಕೊವಿಡ್ ನಿಯಂತ್ರಣಕ್ಕೆ ಮುಂದಾದ ಮಾಜಿ ಸಂಸದ ಪ್ರಕಾಶ ಹುಕ್ಕೇರಿ
ಚಿಕ್ಕೋಡಿ: ಗಡಿ ಭಾಗದಲ್ಲಿ ಕೊರೊನಾ ಎರಡನೆ ಅಲೆ ಹವ್ಯಾಹತವಾಗಿ ಹಬ್ಬುತ್ತಿದೆ. ಹೀಗಾಗಿ ಚಿಕ್ಕೋಡಿ ತಾಲೂಕಿನಲ್ಲಿ ಸಮರ್ಪಕ ಆರೋಗ್ಯ ಸೇವೆ ಸಿಗಬೇಕೆನ್ನುವ ಉದ್ದೇಶದಿಂದ ಮಾಜಿ ಸಂಸದ ಪ್ರಕಾಶ ಹುಕ್ಕೇರಿ ಹಾಗೂ ಶಾಸಕ ಗಣೇಶ ಹುಕ್ಕೇರಿ ಅವರು ಅನ್ನಪೂಣರ್ೇಶ್ವರಿ ಫೌಂಡೇಶನ್ ವತಿಯಿಂದ 14 ಜನ ಆರೋಗ್ಯ ಸಿಬ್ಬಂದಿಗಳನ್ನು ನೇಮಕಾತಿ ಮಾಡಿಕೊಂಡು ಕೊರೊನಾ ನಿಯಂತ್ರಿಸಲು ಮುಂದಾಗಿದ್ದಾರೆ.ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಸೂಕ್ತ ಚಿಕಿತ್ಸೆ ಇಲ್ಲದೆ ಅನೇಕ ಅಮಾಯಕರು ಸಾವನ್ನಪ್ಪುತ್ತಿದ್ದು, ಇದನ್ನು ಗಮನದಲ್ಲಿಟ್ಟುಕೊಂಡು ಚಿಕ್ಕೋಡಿ ತಾಲೂಕಿನಲ್ಲಿ ಸೋಂಕು ಹರಡುವಿಕೆಯನ್ನು ಕಡಿಮೆ ಮಾಡುವ ದೃಷ್ಟಿಯಿಂದ ಅನ್ನಪೂಣರ್ೇಶ್ವರಿ ಫೌಂಡೇಶನ್ ವತಿಯಿಂದ 14 ಜನ ನುರಿತ ಸಿಬ್ಬಂದಿಗಳನ್ನು ನೇಮಕಾತಿ ಮಾಡಿಕೊಂಡಿದ್ದಾರೆ.
ತಾಲೂಕಿನ ಯಕ್ಸಂಬಾ ಪಟ್ಟಣದಲ್ಲಿ ಆರೋಗ್ಯ ಸಿಬ್ಬಂದಿಗಳ ನೇಮಕ ಮಾಡಿಕೊಂಡು ವೈದ್ಯರ ಜೊತೆ ಮಾತುಕತೆ ನಡೆಸಿದ ಮಾಜಿ ಸಂಸದ ಪ್ರಕಾಶ ಹುಕ್ಕೇರಿ ಅವರು, ಕೊರೊನಾ ಸೋಂಕಿತರ ಹಾಗೂ ಇತರೆ ರೋಗಿಗಳ ಸೂಕ್ತ ಚಿಕಿತ್ಸೆ ನೀಡುವ ನಿಟ್ಟಿನಲ್ಲಿ ಯಕ್ಸಂಬಾ ಸಮುದಾಯ ಆರೋಗ್ಯ ಕೇಂದ್ರ ಹಾಗೂ ಅಂಕಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸಲು ಇಬ್ಬರು ಎಂಬಿಬಿಎಸ್ ವೈದ್ಯಾಧಿಕಾರಿಗಳು, 6 ಜನ ನರ್ಸಗಳು ಹಾಗೂ 6 ಜನ ಡಿ-ಗ್ರುಪ್ ಸಿಬ್ಬಂದಿಗಳು ಹೀಗೆ ಒಟ್ಟು 14 ಜನ ಸಿಬ್ಬಂದಿಗಳನ್ನು ಶ್ರೀ ಅನ್ನಪೂಣರ್ೇಶ್ವರಿ ಫೌಂಡೇಶನ ವತಿಯಿಂದ ನೇಮಕಾತಿ ಮಾಡಿಕೊಂಡಿದ್ದು, ವೈದ್ಯರು ಪ್ರಾಮಾಣಿಕ ಸೇವೆ ಸಲ್ಲಿಸಬೇಕು ಎಂದರು.
ಅಲ್ಲದೇ ಯಕ್ಸಂಬಾ ಆರೋಗ್ಯ ಕೇಂದ್ರದಲ್ಲಿ ಔಷಧಿಗಳು ಲಭ್ಯವಿಲ್ಲದೆ ಇದ್ದಲ್ಲಿ ಅಂತಹ ಗ್ರಾಮದಲ್ಲಿ ಔಷಧಿಗಳನ್ನು ಮಾನೆ & ಭೋಪಳೆ ಮೇಡಿಕಲ್ ಅಂಗಡಿಗಳಲ್ಲಿ ಆಸ್ಪತ್ರೆಯಲ್ಲಿನ ಚೀಟಿಯನ್ನು ತೋರಿಸಿ ಉಚಿತವಾಗಿ ಔಷಧಿಗಳನ್ನು ಪಡೆದುಕೊಳ್ಳಲು ಸೂಚಿಸಬೇಕು. ಈಗಾಗಲೇ ಅನ್ನಪೂಣರ್ೇಶ್ವರಿ ಫೌಂಡೇಶನ್ ವತಿಯಿಂದ ಈಗಾಗಲೇ ಚಿಕ್ಕೋಡಿ ಆಸ್ಪತ್ರೆಯಲ್ಲಿ ಊಟದ ವ್ಯವಸ್ಥೆ ಮಾಡಲಾಗಿದ್ದು, ಅದರಂತೆ ಯಕ್ಸಂಬಾ & ಅಂಕಲಿ ಆರೋಗ್ಯ ಕೇಂದ್ರಗಳಲ್ಲಿಯು ಕೂಡ ಊಟದ ವ್ಯವಸ್ಥೆ ಮಾಡಲಾಗುತ್ತದೆ ಎಂದರು.
ಸಾರ್ವಜನಿಕರಿಗೆ ಸಮರ್ಪಕ ಮಾಹಿತಿ ನೀಡಲು ಒತ್ತಾಯ: ಚಿಕ್ಕೋಡಿ ಲೋಕಸಭಾ ಮತಕ್ಷೇತ್ರದ ವ್ಯಾಪ್ತಿಯಲ್ಲಿನ ಸಾರ್ವಜನಿಕ ಸಕರ್ಾರಿ ಆಸ್ಪತ್ರೆಗಳಲ್ಲಿ ಹಾಗೂ ಖಾಸಗಿ ಆಸ್ಪತ್ರಗಳಲ್ಲಿ ದಿನನಿತ್ಯ ಹೊಸದಾಗಿ ಆಸ್ಪತ್ರೆಗಳಿಗೆ ದಾಖಲಾಗುತ್ತಿರುವ, ಗುಣಮುಖರಾಗಿ ಡಿಸ್ಚಾರ್ಜ ಆಗುತ್ತಿರುವ ಹಾಗೂ ದಿನನಿತ್ಯ ಎಷ್ಟು ಜನ ಸೋಂಕಿತರು ಮರಣ ಹೊಂದುತ್ತಿದ್ದಾರೆ ಎಂಬುದರ ಬಗ್ಗೆ ಯಾವುದೇ ರೀತಿಯ ಮಾಹಿತಿ ಸಾರ್ವಜನಿಕರಿಗೆ ತಲುಪುತ್ತಿಲ್ಲ.
ಇದರಿಂದಾಗಿ ಸಾರ್ವಜನಿಕರು ಕೂಡ ರಸ್ತೆ-ಬೀದಿಗಳಲ್ಲಿ ಸೋಂಕು ಹರಡುವ ಭಯವಿಲ್ಲದೆ ನಿರ್ಲಕ್ಷವಾಗಿ ಬೇಕಾ ಬಿಟ್ಟಿಯಾಗಿ ಓಡಾಡುತ್ತಿರುವುದು ಕೂಡ ಎದ್ದು ಕಾಣುತ್ತಿದೆ. ಆದ್ದರಿಂದ ದಿನನಿತ್ಯ ಸಕರ್ಾರಿ ಆಸ್ಪತ್ರೆ ಹಾಗೂ ಖಾಸಗಿ ಆಸ್ಪತ್ರಗಳಲ್ಲಿನ ಸೋಂಕಿತರ ವಿವರಣೆಯನ್ನು ಪತ್ರಿಕಾ ಮಾಧ್ಯಮಗಳಲ್ಲಿ ಭಿತ್ತರಿಸಿ ಸಾರ್ವಜನಿಕರಿಗೆ ಮಾಹಿತಿ ತಲುಪುವಂತೆ ಮಾಡಲು ಸಂಬಂಧಪಟ್ಟವರಿಗೆ ಸೂಕ್ತ ನಿದರ್ೇಶನ ನೀಡಲು ಆರೋಗ್ಯ ಸಚಿವರಿಗೆ ಪತ್ರ ಬರೆದು ಮನವಿ ಮಾಡಿಕೊಳ್ಳಲಾಗಿದೆ ಎಂದು ಮಾಜಿ ಸಂಸದ ಪ್ರಕಾಶ ಹುಕ್ಕೇರಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.