ಪುತ್ರನಿಗೆ ರಾಷ್ಟ್ರಗೀತೆ ಹೇಳಿಕೊಟ್ಟ ನಟ ಪ್ರಕಾಶ್ ರಾಜ್
ಬೆಂಗಳೂರು, ಮಾ.29, ಕೊರೊನಾ ವೈರಸ್ ಸೋಂಕು ತಡೆಗಟ್ಟಲು ದೇಶಾದ್ಯಂತ ಲಾಕ್ ಡೌನ್ ಮಾಡಲಾಗಿದ್ದು, ಭಾರತ ನಿವಾಸಿಗಳೆಲ್ಲ ಮನೆಯಲ್ಲೇ ಕಾಲ ಕಳೆಯುವಂತಾಗಿದೆ.ಈಗಾಗಲೇ ಚಲನಚಿತ್ರ ಚಿತ್ರೀಕರಣವನ್ನು ಮೊಟಕುಗೊಳಿಸಲಾಗಿದ್ದು, ಎಲ್ಲಾ ಸ್ಟಾರ್ ನಟ-ನಟಿಯರು ತಮ್ಮ ಕುಟುಂಬದವರ ಜೊತೆಯಲ್ಲಿ ಕಾಲ ಕಳೆಯುತ್ತಿದ್ದಾರೆ.ಬಹುಭಾಷಾ ನಟ ಪ್ರಕಾಶ್ ರಾಜ್ ಅವರು ಕೂಡ ತಮ್ಮ ಕುಟುಂಬಸ್ಥರೊಂದಿಗೆ ಕಾಲ ಹರಣ ಮಾಡುತ್ತಿದ್ದಾರೆ.
ಪ್ರಕಾಶ್ ರಾಜ್ ಅವರು ಲಾಕ್ ಡೌನ್ ಆದ ಹಿನ್ನೆಲೆಯಲ್ಲಿ ತಮ್ಮ ಪುತ್ರನಿಗೆ ರಾಷ್ಟ್ರಗೀತೆ ಹೇಳಿಕೊಟ್ಟಿರುವ, ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.ಪ್ರಕಾಶ್ ರಾಜ್ ಅವರು, ಮನೆಯಲ್ಲಿದ್ದು, ಸುತ್ತಮುತ್ತಲಿನವರನ್ನು ಕಾಪಾಡುವಂತೆ ಮನವಿ ಮಾಡಿದ್ದಾರೆ. ವೈರಸ್ ಯಾವತ್ತೂ ಹರಡುವುದಿಲ್ಲ. ನಾವೇ ಅದನ್ನು ಹರಡುತ್ತೇವೆ. ಹೀಗಾಗಿ ಎಲ್ಲರೂ ಮನೆಯಲ್ಲೇ ಇರಿ ಎಂದು ವಿನಂತಿಸಿಕೊಂಡಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 