ಕಾರವಾರ

ಕಾರವಾರದಲ್ಲಿ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಶುಭಾರಂಭ

ಕಾರವಾರದಲ್ಲಿ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಶುಭಾರಂಭ


           ಕಾರವಾರ 07: ನಗರದ ಡಾ. ಪಿಕಳೆ ರಸ್ತೆಯಲ್ಲಿ ನೂತನವಾಗಿ ಆರಂಭಗೊಂಡಿರುವ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆಯ ಉದ್ಘಾಟನಾ ಸಮಾರಂಭ ಶುಕ್ರವಾರ ಸಂಭ್ರಮದಿಂದ ನೆರವೇರಿತು. ಸೋದೆ ವಾದಿರಾಜ ಮಠದ ವಿಶ್ವವಲ್ಲಭ ತೀರ್ಥ ಸ್ವಾಮೀಜಿಯವರ ದಿವ್ಯ ಸಾನ್ನಿಧ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ನೂತನ ಆಸ್ಪತ್ರೆಯನ್ನು ಉದ್ಘಾಟಿಸಿ, ಸಂಸ್ಥೆಯ ಬೆಳವಣಿಗೆ ಹಾಗೂ ಜನಸೇವೆಯ ಕಾರ್ಯಕ್ಕೆ ಶುಭ ಹಾರೈಸಿದರು.

        ಈ ಸಂದರ್ಭದಲ್ಲಿ ಆಶೀರ್ವಚನ ನೀಡಿದ ಸ್ವಾಮೀಜಿಯವರು, ಆಸ್ಪತ್ರೆಯು ಉತ್ತಮ ವೈದ್ಯಕೀಯ ಸೇವೆಯ ಮೂಲಕ ಜನರಿಗೆ ಅನುಕೂಲವಾಗಲಿ ಎಂದು ಹಾರೈಸಿದರು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಕೇಂದ್ರ ಸಚಿವ ಶ್ರೀಪಾದ ನಾಯಕ್ ಅವರು ನೂತನ ಆಸ್ಪತ್ರೆಯ ಆರಂಭಕ್ಕೆ ಅಭಿನಂದನೆ ಸಲ್ಲಿಸಿ, ಶುಭ ಹಾರೈಸಿದರು. '

        ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮಾತನಾಡಿ, ಅತ್ಯಾಧುನಿಕ ಯಂತ್ರೋಪಕರಣಗಳು ಹಾಗೂ ಸುಸಜ್ಜಿತ ಸೌಲಭ್ಯಗಳನ್ನು ಹೊಂದಿರುವ ಈ ಕಣ್ಣಿನ ಆಸ್ಪತ್ರೆಯು ಉತ್ತರ ಕನ್ನಡ ಸೇರಿದಂತೆ ಸುತ್ತಮುತ್ತಲಿನ ಭಾಗದ ಜನರಿಗೆ ಉತ್ತಮ ನೇತ್ರ ಚಿಕಿತ್ಸಾ ಸೇವೆ ಪಡೆಯಲು ಅನುಕೂಲವಾಗಲಿದೆ ಎಂದರು.

              ಉತ್ತಮ ನೇತ್ರ ಆರೈಕೆ ಮತ್ತು ಅತ್ಯಾಧುನಿಕ ವೈದ್ಯಕೀಯ ಸೇವೆಯನ್ನು ಜನರಿಗೆ ತಲುಪಿಸುವ ಈ ಪ್ರಯತ್ನ ಶ್ಲಾಘನೀಯವಾಗಿದ್ದು, ಸಂಸ್ಥೆಗೆ ಯಶಸ್ಸು ಸಿಗಲಿ ಎಂದು ಹಾರೈಸಿದರು. ಕಾರ್ಯಕ್ರಮದಲ್ಲಿ ಶಾಸಕ ಸತೀಶ್ ಸೈಲ್, ಆಸ್ಪತ್ರೆಯ ಸಂಸ್ಥಾಪಕ ಡಾ. ಕೃಷ್ಣಪ್ರಸಾದ್ ಕೂಡ್ಲು, ಆಸ್ಪತ್ರೆಯ ನಿರ್ದೇಶಕರು, ವೈದ್ಯರು ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು. 


ಸುದ್ದಿ ಓದಿ