ಇಂಡಿ

ಮಕ್ಕಳ ಪ್ರತಿಭೆಯನ್ನು ಅನಾವರಣ ಗೊಳಿಸುವುದೇ ಪ್ರತಿಭಾ ಕಾರಂಜಿ ಉದ್ದೇಶ: ಆನಂದ.ಸಿ. ಹುಣಸಿಗಿ

ಮಕ್ಕಳ ಪ್ರತಿಭೆಯನ್ನು ಅನಾವರಣ ಗೊಳಿಸುವುದೇ ಪ್ರತಿಭಾ ಕಾರಂಜಿ ಉದ್ದೇಶ: ಆನಂದ.ಸಿ. ಹುಣಸಿಗಿ

ಇಂಡಿ, 19 :ಮಕ್ಕಳಲ್ಲಿರುವ ಸುಪ್ತ ಪ್ರತಿಭೆಯನ್ನು ಅನಾವರಣಗೊಳಿಸುವುದೇ ಪ್ರತಿಭಾ ಕಾರಂಜಿ ಕಾರ್ಯಕ್ರಮ ಉದ್ದೇಶವಾಗಿದೆ’ ಎಂದು ತಾಲೂಕು ಕ್ಷೇತ್ರ ಶಿಕ್ಷಣ ಇಲಾಖೆ ಇಸಿಒ ಹಾಗೂ ಇಂಡಿ ತಾಲೂಕು ಪ್ರತಿಭಾ ಕಾರಂಜಿ ನೋಡಲ್ ಅಧಿಕಾರಿ ಆನಂದ.ಸಿ. ಹುಣಸಿಗಿ ಹೇಳಿದರು. 

ಅವರು ಇಂಡಿ ತಾಲ್ಲೂಕಿನ ತಡವಲಗಾ ಗ್ರಾಮದ ಮರುಳಸಿದ್ದೇಶ್ವರ ಪ್ರೌಡ ಶಾಲೆ ಆವರಣದಲ್ಲಿ ನಡೆದ 2023-24 ನೇ ಸಾಲಿನ ವಲಯ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು  ಉದ್ಘಾಟಿಸಿ ಅವರು ಮಾತನಾಡಿದರು. 

ಸ್ಥಳೀಯ ಜನಪದ ನೃತ್ಯ ಮತ್ತು ಗಾಯನ, ಚಿತ್ರಕಲೆ, ಪ್ರಬಂಧ, ಚರ್ಚಾಸ್ಪರ್ಧೆ, ಏಕಾಪಾತ್ರಾಭಿನಯ, ಸಾಮಾಜಿಕ ಮತ್ತು ಪೌರಾಣಿಕ ನಾಟಕಗಳು ಅನೇಕ ಕಲಾತ್ಮಕ ಸಾಂಸ್ಕೃತಿಕ ಚಟುವಟಿಕೆಗಳು ಪ್ರತಿಭಾ ಕಾರಂಜಿ ವ್ಯಾಪ್ತಿಯಲ್ಲಿ ಬರುವುದರಿಂದ ಕಾರ್ಯಕ್ರಮದಲ್ಲಿ ಭಾಗವಹಿಸುವುದರ ಜತೆಗೆ ವಿದ್ಯಾರ್ಥಿಗಳಲ್ಲಿ ಕಲಾ ಅಭಿರುಚಿಯ ಸಾಮರ್ಥ್ಯವನ್ನು ಸಾಬೀತು ಮಾಡಲು ಇದೊಂದು ಉತ್ತಮ ವೇದಿಕೆ’ ಎಂದು ಹೇಳಿದರು. 

ನಂತರ ಮಾತನಾಡಿದ ಮುಖ್ಯಗುರುಗಳಾದ ಡಾ, ಕಾಂತು ಇಂಡಿ ಅವರು  ಪ್ರತಿಭಾ ಕಾರಂಜಿ ಎಂಬುದು ಕಲಾ ಪ್ರತಿಭೆಗಳ ಚಿಣ್ಣರ ಹಬ್ಬ, ಪೋಷಕರಿಗಲ್ಲದೆ ಸಾರ್ವಜನಿಕರು ಖುಷಿ ಪಡುವ ಹಬ್ಬ. ಮಕ್ಕಳ ಪ್ರತಿಭೆಯನ್ನು ತಂದೆ ತಾಯಿಗಳು ಹತ್ತಿರದಿಂದ ಕಣ್ಮುಂಬಿಕೊಳ್ಳುವ ವೇದಿಕೆಯಾಗಿದೆ. ತಾಲ್ಲೂಕು, ಜಿಲ್ಲಾ ಮತ್ತು ರಾಜ್ಯ ಮಟ್ಟದವರೆಗೆ ಸ್ಪರ್ಧೆ ಇರುವುದರಿಂದ ಶಾಲೆ ಶಿಕ್ಷಕರು ಉತ್ತಮ ತರಬೇತಿ ನೀಡಿ ಸಜ್ಜುಗೊಳಿಸಬೇಕು. ಸರ್ಕಾರ ಮಕ್ಕಳ ಹಿತದೃಷ್ಟಿಯಿಂದ ಅನೇಕ ಯೋಜನೆಗಳನ್ನು ಜಾರಿ ಮಾಡಿ ಗುಣಮಟ್ಟದ ಶಿಕ್ಷಣಕ್ಕೆ ಪ್ರಯತ್ನಿಸುತ್ತಿದೆ. ಇದರ ಪ್ರಯೋಜನ ಪಡೆದುಕೊಳ್ಳಬೇಕು’ ಎಂದು ಸಲಹೆ ನೀಡಿದರು.ಪ್ರಾಸ್ತಾವಿಕವಾಗಿ ಮಾತನಾಡಿದ ರಮೇಶ ಮಂಜಣಿ ಅವರು‘22 ವರ್ಷಗಳಿಂದ ಸರ್ಕಾರವು ಶಿಕ್ಷಣ ಇಲಾಖೆ ಮೂಲಕ ಸರ್ಕಾರಿ  ಖಾಸಗಿ ಶಾಲೆಗಳ ಒಂದ ರಿಂದ 10ನೇ ತರಗತಿ ಮಕ್ಕಳಿಗೆ ಪ್ರತಿಭಾ ಕಾರಂಜಿ ಕಾರ್ಯಕ್ರಮದ ಮೂಲಕ ಅವರ ಪ್ರತಿಭೆ ಗುರುತಿಸುತ್ತಿದೆ. ಇದರ ಮೂಲಕ ಗ್ರಾಮೀಣ ಸೊಗಡಿನ ಸಾಂಸ್ಕೃತಿಕ ವೈಭವವನ್ನು ಇನ್ನಷ್ಟು ಗಟ್ಟಿಗೊಳಿಸುವ ಪ್ರಯತ್ನ ಮಾಡುತ್ತಿದೆ. ಮನೋರಂಜನಾತ್ಮಕ ಕಾರ್ಯಕ್ರಮದಿಂದ ಶೈಕ್ಷಣಿಕ ಗುಣಮಟ್ಟದ ಫಲಿತಾಂಶಕ್ಕೂ ಸಹಕಾರಿಯಾಗಲಿದೆ’ ಎಂದು ಹೇಳಿದರು.ಇದೇ ಸಂದರ್ಭದಲ್ಲಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ತಡವಲಗಾ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಸುನಂದಾ ವಾಲಿಕಾರ  ಅವರು, ಕೇವಲ ನಾಲ್ಕು ಗೊಡೆಯ ವರ್ಗ ಕೋಣೆಯಲ್ಲಿ ಶಿಕ್ಷಣ ಕೊಡುವುದಕ್ಕಿಂತ, ಸಾರ್ವಜನಿಕ ವೇದಿಕೆ ಕಲ್ಪಿಸಿ , ಸ್ಪರ್ಧಾತ್ಮಕ ಯುಗದಲ್ಲಿ  ಸಾರ್ವಜನಿಕ ಬದುಕಿನ ಬಗ್ಗೆ ಅರಿವು ಮೂಡಿಸುವುದರ ಜೊತೆಗೆ ಸಮಾಜದ ಮುಖ್ಯ ವಾಹಿನಿಯಲ್ಲಿ ವಿಧ್ಯಾರ್ಥಿಗಳ ಪಾತ್ರದ ಬಗ್ಗೆ ತಿಳಿಹೇಳಬೇಕು ಎಂದು ಹೇಳಿದರು.ಈ ಸಂದರ್ಭದಲ್ಲಿ ಅಖಕ ಪ್ರಕಾಶ್ ರಾಠೋಡ, ಮುಖ್ಯ ಗುರುಗಳಾದ ಎಸ್ ಜಿ ನಾರಯಣಕ, ಟಿ ಎಸ್ ಜಂಬಗಿ, ಎಸ್ ಸಿ ಗೀಡಗಂಟಿ, ಎಮ್ ಜಿ ರೋಳ್ಳಿ,ಅನೀತಾ ರಾಠೋಡ,ಜಿ ಎಸ್ ಗೌರ, ಎಸ್ ಕೆ ಲಾಳಸಂಗಿ, ಹಾಗೂ ಅರವಿಂದ್ ಕಲಕೇರಿ ಹಾಗೂ ವಿದ್ಯಾರ್ಥಿ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು. ಪಿ ಸಿ ಬಗಲಿ ಕಾರ್ಯಕ್ರಮ ನಿರೂಪಿಸಿದರು ಹಾಗೂ ಆನಂದ ಮೋರೆ ವಂದಿಸಿದರು. 


ಸುದ್ದಿ ಓದಿ