ಆಸಕ್ತಿಗನುಗುಣವಾದ ಕಲೆಯನ್ನು ಬೆಳೆಸಿಕೊಳ್ಳಲು ಪ್ರತಿಭಾ ಕಾರಂಜಿಯಿಂದ ಸಾಧ್ಯ: ಬೆಳಗಲ್
Pratibha Karanji can help develop art based on interest: Belagal
ಮುದ್ದೇಬಿಹಾಳ 05: ಮಗುವಿನ ಆಸಕ್ತಿಗೆ ಅನುಗುಣವಾದ ಕಲೆಯನ್ನು ಬೆಳೆಸಿಕೊಳ್ಳಲು ಪ್ರತಿಭಾಕಾರಂಜಿಯಿಂದ ಸಾಧ್ಯ ಎಂದು ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಡಾ. ಮಲ್ಲಿಕಾರ್ಜುನ ಬೆಳಗಲ್ ಹೇಳಿದರು.
ಪಟ್ಟಣದ ಜ್ಞಾನ ಭಾರತಿ ವಿದ್ಯಾ ಮಂದಿರ ಪ್ರಾಥಮಿಕ ಶಾಲೆಯಲ್ಲಿ ನಡೆದ ಮುದ್ದೇಬಿಹಾಳ ಕ್ಲಸ್ಟರ್ ವಲಯದ ಪ್ರತಿಭಾ ಕಾರಂಜಿಯನ್ನು ಕಾರ್ಯಕ್ರಮವನ್ನು ಮಂಗಳವಾರ ಉದ್ಘಾಟಿಸಿ ಅವರು ಮಾತನಾಡಿದರು.ಶಿಕ್ಷಣ ಇಲಾಖೆ ವಿದ್ಯಾರ್ಥಿಯ ಸರ್ವತೋಮುಖ ಪ್ರತಿಭೆಯನ್ನು ಅನಾವರಣ ಮಾಡುವ ಉದ್ದೇಶದಿಂದ ಪ್ರತಿಭಾ ಕಾರಂಜಿಯನ್ನು ಪ್ರಾರಂಭಿಸಿದೆ. ತಮ್ಮಲ್ಲಿರುವ ಪ್ರತಿಭೆಯನ್ನು ಮುಕ್ತವಾಗಿ ಅನಾವರಣ ಮಾಡಿಕೊಳ್ಳದೆ ಇದ್ದಲ್ಲಿ ಗುರುತಿಸಿಕೊಳ್ಳಲು ಅಸಾಧ್ಯವಾಗುತ್ತದೆ. ಪ್ರತಿಭೆ ಎನ್ನುವುದು ಗುಡಿಸಲಿನಲ್ಲಿ ಹುಟ್ಟಿ ಅರಮನೆಯಲ್ಲಿ ಬೆಳೆಯುತ್ತದೆ ಎಂದು ಕವಿಯೋರ್ವನು ಉಲ್ಲೇಖಿಸುತ್ತಾನೆ. ಅದಕ್ಕೆ ಪ್ರತ್ಯಕ್ಷ ನಿದರ್ಶನವೆಂದರೆ ದಿ.ಲತಾ ಮಂಗೇಶ್ಕರ ಸಾಕ್ಷಿಯಾಗಿದ್ದಾರೆ ಎಂದರು.
ಸಂಸ್ಥೆಯ ಅಧ್ಯಕ್ಷ ಬಿ.ಪಿ.ಕುಲಕರ್ಣಿ ಅಧ್ಯಕ್ಷೀಯ ಮಾತುಗಳನ್ನಾಡಿದರು. ಈ ಸಂದರ್ಭದಲ್ಲಿ ಬಿ.ಆರ್.ಪಿ ಲತಾ ಮುದ್ದಾಪೂರ, ಸಿ.ಆರ್.ಪಿ ಬಿ.ಎಚ್.ಬಳಬಟ್ಟಿ, ಪ್ರೌಢ ಶಾಲಾ ಮುಖ್ಯಗುರು ರಾಮಚಂದ್ರ ಹೆಗಡೆ, ಆಕ್ಸ್ ಫರ್ಢ ಅಧ್ಯಕ್ಷ ರಾಮನಗೌಡ ಬಿರಾದಾರ, ಶಿಕ್ಷಕ ಎಸ್.ಎಸ್.ಹಂಜಗಿ ಸೇರಿದಂತೆ ಇತರರು ಹಾಜರಿದ್ದರು.
ವಿದ್ಯಾರ್ಥಿನಿ ಭವಾನಿ ಝಿಂಗಾಡೆ ಸಂಗಡಿಗರು ಪ್ರಾರ್ಥಿಸಿದರು. ಮುಖ್ಯಗುರುಮಾತೆ ಸರಸ್ವತಿ ಮಡಿವಾಳರ್ ಸ್ವಾಗತಿಸಿದರು. ಸಿ.ಆರ್,ಪಿ ಗುಂಡು ಚವ್ಹಾಣ ಪ್ರಾಸ್ತಾವಿಕ ಮಾತನಾಡಿದರು. ಶಿಕ್ಷಕ ಮಂಜುನಾಥ ಪಡದಾಳಿ ನಿರೂಪಿಸಿದರು. ಆಂಗ್ಲ ಮಾಧ್ಯಮ ಮುಖ್ಯಗುರುಮಾತೆ ರಂಜಿತಾ ಭಟ್ಟ ವಂದಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 