ತಾಳಿಕೋಟಿ

ರಾಜ್ಯಮಟ್ಟಕ್ಕೆ ಆಯ್ಕೆ

ರಾಜ್ಯಮಟ್ಟಕ್ಕೆ ಆಯ್ಕೆ

ತಾಳಿಕೋಟೆ 01:  ತಾಲೂಕಿನ ಮೈಲೇಶ್ವರನ ಬ್ರಿಲಿಯಂಟ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿನಿ ಪ್ರತೀಕ್ಷಾ ಎಸ್ ಮೇಟಿ ವಿಜಯಪುರ ಜಿಲ್ಲಾ ಮಟ್ಟದ ವಿಜ್ಞಾನ ವಿಚಾರಗೋಷ್ಠಿಯಲ್ಲಿ ಪ್ರಥಮ ಸ್ಥಾನ ಗಳಿಸುವ ಮೂಲಕ ರಾಜ್ಯಮಟ್ಟಕ್ಕೆ ಆಯ್ಕೆಯಾದರು. 

ವಿಜಯಪುರದ ಪಿ.ಡಿ.ಜೆ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಸ್ಪರ್ಧೆ ಆಯೋಜಿಸಲಾಗಿತ್ತು. ವಿದ್ಯಾರ್ಥಿನಿಯ ಸಾಧನೆಗೆ ಮಾರುತಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷರು ಹಾಗೂ ಸರ್ವ ಆಡಳಿತ ಮಂಡಳಿಯವರು, ಬ್ರಿಲಿಯಂಟ್ ಕನ್ನಡ ಮತ್ತು ಆಂಗ್ಲ ಮಾಧ್ಯಮದ ಮುಖ್ಯ ಗುರುಗಳು ಹಾಗೂ ಸಿಬ್ಬಂದಿ ವರ್ಗದವರು ಹರ್ಷ ವ್ಯಕ್ತಪಡಿಸಿ ಶುಭ ಹಾರೈಸಿದರು. 


ಸುದ್ದಿ ಓದಿ