ಪೊಲೀಸರಿಗೆ ಕೊರೋನಾ: ಹೊಸ ಮಾರ್ಗಸೂಚಿ ಹೊರಡಿಸಿದ ಪ್ರವೀಣ್ ಸೂದ್
ಬೆಂಗಳೂರು, ಮೇ 25,ರಾಜ್ಯದಲ್ಲಿ ಪೊಲೀಸ್ ಸಿಬ್ಬಂದಿಗೆ ಕೊರೋನಾ ಸೋಂಕು ತಗುಲಿರುವುದರಿಂದ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ಕೆಲವೊಂದು ಮಾರ್ಗಸೂಚಿಗಳನ್ನು ಹೊರಡಿಸಿದ್ದಾರೆ.ರಾಜ್ಯದ 7 ಕ್ಕೂ ಹೆಚ್ಚು ಮಂದಿ ಪೊಲೀಸರಿಗೆ ಕೊರೋನಾ ಸೋಂಕು ತಗುಲಿದೆ. ಇದರಿಂದ ಆತಂಕ ಗೊಂಡಿರುವ ಇಲಾಖೆಗೆ, ಸಿಬ್ಬಂದಿಗೆ ಮಾರ್ಗಸೂಚಿ ಹೊರಡಿಸಿ ಅದನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚಿಸಿದೆ.ಸಾಮಾಜಿಕ ಅಂತರ ಪಾಲಿಸಬೇಕು ಮಾಸ್ಕ್ ಧರಿಸಬೇಕು. ಯಾವುದೇ ವಸ್ತುಗಳನ್ನು ಮುಟ್ಟದಂತೆ ಸೂಚನೆ ನೀಡಿದ್ದಾರೆ. ಕೊರೊನಾ ಸೂಕ್ಷ್ಮ ಪ್ರದೇಶಗಳಿಂದ 55 ವರ್ಷ ಮೇಲ್ಪಟ್ಟವರ ಬಿಡುಗಡೆ ಮಾಡಬೇಕು, ಎಲ್ಲಾ ಪೊಲೀಸ್ ಸಿಬ್ಬಂದಿ ಕೊರೋನಾ ಪರೀಕ್ಷೆ ಮಾಡಿಸಬೇಕು. ಪೊಲೀಸರ ಕುಟುಂಬದ ಆರೋಗ್ಯದ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ನಿಗಾವಹಿಸುವಂತೆ ಅವರು ಆದೇಶ ದಲ್ಲಿ ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 