ರಾಜ್ಯದಲ್ಲಿ ಉತ್ತಮ ಮಳೆ, ಸಮೃದ್ಧ ಬೆಳೆಗಾಗಿ ಪ್ರಾರ್ಥನೆ: ಡಿಕೆಶಿ
Prayers for good rainfall and abundant crops in the state: DKShi
ಗದಗ 02: ರಾಜ್ಯದಲ್ಲಿ ಉತ್ತಮ ಮಳೆಯಾಗಿ ಸಮೃದ್ಧ ಬೆಳೆ ಬರಬೇಕು. ರೈತರು ಹಾಗೂ ಜನರು ನೆಮ್ಮದಿಯಿಂದ ಬದುಕುವಂತಾಗಬೇಕು ಎಂದು ಪ್ರಾರ್ಥಿಸಲು ಲಕ್ಷ್ಮೇಶ್ವರ ತಾಲೂಕಿನ ಮುಕ್ತಿಮಂದಿರ ಧರ್ಮಕ್ಷೇತ್ರಕ್ಕೆ ಭೇಟಿ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.
ಗದಗ ಜಿಲ್ಲೆಯ ಬರ ಪರಿಸ್ಥಿತಿ ಪರೀಶೀಲನೆ ನಡೆಸಿದ ಬಳಿಕ ಮಂಗಳವಾರ ಮುಕ್ತಿಮಂದಿರ ಧರ್ಮಕ್ಷೇತ್ರಕ್ಕೆ ಭೇಟಿ ನೀಡಿದ ಅವರು, ಲಿಂ. ವೀರಗಂಗಾಧರ ಜಗದ್ಗುರುಗಳ ಕರ್ತೃಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿದರು.
ಮುಕ್ತಿಮಂದಿರದ ಪಟ್ಟಾಧ್ಯಕ್ಷ ಶ್ರೀ ವಿಮಲರೇಣುಕ ವೀರಮುಕ್ತಿಮುನಿ ಶಿವಾಚಾರ್ಯರು ಹಾಗೂ ನೊಣವಿನಕೆರೆ ಕಾಡಸಿದ್ದೇಶ್ವರ ಮಠದ ಶ್ರೀ ಕರಿವೃಷಭ ದೇಶಿಕೆಂದ್ರ ಶಿವಯೋಗೀಶ್ವರ ಶಿವಾಚಾರ್ಯರ ಮಾರ್ಗದರ್ಶನದಲ್ಲಿ ಅಭಿಷೇಕ, ಅಷ್ಟೋತ್ತರ ಹಾಗೂ ಮಹಾಮಂಗಳಾರತಿ ನೆರವೇರಿಸಿ ಪ್ರಾರ್ಥಿಸಿದರು.
ಈ ಕ್ಷೇತ್ರ ತಮ್ಮ ನಂಬಿಕೆಯ ಹಾಗೂ ಹೃದಯಕ್ಕೆ ಹತ್ತಿರವಾದ ಪವಿತ್ರ ಕ್ಷೇತ್ರವಾಗಿದೆ. ಹಿಂದೆ ಇಲ್ಲಿ ಸಲ್ಲಿಸಿದ್ದ ಪ್ರಾರ್ಥನೆ ಹಾಗೂ ಸಂಕಲ್ಪ ಈಡೇರಿದ ಹಿನ್ನೆಲೆಯಲ್ಲಿ ಮತ್ತೊಮ್ಮೆ ದರ್ಶನ ಪಡೆದು ಪೂಜೆ ಸಲ್ಲಿಸಿದ್ದಾಗಿ ಡಿ.ಕೆ. ಶಿವಕುಮಾರ್ ತಿಳಿಸಿದರು.
ಬಳಿಕ ಶ್ರೀ ವಿಮಲರೇಣುಕ ವೀರಮುಕ್ತಿಮುನಿ ಶಿವಾಚಾರ್ಯರೊಂದಿಗೆ ಕ್ಷೇತ್ರದಲ್ಲಿ ನಡೆಯುತ್ತಿರುವ ತ್ರಿಕೋಟಿ ಶಿವಲಿಂಗ ಸ್ಥಾಪನೆ, ಸಮುದಾಯ ಭವನ, ಅನ್ನದಾಸೋಹ ಸೇರಿದಂತೆ ವಿವಿಧ ಅಭಿವೃದ್ಧಿ ಕಾರ್ಯಗಳ ಕುರಿತು ಮಾಹಿತಿ ಪಡೆದರು. ಕ್ಷೇತ್ರದ ಅಭಿವೃದ್ಧಿಗೆ ಸರ್ಕಾರದ ವತಿಯಿಂದ ಸಕಲ ರೀತಿಯ ಸಹಕಾರ ನೀಡುವುದಾಗಿ ಭರವಸೆ ನೀಡಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 