ಯರಗಟ್ಟಿ

ಸ್ವಾತಂತ್ರ್ಯ ದಿನಾಚರಣೆ ಪೂರ್ವ ಸಿದ್ಧತಾ ಸಭೆ

ಸ್ವಾತಂತ್ರ್ಯ ದಿನಾಚರಣೆ ಪೂರ್ವ ಸಿದ್ಧತಾ ಸಭೆ

ಯರಗಟ್ಟಿ 09: 76ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಪೂರ್ವ ಸಿದ್ಧತೆ ಕುರಿತು ತಹಶೀಲ್ದಾರ ಕಚೇರಿ ವತಿಯಿಂದ ಸಭೆ ನಡೆಸಲಾಯಿತು. ಪಟ್ಟಣದ ಸರಕಾರಿ ಹಿರಿಯ ಪ್ರಾಥಮಿಕ ಶಾಲಾವರಣದಲ್ಲಿ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ತಹಸೀಲ್ದಾರ್ ಎಮ್‌. ಎನ್‌. ಮಠದ ತಿಳಿಸಿದರು. 

ಪ್ರತಿ ವರ್ಷದಂತೆ ಈ ವರ್ಷವೂ ಕೂಡ ವಿಜೃಂಭಣೆ ಯಿಂದ ಸ್ವಾತಂತ್ರ್ಯ ದಿನಾಚರಣೆ ಆಚರಿಸುವಂತೆ ಚರ್ಚಿಸಲಾಯಿತು. ಶಾಲಾ ಕಾಲೇಜಿನ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಯನ್ನು ಏರಿ​‍್ಡಸುವುದು, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನೆರೆವೇರಿಸಿ ಮಕ್ಕಳಿಗೆ ಪ್ರಥಮ, ದ್ವಿತೀಯ ಬಹುಮಾನಗಳನ್ನು ಆಗಸ್ಟ್‌ 15ರಂದು ವಿತರಿಸಬೇಕು ಹಾಗೂ ವಿದ್ಯಾರ್ಥಿಗಳಿಗೆ ಸಿಹಿ ಊಟದ ವ್ಯವಸ್ಥೆಯನ್ನು ಮಾಡಲು ನಿರ್ಣಯಿಸಲಾಯಿತು. ಯರಗಟ್ಟಿ ತಾಲೂಕಿನ ಎಲ್ಲಾ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು. 


ಸುದ್ದಿ ಓದಿ