ವಿಪತ್ತು ಸಂದರ್ಭದಲ್ಲಿ ಮುಂಜಾಗ್ರತಾ ಅರಿವು ಅಗತ್ಯ
Precautionary awareness is necessary in the event of a disaster
ಬಳ್ಳಾರಿ 21: ಯಾವುದೇ ವಿಪತ್ತುಗಳು ಸಂಭವಿಸಿದಾಗ ತತಕ್ಷಣ ಕೈಗೊಳ್ಳುವ ಮುಂಜಾಗ್ರತಾ ಕ್ರಮಗಳ ಅರಿವು ಹೊಂದಬೇಕು ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡದ ಇನ್ಸ್ ಪೆಕ್ಟರ್ ಅಜಯ್ ಕುಮಾರ್ ಅವರು ಹೇಳಿದರು.ಸಿರುಗುಪ್ಪ ತಾಲ್ಲೂಕಿನ ದೇಶನೂರು ಗ್ರಾಮದ ಎನ್‌ಎಸ್‌ಎಲ್ ಸಕ್ಕರೆ ಕಾರ್ಖಾನೆಯಲ್ಲಿ ಬುಧವಾರ ಆಯೋಜಿಸಿದ್ದ ಅಣಕು ಪ್ರದರ್ಶನ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ದೇಶದಲ್ಲಿ 16 ಎನ್‌ಡಿಆರ್‌ಎಫ್ ತಂಡಗಳಿದ್ದು, ವಿಪತ್ತು ಸನ್ನಿವೇಶ ಎದುರಾದಾಗ ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡಗಳು ಸದಾ ಸಿದ್ಧರಿರುತ್ತಾರೆ. ಸಾರ್ವಜನಿಕರು ಸಹ ಅಗತ್ಯ ಸಹಕಾರ ನೀಡಬೇಕು ಎಂದರು.ಜಿಲ್ಲಾಧಿಕಾರಿ ಕಚೇರಿಯ ಪ್ರಕೃತಿ ವಿಕೋಪ ಪರಿಣಿತ ಪರಮೇಶ್ ಅವರು ಮಾತನಾಡಿ, ಜಿಲ್ಲೆಯಲ್ಲಿ ಪ್ರವಾಹಕ್ಕೆ ತುತ್ತಾಗುವ ಗ್ರಾಮಗಳನ್ನು ಗುರುತಿಸಿದ್ದು, ಎನ್‌ಡಿಆರ್‌ಎಫ್ ತಂಡದ ಸದಸ್ಯರು ಪ್ರತಿ ವಿಪತ್ತುಗಳ ಕುರಿತು ಅರಿವು ಮೂಡಿಸುವರು. ವಿಪತ್ತುಗಳು ಸಂಭವಿಸಿದಾಗ ಸನ್ನದ್ಧಗೊಳಿಸಲು ಕೌಶಲ್ಯಗಳನ್ನು ಪ್ರಾತ್ಯಕ್ಷಿಕೆ ಮೂಲಕ ಅಭ್ಯಾಸ ಮಾಡಿಸುವರು ಹಾಗೂ ಪ್ರಥಮ ಚಿಕಿತ್ಸೆ, ಸಿಪಿಆರ್ ವಿಧಾನಗಳು ತಿಳಿಸುವರು.
ಇದರ ಸದುಪಯೋಗಪಡೆದುಕೊಳ್ಳಬೇಕು ಎಂದು ಹೇಳಿದರು.ಎನ್‌ಡಿಆರ್‌ಎಫ್ ಸಿಬ್ಬಂದಿ ನಾಗರಾಜ್ ಮತ್ತು ತಂಡದ ಎಲ್ಲಾ ಸದಸ್ಯರು ಬೆಂಕಿ ಅವಘಡಗಳು, ಪ್ರವಾಹ, ಭೂಕಂಪ ಇತ್ಯಾದಿ ವಿಪತ್ತುಗಳ ಮುಂಜಾಗೃತೆ, ಸನ್ನದ್ಧತೆ ಬಗ್ಗೆ ತಿಳಿಸುತ್ತಾ ಕೆಲವು ಶಿಬಿರಾರ್ಥಿಗಳಿಂದ ಅಭ್ಯಾಸಿಸಿದರು.ಈ ವೇಳೆ ಎನ್‌ಡಿಆರ್‌ಎಫ್ ಸಬ್ ಇನ್ಸ್ ಪೆಕ್ಟರ್ ಮುನ್ನಿಕೃಷ್ಣ, ಎನ್‌ಎಸ್‌ಎಲ್ ಸಕ್ಕರೆ ಕಾರ್ಖಾನೆಯ ಡಿಜಿಎಂ ರಾಜಬಾಬು, ಸಿರುಗುಪ್ಪ ತಾಲ್ಲೂಕು ಕಂದಾಯ ನೀರೀಕ್ಷಕ ಮಂಜುನಾಥ ಸೇರಿದಂತೆ ಆಶಾ ಕಾರ್ಯಕರ್ತೆಯರು, ಆರೋಗ್ಯ ಸಹಾಯಕರು, ಅಂಗನವಾಡಿ ಕಾರ್ಯಕರ್ತೆಯರು, ಕಾರ್ಮಿಕರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
ಬೆಳಗಾವಿಯ ಹೃದಯಭಾಗದಲ್ಲಿ ಚಿನ್ನಾಭರಣ ಅಂಗಡಿ ಲೂಟಿ : ಸ್ಥಳಕ್ಕೆ ಪೊಲೀಸರ ದೌಡು
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ 