ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ: ಸಚಿವ ಎಂ. ಬಿ. ಪಾಟೀಲ
Precautions to avoid drinking water problems: Minister M. B. Patil
ವಿಜಯಪುರ 03: ಬೇಸಿಗೆಯಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ಕ್ರಮವಾಗಿ ತುಬಚಿ- ಬಬಲೇಶ್ವರ ಏತ ನೀರಾವರಿ ಯೋಜನೆಯ ಮೂಲಕ ತಿಕೋಟಾ ತಾಲೂಕಿನ ಕೆರೆ ಮತ್ತು ಬಾಂದಾರಗಳಿಗೆ ನೀರು ಬಿಡುಗಡೆ ಮಾಡಲಾಗಿದ್ದು, ರೈತರು ಪೋಲಾಗದಂತೆ ಮತ್ತು ಕುಡಿಯಲು ಮಾತ್ರ ನೀರನ್ನು ಬಳಸುವಂತೆ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ರೈತರಿಗೆ ಮನವಿ ಮಾಡಿದ್ದಾರೆ.
ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ತಿಕೋಟಾ ತಾಲೂಕಿನಲ್ಲಿ ಪ್ರಸಕ್ತ ವರ್ಷದಲ್ಲಿ ಜನ- ಜಾನುವಾರುಗಳಿಗೆ ಕುಡಿಯಲು ನೀರು ಪೂರೈಸುವ ಸಲುವಾಗಿ ಕೆರೆಗಳಿಗೆ ನೀರು ತುಂಬಿಸಲು 14.11.2025ರಂದು ನಡೆದ ನೀರಾವರಿ ಸಲಹಾ ಸಮತಿ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿತ್ತು. ಈ ಹಿನ್ನೆಲೆಯಲ್ಲಿ ಈ ಭಾಗಕ್ಕೆ ಹಂಚಿಕೆಯಾದ 0.75 ಟಿಎಂಸಿ ನೀರನ್ನು ಯೋಜನೆಯ ಅಚ್ಚುಕಟ್ಟು ವ್ಯಾಪ್ತಿಯಲ್ಲಿ ಬರುವ ಕೆರೆಗಳಿಗೆ ಕೂಡಲೇ ಬಿಡುಗಡೆ ಮಾಡುವಂತೆ 24.12.2025 ರಂದು ಬೆಳಗಾವಿ ಉತ್ತರ ವಲಯದ ಕರ್ನಾಟಕ ನೀರಾವರಿ ನಿಗಮ ನಿಯಮಿತ ಮುಖ್ಯ ಅಭಿಯಂತರರಿಗೆ ಪತ್ರ ಬರೆಯಲಾಗಿತ್ತು. ಈ ಹಿನ್ನೆಲೆಯಲ್ಲಿ ಇಂದು ಶನಿವಾರ ಬೆಳಿಗ್ಗೆ ಪಂಪ್ ಗಳನ್ನು ಪ್ರಾರಂಭ ಮಾಡುವ ಮೂಲಕ ಅಧಿಕಾರಿಗಳು ನೀರು ಬಿಡುಗಡೆ ಮಾಡಿದ್ದಾರೆ.
ಈ ನೀರು ಬಿಡುಗಡೆಯಿಂದಾಗಿ ತಿಕೋಟಾ ತಾಲೂಕಿನ ಸುಮಾರು 25 ಕೆರೆ ಮತ್ತು 60 ಬಾಂದಾರಗಳಿಗೆ ನೀರು ಬರಲಿದ್ದು, 21 ಗ್ರಾಮಗಳಿಗೆ ನೀರಿನ ಸಮಸ್ಯೆ ನೀಗಲಿದೆ. ಈಗ ಬಿಡುಗಡೆ ಮಾಡಲಾಗಿರುವ ನೀರು ಕಾಲುವೆಯಲ್ಲಿ ಸರಾಗವಾಗಿ ಹರಿಯಲು ರೈತರು ಸಹಾಯ ಮಾಡಬೇಕು. ಅಲ್ಲದೇ, ಜನ ಮತ್ತು ಜಾನುವಾರಗಳಿಗೆ ಕುಡಿಯಲು ಮಾತ್ರ ಬಳಸಬೇಕು ಎಂದು ಸಚಿವ ಎಂ. ಬಿ. ಪಾಟೀಲ ರೈತರಲ್ಲಿ ಮನವಿ ಮಾಡಿದ್ದಾರೆ. ತುಬಚಿ- ಬಬಲೇಶ್ವರ ಏತ ನೀರಾವರಿ ಯೋಜನೆಯಡಿ ಈಗ ನೀರು ಬಿಡುಗಡೆ ಮಾಡಿರುವುದರಿಂದ ಈ ಯೋಜನೆಯ ವ್ಯಾಪ್ತಿಯ ಜಮಖಂಡಿ ತಾಲೂಕಿನ ಮೂರು ಮತ್ತು ಅಥಣಿ ತಾಲೂಕಿನ ನಾಲ್ಕು ಗ್ರಾಮಗಳಿಗೂ ನೀರು ಸಿಗಲಿದೆ.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 