ರಕ್ತದಾನದಿಂದ ಅಮೂಲ್ಯ ಜೀವ ಉಳಿಸಲು ಸಾಧ್ಯ: ವೀರೇಶ ದೊಡಮನಿ
Precious lives can be saved through blood donation: Veeresha Doddamani
ಲೋಕದರ್ಶನ ವರದಿ
ಬೆಳಗಾವಿ ಸೆ. 5: ರಕ್ತದಾನವು ಅತ್ಯಂತ ಮಹತ್ವದ ಮಾನವೀಯ ಸೇವೆಯಾಗಿದ್ದು, ಒಂದು ಯೂನಿಟ್ ರಕ್ತದಾನದಿಂದ ಅಮೂಲ್ಯ ಜೀವವನ್ನು ಉಳಿಸಲು ಸಾಧ್ಯ ಎಂದು ಉಪ ಪೊಲೀಸ್ ಅಧೀಕ್ಷಕ ವೀರೇಶ ದೊಡಮನಿ ಹೇಳಿದರು.
ರಾಮತೀರ್ಥ ನಗರದ ಸಮಾಜ ಸೇವಕ ಸುರೇಶ ಯಾದವ್ ಅವರ ಜನ್ಮದಿನದ ಅಂಗವಾಗಿ ಸುರೇಶ ಯಾದವ್ ಫೌಂಡೇಶನ್ ಹಾಗೂ ಕೆಎಲ್ಇ ಆಸ್ಪತ್ರೆಯ ಸಹಯೋಗದಲ್ಲಿ ಆಯೋಜಿಸಿದ್ದ ರಕ್ತದಾನ ಮತ್ತು ಆರೋಗ್ಯ ತಪಾಸಣಾ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.
ಅಪಘಾತ, ಶಸ್ತ್ರಚಿಕಿತ್ಸೆ, ಹೆರಿಗೆ ಸೇರಿದಂತೆ ವಿವಿಧ ತುರ್ತು ಸಂದರ್ಭಗಳಲ್ಲಿ ರಕ್ತದ ಅವಶ್ಯಕತೆ ಎದುರಾಗುತ್ತದೆ. ರಕ್ತವನ್ನು ಕೃತಕವಾಗಿ ತಯಾರಿಸಲು ಸಾಧ್ಯವಿಲ್ಲ. ಆದ್ದರಿಂದ ಅರ್ಹ ಪ್ರತಿಯೊಬ್ಬರೂ ನಿಯಮಿತವಾಗಿ ರಕ್ತದಾನ ಮಾಡುವ ಮೂಲಕ ರಕ್ತದ ಕೊರತೆ ನೀಗಿಸಲು ಸಹಕರಿಸಬೇಕು ಎಂದು ಮನವಿ ಮಾಡಿದರು.
ಸುರೇಶ ಯಾದವ್ ಫೌಂಡೇಶನ್ ಹಲವು ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡು ಜನರಿಗೆ ನೆರವು ನೀಡುತ್ತಿರುವುದು ಶ್ಲಾಘನೀಯ. ಸಮಾಜದ ಬಗ್ಗೆ ಕಾಳಜಿ ಹೊಂದಿರುವ ಎಲ್ಲರೂ ಕೈಜೋಡಿಸಿ ಸಮಾಜ ಸೇವೆಗೆ ಮತ್ತಷ್ಟು ಬಲ ತುಂಬಬೇಕು ಎಂದರು.
ಶಿಬಿರದಲ್ಲಿ ನೂರಾರು ಜನರು ಭಾಗವಹಿಸಿ ರಕ್ತದಾನ ಮಾಡಿದರು. ಇದೇ ವೇಳೆ ಸಾರ್ವಜನಿಕರಿಗೆ ಆರೋಗ್ಯ ತಪಾಸಣೆಯನ್ನೂ ನಡೆಸಲಾಯಿತು. ಕಾರ್ಯಕ್ರಮದಲ್ಲಿ ಕೆಎಂಡಿಸಿ ಮಾಜಿ ಅಧ್ಯಕ್ಷ ಮುಕ್ತಾರ್ ಪಠಾಣ್ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಕೆಎಲ್ಇ ಆಸ್ಪತ್ರೆಯ ವೈದ್ಯ ಡಾ. ವಿಠ್ಠಲ ಮಾನೆ ಹಾಗೂ ಸಿಬ್ಬಂದಿ ಭಾಗವಹಿಸಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 