ಉತ್ತರ ಕರ್ನಾಟಕದ ಕಲಾವಿದರಿಗೆ ಆದ್ಯತೆ-ಸಂತೋಷ ಕೊಡಂಕೇರಿ
Preference given to artists from North Karnataka - Santosha Kodankeri
ಲೋಕದರ್ಶನ ವರದಿ
ಬೆಂಗಳೂರು 16: ಫಾರ್ಮುಲಾಗಳ ಹಿಂದೆ ಓಡದೆ ,ಕಥೆಗಳನ್ನು ಕಟ್ಟುವ ಪ್ರಯತ್ನವೇ ತಮ್ಮ ಸಿನಿಮಾಗಳ ಮೂಲ ತತ್ವ ಎಂದು ಹೇಳುವ ನಿರ್ದೇಶಕ ಸಂತೋಷ ಕೊಡಂಕೇರಿ, "ರವಿಕೆ ಪ್ರಸಂಗ" ಚಿತ್ರದ ನಂತರ ಹೊಸ ಚಿತ್ರವೊಂದನ್ನು ಘೋಷಿಸಿದ್ದಾರೆ. ಈ ಬಾರಿ ಅವರು ಉತ್ತರ ಕರ್ನಾಟಕದ ಬದುಕು, ಸಂಸ್ಕೃತಿ ಮತ್ತು ದೈನಂದಿನ ಜೀವನವನ್ನು ಆಧರಿಸಿದ ಸಾಮಾಜಿಕ ಕಾಮಿಡಿ-ಡ್ರಾಮಾ ಚಿತ್ರವನ್ನು ರೂಪಿಸುತ್ತಿದ್ದಾರೆ.
ಈ ಚಿತ್ರಕ್ಕೆ ಕಥೆ ಮತ್ತು ಚಿತ್ರಕಥೆಯನ್ನು ಅವರ ಪತ್ನಿ ಹಾಗೂ ಲೇಖಕಿ ಪಾವನಾ ಸಂತೋಷ ಬರೆಯುತ್ತಿದ್ದಾರೆ. ಸಾಮಾನ್ಯ ಬದುಕಿನ ಸನ್ನಿವೇಷಗಳು, ಪರಿಚಿತ ಪಾತ್ರಗಳು ಮತ್ತು ದಿನನಿತ್ಯದ ಅನುಭವಗಳ ಮೂಲಕ ಕಥೆಯನ್ನು ಕಟ್ಟುವ ಪ್ರಯತ್ನ ಚಿತ್ರದಲ್ಲಿದೆ. ಉತ್ತರ ಕರ್ನಾಟಕದ ಸಾಮಾಜಿಕ ವಾತಾವರಣ, ಸಾಂಸ್ಕೃತಿಕ ಆಚರಣೆಗಳು ಹಾಗೂ ನೈಸರ್ಗಿಕ ಸೌಂದರ್ಯ ಈ ಚಿತ್ರದ ಪ್ರಮುಖ ಅಂಶಗಳಾಗಿವೆ. ವಿಷಯಕ್ಕೆ ನಿಷ್ಠರಾಗಿರುವುದೇ ತಮ್ಮ ಮೊದಲ ಆದ್ಯತೆ ಎನ್ನುತ್ತಾರೆ ಸಂತೋಷ ಕೊಡೆಂಕೇರಿ.
"ನಾವು ಫಾರ್ಮುಲಾಗಳ ಹಿಂದೆ ಓಡೋದಿಲ್ಲ.ಕಥೆಗಳನ್ನು ಕಟ್ತೇವೆ. ವಿಷಯಾಧಾರಿತ ಸಿನಿಮಾ ಮಾಡೋದಕ್ಕೆ ಧೈರ್ಯ ಬೇಕು. ನಿಜವಾದ ಕಥೆಗಳನ್ನು ಹೇಳುವ ,ಕಠಿಣ ಪ್ರಶ್ನೆಗಳನ್ನು ಕೇಳುವ ಮತ್ತು ಪ್ರೇಕ್ಷಕರ ಮನಸ್ಸನ್ನು ತಲುಪುವ ಧೈರ್ಯ,ಅದೇ ನಾನು ಮಾಡಬೇಕೆನ್ನುವ ಸಿನಿಮಾ" ಎನ್ನುತ್ತಾರೆ. ಅತಿ ರಂಜಿತ ದೃಶ್ಯಗಳು ಮತ್ತು ಗಿಮಿಕ್‌ಗಳ ಬದಲು, ಮಾನವೀಯ ಕ್ಷಣಗಳು,ಸ್ಥಳೀಯ ಸಂಪ್ರದಾಯಗಳು ಮತ್ತು ಉತ್ತರ ಕರ್ನಾಟಕದ ಬದುಕಿನ ನೈಜ ಸೌಂದರ್ಯದಿಂದಲೇ ಈ ಚಿತ್ರ ತನ್ನ ಬಲ ಪಡೆಯುತ್ತದೆ.ಪ್ರೇಕ್ಷಕರು ತಮ್ಮ ಬದುಕಿನ ಪ್ರತಿಬಿಂಬವನ್ನು ಪರದೆಯ ಮೇಲೆ ಕಾಣುವಂತೆ ಮಾಡುವುದೇ ಚಿತ್ರದ ಉದ್ದೇಶ. ಇದೀಗ ನಿರ್ಮಾಣ ಸಂಸ್ಥೆ ಉತ್ತರ ಕರ್ನಾಟಕದ ನಟರು ಮತ್ತು ನಟಿಯರಿಗೆ ಅವಕಾಶ ಕಲ್ಪಿಸುವ ಸಲುವಾಗಿ ಆಯ್ಕೆ ಪ್ರಕ್ರಿಯೆಗೆ ಆಹ್ವಾನ ನೀಡಿದೆ. ಸ್ಥಳೀಯ ಪ್ರತಿಭೆಗಳು ಮತ್ತು ಹೊಸ ಮುಖಗಳು ಚಿತ್ರದ ನೈಜತೆಯನ್ನು ಇನ್ನಷ್ಟು ಗಟ್ಟಿಗೊಳಿಸಲಿದೆ ಎನ್ನುತ್ತಾರೆ. ಪ್ರಸ್ತುತ ಚಿತ್ರವು ಪೂರ್ವ ತಯ್ಯಾರಿ ಹಂತದಲ್ಲಿದ್ದು , ಮುಂದಿನ ಹಂತದ ಚಿತ್ರೀಕರಣದತ್ತ ತಂಡ ಸಿದ್ಧಗೊಳ್ಳುತ್ತಿದೆ. ಪಾತ್ರಗಳ ಆಯ್ಕೆ ಮತ್ತು ಚಿತ್ರೀಕರಣ ವೇಳಾಪಟ್ಟಿಯ ಕುರಿತು ಇನ್ನಷ್ಟು ಮಾಹಿತಿಯನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದೆಂದು ತಿಳಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 