ಸೆ.10 ರಂದು ಭಗವಾನ್ ವಿಶ್ವಕರ್ಮ ಜಯಂತಿಯ ಪೂರ್ವಭಾವಿ ಸಭೆ
ಧಾರವಾಡ 9: ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಸೆಪ್ಟೆಂಬರ್ 17 ರಂದು ಮಧ್ಯಾಹ್ನ 12 ಗಂಟೆಗೆ ಭಗವಾನ ವಿಶ್ವಕರ್ಮ ಜಯಂತಿಯನ್ನು ಕರ್ನಾಟಕ ಕುಲಪುರೋಹಿತ ಆಲೂರು ವೆಂಕಟರಾವ್ ಸಾಂಸ್ಕೃತಿಕ ಭವನದಲ್ಲಿ ಆಯೋಜಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಅವರು ಹೇಳಿದರು.
ಅವರು ಇಂದು ಬೆಳಿಗ್ಗೆ ಜಿಲ್ಲಾಧಿಕಾರಿಗಳ ಕಚೇರಿಯ ನೂತನ ಸಭಾಭವನದಲ್ಲಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಜಯಂತಿ ಕಾರ್ಯಕ್ರಮವನ್ನು ನಾವೆಲ್ಲರೂ ವಿಜೃಂಭಣೆಯಿಂದ ಪ್ರತಿವರ್ಷದಂತೆ ಆಚರಿಸೋಣ ಎಂದು ತಿಳಿಸಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ ಅವರು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು.
ವಿಶ್ವಕರ್ಮ ಸಮಾಜದ ಹಿರಿಯ ಮುಖಂಡರು ಹಾಗೂ ಸಾರ್ವಜನಿಕರು ಸಭೆಯಲ್ಲಿ ಉಪಸ್ಥಿತರಿದ್ದರು.