11ರಂದು ವಾಲ್ಮೀಕಿ ಸಮಾಜದ ಪೂರ್ವಭಾವಿ ಸಭೆ
ಲೋಕದರ್ಶನ ವರದಿ
ಶಿಗ್ಗಾವಿ 10: ಇದೇ ನ. 11 ರಂದು ಬೆಳಗ್ಗೆ 10 ಗಂಟೆಗೆ ಪಟ್ಟಣದ ವಾಲ್ಮೀಕಿ ಭವನದಲ್ಲಿ ರಾಜನಹಳ್ಳಿಯ ವಾಲ್ಮೀಕಿ ಮಹರ್ಷಿಗಳ 6 ನೇ ವರ್ಷದ ಜಾತ್ರಾ ಮಹೋತ್ಸವದ ಅಂಗವಾಗಿ ಪೂರ್ವಭಾವಿ ಸಭೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಮಹರ್ಷಿವಾಲ್ಮೀಕಿ ಬೇಡ ನಾಯಕ ಹಿತಾಭಿವೃದ್ಧಿ ಸಂಘದ ತಾಲೂಕ ಅಧ್ಯಕ್ಷ ಬಸನಗೌಡ ರಾಮನಗೌಡ ತಿಳಿಸಿದ್ದಾರೆ.
ಪಟ್ಟಣದಲ್ಲಿ ಮಾಹಿತಿ ನೀಡಿರುವ ಅವರು ಜಾತ್ರಾ ಮಹೋತ್ಸವದ ಅಂಗವಾಗಿ ರಾಜನಹಳ್ಳಿ ಶ್ರೀ ಪ್ರಸನ್ನಾನಂದಪುರಿ ಮಹಾಸ್ವಾಮಿಗಳು ಶಿಗ್ಗಾವಿ ಪಟ್ಟಣಕ್ಕೆ ಆಗಮಿಸಲಿದ್ದು ಅಂದು ಪೂರ್ವಭಾವಿ ಸಭೆಯನ್ನು ಹಮ್ಮಿಕೊಂಡಿದ್ದಾರೆ ಅದರಿಂದ ತಾಲೂಕ ವಾಲ್ಮೀಕಿ ಸಮಾಜದ ಬಾಂಧವರು, ಸಮಾಜದ ನೌಕರರು, ಯುವ ಸೇನೆಯ ಪದಾಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿ ತಮ್ಮ ಸಲಹೆ ಸೂಚನೆಗಳನ್ನ ನೀಡಬೇಕು ಎಂದು ತಿಳಿಸಿದರು, ಸಮಾಜದ ಮುಖಂಡರು ಉಪಸ್ಥಿತರಿದ್ದರು