ನ. 5ರಂದು ಪೂರ್ವಭಾವಿ ಸಭೆ
ಇಂಡಿ: ನ. 14ರಂದು ವೀರರಾಣಿ ಕಿತ್ತೂರು ಚೆನ್ನಮ್ಮನವರ ವಿಜಯೋತ್ಸವ ಆಚರಣೆ ಹಾಗೂ ಪಂಚಮಸಾಲಿ ಮೀಸಲಾತಿಯ ಹೋರಾಟ ಕುರಿತು ನ. 5 ಶನಿವಾರರಂದು ಪಟ್ಟಣದ ಶಾಂತೇಶ್ವರ ಮಂಗಲ ಕಾರ್ಯಾಲಯದಲ್ಲಿ ಪೂರ್ವಭಾವಿ ಸಭೆ ಕರೆಯಲಾಗಿದ್ದು. ಇಂಡಿ ತಾಲೂಕಿನ ಲಿಂಗಾಯತ ಪಂಚಮಸಾಲಿ ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಲಹೆ ಸೂಚನೆ ನೀಡಬೇಕೆಂದು ಸಮಾಜದ ಅಧ್ಯಕ್ಷ ವಿ.ಎಚ್. ಬಿರಾದಾರ ಹಾಗೂ ಯುವ ಘಟಕದ ಜಿಲ್ಲಾಧ್ಯಕ್ಷ ಸೋಮಶೇಖರ್ ದೇವರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.