ಬಳ್ಳಾರಿ

ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನಾಚರಣೆ ಅಂಗವಾಗಿ ಪೂರ್ವಭಾವಿ ಸಭೆ

ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನಾಚರಣೆ ಅಂಗವಾಗಿ ಪೂರ್ವಭಾವಿ ಸಭೆ

ಬಳ್ಳಾರಿ:     ವಿಶ್ವ ಬಾಲ ಕಾರ್ಮಿಕ  ಪದ್ಧತಿ ವಿರೋಧಿ ದಿನಾಚರಣೆಯನ್ನು ಜೂನ್ 12 ರಂದು ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಮೊಹಮ್ಮದ್ ಜುಬೇರಾ ಅವರು ಅಧಿಕಾರಿಗಳಿಗೆ ಸೂಚಿಸಿದರು.  ನಗರದ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಮಂಗಳವಾರ ವಿಶ್ವ ಬಾಲಕಾಮರ್ಿಕ ಪದ್ದತಿ ವಿರೋಧಿ ದಿನಾಚರಣೆ ಕುರಿತು ಜರುಗಿದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.   

   ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ,  ಬಾಲಕಾರ್ಮಿಕ ಯೋಜನೆ ಹಾಗೂ ಇತರೆ ಇಲಾಖೆಗಳ ಸಹಯೋಗದೊಂದಿಗೆ  ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗುತ್ತಿದೆ. ಅರ್ಥಪೂರ್ಣ ಆಚರಣೆಗೆ ಎಲ್ಲಿಯೂ ಲೋಪವಾಗದಂತೆ ಸಂಬಂಧಪಟ್ಟ ಅಧಿಕಾರಿಗಳು ಎಚ್ಚರಿಕೆ ವಹಿಸಬೇಕು ಎಂದರು. ಬಾಲ ಕಾರ್ಮಿಕ ಮತ್ತು ಕಿಶೋರ ಕಾರ್ಮಿಕರನ್ನು ಪತ್ತೆಮಾಡಿ, ಪುನರ್ವಸತಿ ಕಲ್ಪಿಸಲು ಜಿಲ್ಲಾ ಮಟ್ಟದ ಟಾಸ್ಕ್ ಪೋರ್ಸ್  ಸಮಿತಿಯನ್ನು ರಚಿಸಿ ಸಭೆಗಳನ್ನು ನಡೆಸಬೇಕು. 

ಅಂಗಡಿ ಮುಂಗಟ್ಟುಗಳು ಹೆಚ್ಚಾಗಿರುವುದರಿಂದ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಇತರೆ ಇಲಾಖೆಗಳೊಂದಿಗೆ ಕಡ್ಡಾಯವಾಗಿ ಅನಿರೀಕ್ಷಿತ ದಾಳಿ, ತಪಾಸಣೆ ನಡೆಸಿ ಬಾಲ ಕಾರ್ಮಿಕರನ್ನು ರಕ್ಷಿಸಲು ಕಾರ್ಮಿ ಕ ಇಲಾಖೆಗೆ ಇತರೆ ಇಲಾಖೆಗಳು ಸಹಕರಿಸುವಂತೆ ಸೂಚಿಸಿದರು. ದಾಳಿಯಲ್ಲಿ  ರಕ್ಷಿಸಿದ ಮಕ್ಕಳನ್ನು ಮಕ್ಕಳ ಕಲ್ಯಾಣ ಸಮಿತಿಯ ಮುಂದೆ ಹಾಜರುಪಡಿಸಿ ಶಾಲೆಗೆ ದಾಖಲು ಮಾಡುವ ಮೂಲಕ ಬಾಲ ಕಾರ್ಮಿಕ ಪದ್ಧತಿಯನ್ನು ನಿಮರ್ೂಲನೆ ಮಾಡಲು ಕ್ರಮ ಕೈಗೊಳ್ಳಬೇಕು ಎಂದರು. ವಿಶ್ವ ಬಾಲಕಾರ್ಮಿಕ ಪದ್ದತಿ ವಿರೋಧಿ ದಿನಾಚರಣೆಯ ಅಂಗವಾಗಿ ಹಾಗೂ ಬಾಲ ಕಾರ್ಮಿಕ ಪದ್ಧತಿಯ ನಿರ್ಮೂಲನೆ ಬಗ್ಗೆ ಮಕ್ಕಳಲ್ಲಿ ಅರಿವು ಮೂಡಿಸಲು ಕ್ರಮ ವಹಿಸಬೇಕು ಎಂದರು. ಸಭೆಯಲ್ಲಿ ಬಾಲ ಕಾರ್ಮಿಕ ಯೋಜನೆಯ ಯೋಜನಾ ನಿದರ್ೆಶಕ ಮೌನೇಶ್, ಜಿಲ್ಲಾ ಕಾರ್ಮಿಕ ಅಧಿಕಾರಿ ಇಬ್ರಾಹಿಂ,  ಕಾಮರ್ಿಕ ನಿರೀಕ್ಷಕರಾದ ರವಿದಾಸ್ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರ 

ಸುದ್ದಿ ಓದಿ