ಪ್ರೇಮಾ ಹುಬ್ಬಳ್ಳಿ ಅವರಿಗೆ ಅತ್ಯುತ್ತಮ ಅಂಗನವಾಡಿ ಕಾರ್ಯಕರ್ತೆ ಪ್ರಶಸ್ತಿ ಪ್ರಧಾನ

ಪ್ರೇಮಾ ಹುಬ್ಬಳ್ಳಿ ಅವರಿಗೆ ಅತ್ಯುತ್ತಮ ಅಂಗನವಾಡಿ ಕಾರ್ಯಕರ್ತೆ ಪ್ರಶಸ್ತಿ ಪ್ರಧಾನ  Prema Hubballi awarded Best Anganwadi Worker

ಲೋಕದರ್ಶನ ವರದಿ 

ಯಲಬುರ್ಗಾ  18:  ಪಟ್ಟಣದ 9ನೇ ವಾರ್ಡಿನ 13ನೇ ಅಂಗನವಾಡಿ ಕೇಂದ್ರದ ಅಂಗನವಾಡಿ ಕಾರ್ಯಕರ್ತೆ ಪ್ರೇಮಾ ಹುಬ್ಬಳ್ಳಿ ಅವರಿಗೆ ಅತ್ಯುತ್ತಮ ಅಂಗನವಾಡಿ ಕಾರ್ಯಕರ್ತೆ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಪಟ್ಟಣದ ಬುದ್ಧಬಸವಅಂಬೇಡ್ಕರ್ ಭವನದಲ್ಲಿ ಬುಧವಾರ ನಡೆದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕೊಪ್ಪಳ ಶಿಶು ಅಭಿವೃದ್ಧಿ ಯೋಜನೆ ಯಲಬುರ್ಗಾ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತವಾಗಿ ಇವರಿಗೆ ಯಲಬುರ್ಗಾ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಬೆಟ್ಟದೇಶ ಮಾಳೆಕೊಪ್ಪ ಅವರು ಪ್ರಶಸ್ತಿ ಪ್ರಧಾನ ಮಾಡಿದರು.