ಧಾರವಾಡ - ಹುಬ್ಬಳ್ಳಿ

ಸ್ಪರ್ಧಾತ್ಮಕ ಪರೀಕ್ಷೆಗೆ ಸಿದ್ಧತೆ ಅಗತ್ಯ: ಮಡಿವಾಳರ

ಸ್ಪರ್ಧಾತ್ಮಕ ಪರೀಕ್ಷೆಗೆ ಸಿದ್ಧತೆ ಅಗತ್ಯ: ಮಡಿವಾಳರ

ಧಾರವಾಡ 24: ನಗರದ ಶಿವಾಜಿ ವೃತ್ತದಲ್ಲಿರುವ ಕೆ.ಇ. ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದಲ್ಲಿ ಶುಕ್ರವಾರ ಆಯೋಜಿಸಿದ್ದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಜನಾರ್ಧನ ಮಡಿವಾಳರ ಅವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.  ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸು ಸಾಧಿಸಲು ನಿರಂತರ ಅಭ್ಯಾಸ, ಸಮಯದ ಸಮರ​‍್ಕ ನಿರ್ವಹಣೆ ಹಾಗೂ ಯೋಜಿತ ಸಿದ್ಧತೆ ಅತ್ಯಂತ ಅಗತ್ಯ ಎಂದು ಅವರು ತಿಳಿಸಿದರು.  ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಚಾರ್ಯ ಪ್ರೊ. ಎಂ. ಸಿದ್ಧಾಂತಿ ವಹಿಸಿದ್ದರು. ಈ ಸಂದರ್ಭದಲ್ಲಿ ಮಹಾವಿದ್ಯಾಲಯದ ಬೋಧಕ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. 


ಸುದ್ದಿ ಓದಿ