ಯಡಿಯೂರ್ಪ ಅಭಿಮಾನೋತ್ಸವಕ್ಕೆ ಸಿದ್ಧತೆ: ಬಳ್ಳಾರಿಯಲ್ಲಿ ಪೂರ್ವಭಾವಿ ಸಭೆ
Preparations for Yediyurappa's fanfare: Preliminary meeting in Bellary
ಬಳ್ಳಾರಿ 01: ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರ್ಪ ಅವರ 50 ವರ್ಷಗಳ ರಾಜಕೀಯ ಜೀವನದ ಅಂಗವಾಗಿ ಚಿತ್ರದುರ್ಗದಲ್ಲಿ ಇದೇ ತಿಂಗಳ 9 ರಂದು ನಡೆಯುವ ಅಭಿಮಾನೋತ್ಸವದ ಪೂರ್ವ ಸಿದ್ದತಾ ಸಭೆ ನಡೆಯಿತು.ಸಭೆಯಲ್ಲಿ ಮಾಜಿ ಶಾಸಕ ಗಾಲಿ ಸೋಮಶೇಖರ ರೆಡ್ಡಿ, ಮಾಜಿ ಸಂಸದ ಸಣ್ಣ ಪಕ್ಕೀರ್ಪ, ಜಿಲ್ಲಾ ಬಿಜೆಪಿ ಅಧ್ಯಕ್ಷ ಅನಿಲ್ ನಾಯ್ಡು, ಮಾಜಿ ಅಧ್ಯಕ್ಷ ಗುತ್ತಿಗನೂರು ವಿರೂಪಾಕ್ಷಗೌಡ, ಬಿಚ್ಚುಗಲ್ಲು ಪಂಚಾಕ್ಷರ್ಪ ಸೇರಿದಂತೆ ಹಲವರು ಭಾಗವಹಿಸಿ, ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಅಭಿಮಾನಿಗಳನ್ನು ಅಭಿಮಾನೋತ್ಸವಕ್ಕೆ ಕರೆದುಕೊಂಡು ಹೋಗುವ ಕುರಿತು ಚರ್ಚಿಸಿದರು.ಇದೇ ವೇಳೆ ಜಿಲ್ಲೆಯ ಯಡಿಯೂರ್ಪ ಅಭಿಮಾನಿಗಳು ಹಾಗೂ ವೀರಶೈವ ಲಿಂಗಾಯತ ಸಮಾಜದ ಮುಖಂಡರ ಸಭೆಯನ್ನು ನಾಳೆ ಸಂಜೆ 5 ಗಂಟೆಗೆ ನಗರದ ವೀರಶೈವ ವಿದ್ಯಾವರ್ಧಕ ಸಂಘದ ಸಭಾಂಗಣದಲ್ಲಿ ನಡೆಸಲು ನಿರ್ಧರಿಸಲಾಯಿತು.ಸಭೆಯಲ್ಲಿ ಎಸ್. ಮಲ್ಲನಗೌಡ, ಶ್ರೀನಿವಾಸ್ ಮೋತ್ಕರ್, ಬಣಾಪುರ ನಾಗರಾಜಗೌಡ, ಕಪ್ಪಗಲ್ಲು ಶಿವರುದ್ರ್ಪ, ಹೊನ್ನನಗೌಡ, ನಡವಿ ವೀರನಗೌಡ, ಹಲಕುಂದಿ ವೀರನಗೌಡ, ಜಡೇಗೌಡ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 