ರಾಣೆಬೆನ್ನೂರ

ವಿಕಸಿತ ಭಾರತ ಗ್ಯಾರಂಟಿ ಯೋಜನೆ ಪರಿಣಾಮಕಾರಿ ಅನುಷ್ಠಾನಕ್ಕೆ ಸಿದ್ಧತೆ

ವಿಕಸಿತ ಭಾರತ ಗ್ಯಾರಂಟಿ ಯೋಜನೆ ಪರಿಣಾಮಕಾರಿ ಅನುಷ್ಠಾನಕ್ಕೆ ಸಿದ್ಧತೆ

ರಾಣೆಬೆನ್ನೂರು 17: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಕಸಿತ ಭಾರತ ಯೋಜನೆಯಡಿ ಜುಲೈ 1ರಿಂದ ಗ್ರಾಮೀಣ ಭಾಗದಲ್ಲಿ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಮತ್ತು ಆಜೀವಿಕಾ ಮಿಷನ್‌-2025 ಯೋಜನೆ ಜಾರಿಯಾಗಲಿದೆ. ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ತಾಲೂಕಿನಲ್ಲಿ ಈಗಾಗಲೇ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ತಾಲೂಕು ಐಇಸಿ ಸಂಯೋಜಕ ಡಿ.ಬಿ. ಅಂಗೂರ ಹೇಳಿದರು.  

ತಾಲೂಕಿನ ಚಳಗೇರಿ ಗ್ರಾಮ ಪಂಚಾಯಿತಿ ವತಿಯಿಂದ ಆಯೋಜಿಸಿದ್ದ ಮಾಹಿತಿ ಕಾರ್ಯಾಗಾರ ಹಾಗೂ ಸಾಮಾಜಿಕ ಪರಿಶೋಧನಾ ವಿಶೇಷ ಗ್ರಾಮ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.  

ಪ್ರಸ್ತುತ ಆರ್ಥಿಕ ವರ್ಷದಲ್ಲಿ ಪ್ರತಿ ಕುಟುಂಬಕ್ಕೆ 100 ದಿನಗಳ ಕೂಲಿ ಕೆಲಸದ ಬದಲಾಗಿ 125 ದಿನಗಳವರೆಗೆ ಕಡ್ಡಾಯ ಉದ್ಯೋಗಾವಕಾಶ ಕಲ್ಪಿಸಲಾಗುತ್ತಿದೆ. ಅಲ್ಲದೆ ಕೂಲಿ ದರದಲ್ಲೂ ಹೆಚ್ಚಳವಾಗಿದ್ದು, ಪ್ರಸ್ತುತ ದಿನಗೂಲಿ 370 ರಿಂದ 382 ರೂಪಾಯಿಗಳವರೆಗೆ ನಿಗದಿಪಡಿಸಲಾಗಿದೆ ಎಂದು ತಿಳಿಸಿದರು.  

ಸಭೆಯಲ್ಲಿ ತಾಲೂಕು ಸಂಯೋಜಕ ಸಿದ್ದು ಜಾನಪ್ಪ ಅವರು 2025 ಹಾಗೂ 26ನೇ ಸಾಲಿನ ನರೇಗಾ ಯೋಜನೆಯಡಿ ಕೈಗೊಂಡಿರುವ ಕಾಮಗಾರಿಗಳ ಸರಾಸರಿ ವೆಚ್ಚದ ವರದಿಯನ್ನು ಮಂಡಿಸಿದರು.  

ಕಾರ್ಯಕ್ರಮದಲ್ಲಿ ನೋಡಲ್ ಅಧಿಕಾರಿ ಮಾಲತೇಶ ಸಿ.ಬಿ., ಗ್ರಾಮ ಪಂಚಾಯಿತಿ ಆಡಳಿತಾಧಿಕಾರಿ ಮಣಿಕಂಠ ನಾಯಕ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಸಹನಾಬಿ ಕಲಕೋಟಿ, ಕಾರ್ಯದರ್ಶಿ ಫಕ್ಕೀರ​‍್ಪ ಹುಲತ್ತಿ, ಎಸ್ಡಿಎ ಮಹೇಶ್ ರಾಮಲಿಂಗಣ್ಣನವರ, ಬಿಎಫ್ಟಿ ಹನುಮಂತಗೌಡ ಭರಮಗೌಡ್ರ, ಡಿಇಎಂ ಶಿವಪ್ಪ ಬಣಕಾರ ಸೇರಿದಂತೆ ಗ್ರಾಮ ಪಂಚಾಯಿತಿ ಸದಸ್ಯರು, ನಾಗರಿಕರು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು. 


ಸುದ್ದಿ ಓದಿ