ವಿಜಯನಗರ

ನ.27ರಂದು ಕನಕ ಜಯಂತಿ ವಿಜೃಂಭಣೆಯಿಂದ ಆಚರಣೆಗೆ ಸಿದ್ಧತೆ : ಅಪರ ಜಿಲ್ಲಾಧಿಕಾರಿ ಪಿ.ಎನ್‌. ಲೋಕೇಶ್

ನ.27ರಂದು ಕನಕ ಜಯಂತಿ ವಿಜೃಂಭಣೆಯಿಂದ ಆಚರಣೆಗೆ ಸಿದ್ಧತೆ : ಅಪರ ಜಿಲ್ಲಾಧಿಕಾರಿ ಪಿ.ಎನ್‌. ಲೋಕೇಶ್
Preparations underway to celebrate Kanaka Jayanti with great grandeur on Nov 27: Additional Deputy


            ವಿಜಯನಗರ (ಹೊಸಪೇಟೆ) ನ.12: ಭಕ್ತ ಕನಕದಾಸರ ಜಯಂತಿಯನ್ನು ನವೆಂಬರ್ 27ರಂದು ವಿಜೃಂಭಣೆಯಿಂದ ಹಾಗೂ ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಪಿ.ಎನ್‌. ಲೋಕೇಶ್ ಅಧಿಕಾರಿಗಳಿಗೆ ಸೂಚನೆ ನೀಡಿದರು.  

        ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಆಯೋಜಿಸಲಾಗಿದ್ದ ಕನಕ ಜಯಂತಿ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ, ಅವರು ಮಾತನಾಡಿದರು.  

            ನವೆಂಬರ್ 27ರಂದು ಬೆಳಗ್ಗೆ 9 ಗಂಟೆಗೆ ನಗರದ ಅಭಯಾಂಜನ ದೇವಸ್ಥಾನದಿಂದ ಕನಕದಾಸರ ಭಾವಚಿತ್ರದೊಂದಿಗೆ ಬೃಹತ್ ಮೆರವಣಿಗೆ ಆರಂಭವಾಗಲಿದೆ. ಮೆರವಣಿಗೆಯು ಗಾಂಧಿ ವೃತ್ತ, ಪುಣ್ಯಮೂರ್ತಿ ವೃತ್ತ, ಬಸ್ ನಿಲ್ದಾಣ ಹಾಗೂ ಪುನೀತ್ ರಾಜ್ಕುಮಾರ್ ವೃತ್ತದ ಮೂಲಕ ಸಾಗಿ ಕನಕ ವೃತ್ತ ತಲುಪಲಿದೆ. ಬಳಿಕ ಕನಕದಾಸರ ವೃತ್ತದಲ್ಲಿಯೇ ವೇದಿಕೆ ಕಾರ್ಯಕ್ರಮ ಆಯೋಜಿಸಲಾಗುವುದು ಎಂದು ತಿಳಿಸಿದರು.  

            ಜಯಂತಿ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಶಿಷ್ಟಾಚಾರದಂತೆ ಆಹ್ವಾನ ಪತ್ರಿಕೆಗಳನ್ನು ಮುದ್ರಿಸಿ, ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳಿಗೆ ಸಕಾಲದಲ್ಲಿ ಆಹ್ವಾನ ನೀಡಬೇಕು. ಕನಕ ಜಯಂತಿಯ ಅಂಗವಾಗಿ ಕನಕದಾಸರ ವೃತ್ತಕ್ಕೆ ವಿದ್ಯುತ್ ದೀಪಾಲಂಕಾರ  

ಮಾಡಬೇಕು.

          ಮೆರವಣಿಗೆ ಸುಗಮವಾಗಿ ಸಾಗಲು ಅಗತ್ಯ ವ್ಯವಸ್ಥೆ ಕಲ್ಪಿಸುವುದರ ಜೊತೆಗೆ ಸೂಕ್ತ ಪೊಲೀಸ್ ಬಂದೋಬಸ್ತ್‌, ಕುಡಿಯುವ ನೀರು ಸೇರಿದಂತೆ ಮೂಲಸೌಕರ್ಯಗಳನ್ನು ಸಮರ​‍್ಕವಾಗಿ ಒದಗಿಸಬೇಕು. ವಿವಿಧ ಇಲಾಖೆಗಳ ಅಧಿಕಾರಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ ಜಯಂತಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಸೂಚನೆ ನೀಡಿದರು. 


ಸುದ್ದಿ ಓದಿ