ಬೆಳಗಾವಿ

ಹೆಬ್ಬಾಳ ಜೀಪಂ ತಾಪಂ ಚುನಾವಣೆಗಳ ಪೂರ್ವಭಾವಿ ಸಭೆ

ಹೆಬ್ಬಾಳ ಜೀಪಂ ತಾಪಂ ಚುನಾವಣೆಗಳ ಪೂರ್ವಭಾವಿ ಸಭೆ

ಲೋಕದರ್ಶನ ವರದಿ 

           ಯಮಕನ ಮರಡಿ 13 : 12-11-2026 ರಂದು ಮಾನ್ಯ ಸಚಿವರಾದ ಸನ್ಮಾನ್ಯ ಶ್ರೀ ಸತೀಶ್ ಅಣ್ಣಾ ಜಾರಕಿಹೊಳಿ ಅವರ ಆದೇಶದ ಮೇರೆಗೆ, ಅವರ ಆಪ್ತ ಸಹಾಯಕರಾದ ಶ್ರೀ ಪ್ರಕಾಶ್ ಅಣ್ಣಾ ಬಸ್ಸಾಪುರೆ ಹಾಗೂ ಯಮಕನಮರಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಮಹಾಂತೇಶ್ ಅಣ್ಣಾ ಮಗದುಮ್ಮ ಅವರ ನೇತೃತ್ವದಲ್ಲಿ, ಯಮಕನಮರಡಿ ವಿಧಾನಸಭಾ ಕ್ಷೇತ್ರದ ಹೆಬ್ಬಾಳ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಹೆಬ್ಬಾಳ ಗ್ರಾಮದ ಶ್ರೀ ಲಕ್ಷ್ಮೀ ದೇವಸ್ಥಾನದ ಆವರಣದಲ್ಲಿ ಮುಂಬರುವ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಗಳ ಹಿನ್ನೆಲೆಯಲ್ಲಿ ಮಹತ್ವದ ಪೂರ್ವಭಾವಿ ಸಭೆ ನಡೆಸಲಾಯಿತು.

            ಸಭೆಯಲ್ಲಿ ಮುಂಬರುವ ಚುನಾವಣೆಗಳ ಕುರಿತು ಸಮಗ್ರ ಚರ್ಚೆ ನಡೆಸಿ, ಜಿಲ್ಲಾ ಪಂಚಾಯಿತಿ ಹಾಗೂ ವಿವಿಧ ತಾಲೂಕು ಪಂಚಾಯಿತಿ ಕ್ಷೇತ್ರಗಳ ಚುನಾವಣಾ ಆಕಾಂಕ್ಷಿಗಳ ಪಟ್ಟಿಯನ್ನು ಆಯ್ಕೆ ಮಾಡುವ ನಿಟ್ಟಿನಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಆಕಾಂಕ್ಷಿಗಳಿಂದ ಸಲಹೆ ಮತ್ತು ಸೂಚನೆಗಳನ್ನು ಪಡೆಯಲಾಯಿತು.  

ಸಭೆಯಲ್ಲಿ ಭಾಗವಹಿಸಿದ್ದ ಎಲ್ಲ ಮುಖಂಡರು, ಕಾರ್ಯಕರ್ತರು ಹಾಗೂ ಚುನಾವಣಾ ಆಕಾಂಕ್ಷಿಗಳಿಗೆ ತಮ್ಮ ಅಭಿಪ್ರಾಯಗಳನ್ನು ಮುಕ್ತವಾಗಿ ವ್ಯಕ್ತಪಡಿಸಲು ಅವಕಾಶ ಕಲ್ಪಿಸಲಾಯಿತು. ಎಲ್ಲರ ಸಲಹೆಗಳನ್ನು ಆಲಿಸಿ, ಪಕ್ಷದ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವುದು, ಸ್ಥಳೀಯ ಮಟ್ಟದಲ್ಲಿ ಸಮರ್ಥ ನಾಯಕತ್ವವನ್ನು ಬೆಳೆಸುವುದು ಹಾಗೂ ಮುಂಬರುವ ಚುನಾವಣೆಗಳನ್ನು ಒಗ್ಗಟ್ಟಿನಿಂದ ಎದುರಿಸುವ ಕುರಿತು ಮಹತ್ವದ ಚರ್ಚೆ ನಡೆಸಲಾಯಿತು.   

         ಈ ಸಂದರ್ಭದಲ್ಲಿ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ ಮಂಡಳಿಯ ನಿರ್ದೇಶಕರಾಗಿ ಆಯ್ಕೆಯಾಗಿರುವ ಶ್ರೀಮತಿ ಶಹನಾಜ್ ಗಡೆಕಾಯಿ ಮೇಡಂ ಅವರನ್ನು ಹಿರಿಯ ಕಾಂಗ್ರೆಸ್ ಮುಖಂಡರು ಆತ್ಮೀಯವಾಗಿ ಸನ್ಮಾನಿಸಿ, ಅಭಿನಂದನೆಗಳನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಮುಖಂಡರು, ಪಕ್ಷದ ಸಂಘಟನೆಯೇ ನಮ್ಮ ಶಕ್ತಿ, ಕಾರ್ಯಕರ್ತರ ಒಗ್ಗಟ್ಟೇ ನಮ್ಮ ಬಲ, ಸಂಘಟಿತ ಪ್ರಯತ್ನವೇ ನಮ್ಮ ಗೆಲುವಿನ ಹಾದಿ ಎಂಬ ಸಂದೇಶವನ್ನು ಮುಖಂಡರು ಹಾಗೂ ಕಾರ್ಯಕರ್ತರಿಗೆ ತಿಳಿಸಿದರು. ಕಾಂಗ್ರೆಸ್ ಪಕ್ಷದ ಸಂಘಟನೆ ಬಲಪಡಿಸುವುದೇ ನಮ್ಮೆಲ್ಲರ ಸಂಕಲ್ಪ. ಒಗ್ಗಟ್ಟಿನಿಂದ ಮುನ್ನಡೆಯೋಣ, ಗೆಲುವಿನತ್ತ ಹೆಜ್ಜೆ ಹಾಕೋಣ. 


ಸುದ್ದಿ ಓದಿ