ಯರಗಟ್ಟಿ

ತಹಶೀಲ್ದಾರ ಎಂ. ವ್ಹಿ. ಗುಂಡಪ್ಪಗೋಳ ನೇತೃತ್ವದಲ್ಲಿ ಕನ್ನಡ ರಾಜ್ಯೋತ್ಸವ ಪೂರ್ವಭಾವಿ ಸಭೆ

ತಹಶೀಲ್ದಾರ ಎಂ. ವ್ಹಿ. ಗುಂಡಪ್ಪಗೋಳ ನೇತೃತ್ವದಲ್ಲಿ ಕನ್ನಡ ರಾಜ್ಯೋತ್ಸವ ಪೂರ್ವಭಾವಿ ಸಭೆ


        ಯರಗಟ್ಟಿ 28: ನವೆಂಬರ್ 1ರಂದು ಆಚರಿಸಲಿರುವ 71ನೇ ಕನ್ನಡ ರಾಜ್ಯೋತ್ಸವವನ್ನು ತಾಲೂಕು ಆಡಳಿತದ ವತಿಯಿಂದ ಅರ್ಥಪೂರ್ಣವಾಗಿ ಹಾಗೂ ಅದ್ಧೂರಿಯಾಗಿ ಆಚರಿಸುವ ಉದ್ದೇಶದಿಂದ ತಹಶೀಲ್ದಾರ ಎಂ. ವ್ಹಿ. ಗುಂಡಪ್ಪಗೋಳ ಅವರ ನೇತೃತ್ವದಲ್ಲಿ ಕನ್ನಡ ರಾಜ್ಯೋತ್ಸವದ ಪೂರ್ವಭಾವಿ ಸಭೆ ನಡೆಯಿತು. ಸಭೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆಯ ಸಿದ್ಧತೆ, ರಾಷ್ಟ್ರಧ್ವಜ ಹಾಗೂ ನಾಡಧ್ವಜಾರೋಹಣ, ತಾಯಿ ಭುವನೇಶ್ವರಿ ಭಾವಚಿತ್ರದ ಪೂಜೆ, ಮೆರವಣಿಗೆ, ಸಾಂಸ್ಕೃತಿಕ ಕಾರ್ಯಕ್ರಮಗಳು ಸೇರಿದಂತೆ ವಿವಿಧ ವಿಷಯಗಳ ಕುರಿತು ಚರ್ಚಿಸಲಾಯಿತು.

        ಈ ಸಂದರ್ಭದಲ್ಲಿ ತಹಶೀಲ್ದಾರ ಎಂ. ವ್ಹಿ. ಗುಂಡಪ್ಪಗೋಳ ಮಾತನಾಡಿ, ಕನ್ನಡ ಭಾಷೆ, ನೆಲ, ಜಲ ಹಾಗೂ ಸಂಸ್ಕೃತಿಯ ರಕ್ಷಣೆ ಪ್ರತಿಯೊಬ್ಬ ಕನ್ನಡಿಗನ ಕರ್ತವ್ಯವಾಗಿದೆ.ಕನ್ನಡ ರಾಜ್ಯೋತ್ಸವವು ಕೇವಲ ಒಂದು ದಿನದ ಆಚರಣೆಗೆ ಸೀಮಿತವಾಗದೆ ಕನ್ನಡಾಭಿಮಾನವನ್ನು ಬೆಳೆಸುವ ಹಬ್ಬವಾಗಬೇಕು. ಎಲ್ಲ ಇಲಾಖೆಗಳ ಅಧಿಕಾರಿಗಳು, ಕನ್ನಡಪರ ಸಂಘಟನೆಗಳು ಹಾಗೂ ಸಾರ್ವಜನಿಕರು ಪರಸ್ಪರ ಸಹಕಾರದಿಂದ ರಾಜ್ಯೋತ್ಸವವನ್ನು ಯಶಸ್ವಿಗೊಳಿಸಬೇಕು ಎಂದು ಕರೆ ನೀಡಿದರು.

            ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳು, ವಿವಿಧ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿದರು.  ಈ ವೇಳೆ ತಾ. ಪಂ. ಇಓ ಬಸವರಾಜ ಅಯ್ಯನಗೌಡರ, ಕಸಾಪ ಅಧ್ಯಕ್ಷ ಟಿ. ಎಂ. ಕಾಮಣ್ಣವರ, ಪಿಎ ಎಲ್ ಬಿ ಮಾಳಿ, ಕೃಷಿ ಅಧಿಕಾರಿ ಎಂ. ಜಿ. ಕಳಸಪ್ಪನವರ, ಪ್ರಾಚಾರ್ಯರಾದ ಆರ್‌. ಎಸ್‌. ಮರಿಗೌಡರ, ಪಶು ವೈದ್ಯಾಧಿಕಾರಿ ಎಮ್ ವ್ಹಿ ಪಾಟೀಲ, ಪ.ಪಂ. ಅಧಿಕಾರಿ ಕೆ. ಬಿ. ಬೆಣ್ಣಿ, ಕಿರಿಯ ಆರೋಗ್ಯ ನೀರೀಕ್ಷಕ ನಾಗರಾಜ ಸಿ.ಎಸ್, ನಸಿಂರ್ಗ್ ಆಫೀಸರ ಸುನೀಲ ಕಾಶಣ್ಣವರ,

                          ಕರವೇ ಅಧ್ಯಕ್ಷ ರಫೀಕ ಡಿ ಕೆ, ಆರೋಗ್ಯ ರಕ್ಷಾ ಸಮಿತಿ ಸದಸ್ಯ ಭಾಸ್ಕರ ಹಿರೇಮೆತ್ರಿ, ನಿವೃತ್ತ ನೀರಾವರಿ ಅಧಿಕಾರಿ ಎಸ್‌. ಎಚ್‌. ನಾಯ್ಕರ, ಮುಖ್ಯ ಶಿಕ್ಷಕರಾದ ಬಿ. ಎಸ್‌. ಆಲದಕಟ್ಟಿ, ಎ. ಎಚ್‌. ವಜ್ರಮಟ್ಟಿ, ವ್ಹಿ. ಎಂ. ಹಾದಿಮನಿ, ಎಸ್‌. ಬಿ. ಯರಗುದ್ರಿ, ಡಿ. ಎಚ್‌. ಭಜಂತ್ರಿ, ಹೊನ್ನಪ್ಪ ಖಂಡ್ರಿ, ದೇವೇಂದ್ರ ಕಂಮ್ಮಾರ, ಸೋಮು ರೈನಾಪೂರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಕನ್ನಡ ಪರ ಸಂಘಟನೆಗಳ ಮುಖಂಡರು ಇದ್ದರು. 


ಸುದ್ದಿ ಓದಿ