ನಾಳೆ ಮಹರ್ಷಿ ವಾಲ್ಮೀಕಿ ಜಯಂತಿ ಪೂರ್ವಭಾವಿ ಸಭೆ
ತಾಳಿಕೋಟಿ 14 : ತಾಲೂಕ ಆಡಳಿತದ ವತಿಯಿಂದ ಪ್ರತಿ ವರ್ಷದಂತೆ ಈ ವರ್ಷವೂ ಮಹರ್ಷಿ ವಾಲ್ಮೀಕಿ ಅವರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸುವ ನಿಟ್ಟಿನಲ್ಲಿ ತಹಸಿಲ್ದಾರ್ ಅವರ ಅಧ್ಯಕ್ಷತೆಯಲ್ಲಿ ನಾಳೆ ಅಕ್ಟೋಬರ್ 16 ಶುಕ್ರವಾರದಂದು ಬೆಳಗ್ಗೆ 11 ಘಂಟೆಗೆ ತಹಶೀಲ್ದಾರ್ ಕಾರ್ಯಾಲಯದ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ಹಮ್ಮಿಕೊಳ್ಳಲಾಗಿದೆ. ಸದರಿ ಸಭೆಗೆ ಪರಿಶಿಷ್ಟ ಪಂಗಡದ ಎಲ್ಲ ದುರೀಣರು, ಇತರೆ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿ ಸಲಹೆಗಳನ್ನು ನೀಡುವಂತೆ ತಹಶೀಲ್ದಾರ್ ಹಾಗೂ ಜಯಂತಿ ಆಚರಣೆ ಸಮಿತಿಯ ಅಧ್ಯಕ್ಷರಾದ ಎಂ. ಎಸ್ ಅರಕೇರಿ ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.