ಯರಗಟ್ಟಿ

80ನೇ ಸ್ವಾತಂತ್ರ್ಯೋತ್ಸವ ಆಚರಣೆಗೆ ಪೂರ್ವಭಾವಿ ಸಭೆ; ಅದ್ಧೂರಿ ಆಚರಣೆಗೆ ಸಿದ್ಧತೆ

80ನೇ ಸ್ವಾತಂತ್ರ್ಯೋತ್ಸವ ಆಚರಣೆಗೆ ಪೂರ್ವಭಾವಿ ಸಭೆ; ಅದ್ಧೂರಿ ಆಚರಣೆಗೆ ಸಿದ್ಧತೆ

ಯರಗಟ್ಟಿ  06 : ಆಗಸ್ಟ್‌ 15ರಂದು ನಡೆಯಲಿರುವ 80ನೇ ಸ್ವಾತಂತ್ರ್ಯೋತ್ಸವವನ್ನು ಯರಗಟ್ಟಿ ತಾಲೂಕು ಆಡಳಿತದ ವತಿಯಿಂದ ಅದ್ಧೂರಿಯಾಗಿ ಆಚರಿಸಲು ಸಿದ್ಧತೆ ಕೈಗೊಳ್ಳಲಾಗಿದೆ.   ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ತಹಶೀಲ್ದಾರ್ ಎಂ. ವಿ. ಗುಂಡಪ್ಪಗೋಳ ಅವರ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಕಾರ್ಯಕ್ರಮದ ರೂಪುರೇಷೆಗಳ ಕುರಿತು ಚರ್ಚೆ ನಡೆಯಿತು. ಶಿಕ್ಷಣಾಧಿಕಾರಿ ಎಂ.ಎಂ. ಚೀಲದ ಕಾರ್ಯಕ್ರಮದ ವಿವರಗಳನ್ನು ಮಂಡಿಸಿದರು.   ಆಗಸ್ಟ್‌ 11ರಂದು ಸಾಂಸ್ಕೃತಿಕ ಕಾರ್ಯಕ್ರಮಗಳ ಆಯ್ಕೆ ಪ್ರಕ್ರಿಯೆ ನಡೆಸಲಾಗುವುದು. ಅಂದು ಬೆಳಗ್ಗೆ 8 ಗಂಟೆಗೆ ಎಲ್ಲಾ ಶಾಲಾ-ಕಾಲೇಜುಗಳ ತಂಡಗಳು ಹಾಜರಾಗುವಂತೆ ಸೂಚಿಸಲಾಯಿತು.

ಪ್ರತಿವರ್ಷದಂತೆ ಎಲ್ಲ ಶಾಲಾ-ಕಾಲೇಜುಗಳು ಧ್ವಜಾರೋಹಣ ಹಾಗೂ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮಗಳಲ್ಲಿ ಕಡ್ಡಾಯವಾಗಿ ಭಾಗವಹಿಸುವಂತೆ ಸಭೆಯಲ್ಲಿ ಸೂಚನೆ ನೀಡಲಾಯಿತು.   ಸ್ವಾತಂತ್ರ್ಯೋತ್ಸವ ಅಂಗವಾಗಿ ಸ್ವಾತಂತ್ರ್ಯ ಹೋರಾಟಗಾರರು, ಮಾಜಿ ಸೈನಿಕರು, ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಣ್ಯರು ಹಾಗೂ ಉತ್ತಮ ಸೇವೆ ಸಲ್ಲಿಸಿದ ಸರ್ಕಾರಿ ನೌಕರರನ್ನು ತಾಲೂಕು ಆಡಳಿತದಿಂದ ಸನ್ಮಾನಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು.   ಸಭೆಯಲ್ಲಿ ಪುರಸಭೆ, ಪೊಲೀಸ್, ಶಿಕ್ಷಣ, ಆರೋಗ್ಯ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಶಾಲಾ-ಕಾಲೇಜುಗಳ ಮುಖ್ಯಸ್ಥರು ಉಪಸ್ಥಿತರಿದ್ದರು. 


ಸುದ್ದಿ ಓದಿ