ವಿಜಯಪುರ

ಅ. 11ರಂದು ನಡೆಯುವ ಕೆ-ಸೆಟ್ ಪರೀಕ್ಷೆ ಪೂರ್ವಭಾವಿ ಸಭೆಪಾರದರ್ಶಕ-ಅಚ್ಚುಕಟ್ಟಾಗಿ ಕೆ-ಸೆಟ್ ಪರೀಕ್ಷೆ ನಡೆಸಿ

ಅ. 11ರಂದು ನಡೆಯುವ ಕೆ-ಸೆಟ್ ಪರೀಕ್ಷೆ ಪೂರ್ವಭಾವಿ ಸಭೆಪಾರದರ್ಶಕ-ಅಚ್ಚುಕಟ್ಟಾಗಿ ಕೆ-ಸೆಟ್ ಪರೀಕ್ಷೆ ನಡೆಸಿ
Preparatory meeting for the K-SET exam scheduled for October 11: Conduct the K-SET exam in a transp

ವಿಜಯಪುರ 08: ಅ.11 ರಂದು ಜಿಲ್ಲೆಯಲ್ಲಿ ನಡೆಯಲಿರುವ ಕೆ-ಸೆಟ್ ಪರೀಕ್ಷೆಯನ್ನು ಪಾರದರ್ಶಕ ಹಾಗೂ ಅಚ್ಚುಕಟ್ಟಾಗಿನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ. ಓದ್ರಾಮ ಅವರು ಅಧಿಕಾರಿಗಳಿಗೆ ಸೂಚಿಸಿದರು. 

ನಗರದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಗುರುವಾರ ಕೆ-ಸೆಟ್ ಪರೀಕ್ಷೆಯ ಸಿದ್ಧತೆ ಕುರಿತು ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪರೀಕ್ಷಾ ಕೇಂದ್ರಗಳ ಭದ್ರತೆ ಹಾಗೂ ಅಗತ್ಯ ಸೌಲಭ್ಯಗಳ ಕುರಿತು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಅಧಿಕಾರಿಗಳಿಗೆ ಸೂಚನೆ ನೀಡಿದರು.  

ನಗರದ 24 ಪರೀಕ್ಷಾ ಕೇಂದ್ರಗಳಲ್ಲಿ ಕೆ-ಸೆಟ್ ಪರೀಕ್ಷೆಗಳು ನಡೆಯಲಿವೆ. ಈ ಪರೀಕ್ಷೆಗೆ 8,817 ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ ಎಂದು ತಿಳಿಸಿದರು. ಪರೀಕ್ಷಾ ಪ್ರಶ್ನೆ ಪತ್ರಿಕೆ ಕೊಂಡೊಯ್ಯಲು 9 ಮಾರ್ಗಗಳನ್ನು ಗುರುತಿಸಲಾಗಿದೆ. ಪರೀಕ್ಷಾ ಮಾರ್ಗಗಳ ಮೂಲಕ ಪ್ರಶ್ನೆ ಪತ್ರಿಕೆಗಳನ್ನು ಸುರಕ್ಷಿತವಾಗಿ ತೆಗೆದುಕೊಂಡು ಹೋಗಲು ಪರೀಕ್ಷೆಗೆ ನಿಯೋಜಿತ ಅಧಿಕಾರಿಗಳಿಗೆ  ಸೂಚಿಸಲಾಯಿತು. 

ಪರೀಕ್ಷೆಗೆ ಸಂಬಂಧಿಸಿದಂತೆ ಗೌಪ್ಯ ಸಾಮಗ್ರಿಗಳನ್ನು ಮಾರ್ಗಾಧಿಕಾರಿಗಳ ತಂಡಕ್ಕೆ ಅಪರ ಜಿಲ್ಲಾಧಿಕಾರಿಗಳು, ಜಿಲ್ಲಾ ಖಜಾನೆ ಉಪನಿರ್ದೇಶಕರು ಹಾಗೂ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರನ್ನೊಳಗೊಂಡ ಸಮಿತಿ ನೇಮಿಸಲಾಗಿದೆ ಎಂದು  ತಿಳಿಸಿದರು. 


ಸುದ್ದಿ ಓದಿ