ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ನಿಮಿತ್ಯ ಪೂರ್ವಭಾವಿ ಸಭೆ
ಗದಗ 16: ಕಿತ್ತೂರು ರಾಣಿ ಚೆನ್ನಮ್ಮ ಜಯಂತಿಯನ್ನು ಅಕ್ಟೋಬರ್ 23 ರಂದು ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್ ದಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಗೆಯಾದ ಹಿನ್ನೆಲೆಯಲ್ಲಿ ಜಯಂತಿಯನ್ನು ಪುಷ್ಪಾರ್ಚನೆಯೊಂದಿಗೆ ಸಾಂಕೇತಿಕವಾಗಿ ಆಚರಿಸಲು ಕ್ರಮ ವಹಿಸಬೇಕೆಂದು ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ ತಿಳಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಅಕ್ಟೋಬರ್ (16) ರಂದು ಜರುಗಿದ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ನಿಮಿತ್ತ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಅಕ್ಟೋಬರ್ 23 ರಂದು ಆಚರಿಸಲಾಗುವ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿಯನ್ನು ಬಹಳ ವಿಜೃಂಭಣೆಯಿಂದ ಅಚ್ಚುಕಟ್ಟಾಗಿ ಆಚರಣೆ ಮಾಡಬೇಕಿತ್ತು.
ಆದರೆ ಕರ್ನಾಟಕ ಪಶ್ಚಿಮ ಪದವೀಧರರ ಚುನಾವಣೆಯ 2026 ಚುನಾವಣೆ ಇರುವುದರಿಂದ ಜಯಂತಿಯನ್ನು ಪುಷ್ಪಾರ್ಚನೆಯೊಂದಿಗೆ ಸಾಂಕೇತಿಕವಾಗಿ ಆಚರಿಸಲಾಗುವುದು. ಚುನಾವಣಾ ನಂತರ ಸಮಾಜದಿಂದ ಅದ್ದೂರಿ ಆಚರಣೆ ಮಾಡಬಹುದು ಎಂದರು. ಸಮಾಜದ ಮುಖಂಡರು ಹಿರಿಯರು ಜಿಲ್ಲಾಡಳಿತದೊಂದಿಗೆ ಸಹಕರಿಸಬೇಕು ಎಂದರು.
ಈ ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಸಿ.ಆರ್. ಮುಂಡರಗಿ, ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್, ಉಪವಿಭಾಗಾಧಿಕಾರಿ ಗಂಗಪ್ಪ ಎಂ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಾ. ಬಸವರಾಜ .ವ್ಹಿ. ಬಳ್ಳಾರಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಸಮಾಜದ ಗಣ್ಯರು, ಹಿರಿಯರು ಹಾಜರಿದ್ದರು.