ಶಿವಶರಣೆ ಶ್ರೀ ಹೇಮರೆಡ್ಡಿ ಮಲ್ಲಮ್ಮ ಜಯಂತಿ ನಿಮಿತ್ಯ ಪೂರ್ವಸಿದ್ಧತಾ ಸಭೆ

ಶಿವಶರಣೆ ಶ್ರೀ ಹೇಮರೆಡ್ಡಿ ಮಲ್ಲಮ್ಮ ಜಯಂತಿ ನಿಮಿತ್ಯ ಪೂರ್ವಸಿದ್ಧತಾ ಸಭೆ Preparatory meeting for the birth anniversary of Shri Hemareddy Mallamma at Shivasharane

ಗದಗ   24: ಶಿವಶರಣೆ ಶ್ರೀ ಹೇಮರೆಡ್ಡಿ ಮಲ್ಲಮ್ಮ ಜಯಂತಿಯನ್ನು ಮೇ 10 ರಂದು ನಗರದ ಕೆ.ಎಚ್‌. ಪಾಟೀಲ ಸಭಾ ಭವನದಲ್ಲಿ ವ್ಯವಸ್ಥಿತವಾಗಿ ಹಾಗೂ ಅಚ್ಚುಕಟ್ಟಾಗಿ ಆಚರಿಸಲು ಕ್ರಮ ವಹಿಸಬೇಕೆಂದು ಅಪರ ಜಿಲ್ಲಾಧಿಕಾರಿ ಡಾ.ದುರಗೇಶ್ ಕೆ.ಆರ್ ತಿಳಿಸಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಶಿವಶರಣೆ ಶ್ರೀ ಹೇಮರೆಡ್ಡಿ ಮಲ್ಲಮ್ಮ ಜಯಂತಿ ನಿಮಿತ್ತ ಜರುಗಿದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿದರು.ತಾಲೂಕು ಮಟ್ಟದಲ್ಲಿ ತಹಶೀಲ್ದಾರರ ಅಧ್ಯಕ್ಷತೆಯಲ್ಲಿ ಜಯಂತಿಯ ಆಚರಣೆಗೆ ಕ್ರಮ ವಹಿಸಬೇಕು.

ಜಿಲ್ಲಾ ಮಟ್ಟದ ಅಧಿಕಾರಗಳು ಗ್ರಾಮ ಪಂಚಾಯಿತಿ ಶಾಲಾ ಕಾಲೇಜುಗಳಲ್ಲಿ ಶಿವಶರಣೆ ಶ್ರೀ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಿಸಬೇಕು. ಎಸ್‌.ಎಸ್‌.ಎಲ್‌.ಸಿ, ಪಿ.ಯುಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ಸಮಾಜದ ವಿದ್ಯಾರ್ಥಿಗಳಿಗೆ ಪದವಿಯಲ್ಲಿ ಚಿನ್ನದ ಪದಕ ಪಡೆದ ವಿದ್ಯಾರ್ಥಿಗಳಿಗೆ ಹಾಗೂ ವಿವಿಧ ಕ್ಷೇತ್ರದಲ್ಲಿ  ಸೇವೆ ಸಲ್ಲಿಸಿದ ಸಮಾಜದ ಹಿರಿಯರಿಗೆ ಸನ್ಮಾನ ಕಾರ್ಯಕ್ರಮವು ಜರುಗಲಿದೆ.

ಶಿಷ್ಟಾಚಾರದನ್ವಯ ಆಮಂತ್ರಣ ಮುದ್ರಣಕ್ಕೆ ಕ್ರಮ ವಹಿಸಬೇಕು. ಶಿವಶರಣೆ ಶ್ರೀ ಹೇಮರಡ್ಡಿ ಮಲ್ಲಮ್ಮ ಕುರಿತು ಆಳವಾಗಿ ಅಧ್ಯಯನ ಮಾಡಿದವರಿಂದ ಉಪನ್ಯಾಸ ಕಾರ್ಯಕ್ರಮವು ಜರುಗುವುದು. ಒಟ್ಟಾರೆಯಾಗಿ ಶಿವಶರಣೆ  ಶ್ರೀ ಹೇಮರೆಡ್ಡಿ ಮಲ್ಲಮ್ಮ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ಕ್ರಮ ವಹಿಸಬೇಕೆಂದು ಅಪರ ಜಿಲ್ಲಾಧಿಕಾರಿ ಡಾ.ದುರಗೇಶ್ ಕೆ.ಆರ್‌. ನಿರ್ದೇಶನ ನೀಡಿದರು.

ಇದೇ ಸಂದರ್ಭದಲ್ಲಿ ಊಟೋಪಹಾರದ ವ್ಯವಸ್ಥೆ, ವೇದಿಕೆ ವ್ಯವಸ್ಥೆ, ವೇದಿಕೆ ಅಲಂಕಾರ, ಬ್ಯಾನರ ಅಳವಡಿಕೆ, ಪುಸ್ತಕ ಬಿಡುಗಡೆ ಕುರಿತು ಚರ್ಚಿಸಲಾಯಿತು.ಸಭೆಯಲ್ಲಿ  ಡಿ.ವೈ.ಎಸ್‌.ಪಿ ಮಹಾಂತೇಶ್ ಸಜ್ಜನ, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಸಿ.ಆರ್‌. ಮುಂಡರಗಿ,ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧಿಕ್ಷಕರು ರಾಜಕುಮಾರ ಸೊಪ್ಪಡ್ಲ, ಎಲ್ಲಾ ಇಲಾಖೆಯ  ಅಧಿಕಾರಿಗಳು, ಸಮಾಜದ ಮುಖಂಡರು, ಮಹಿಳೆಯರು ಉಪಸ್ಥಿತರಿದ್ದರು.