ಕರಡು ಅಭಿವೃದ್ಧಿ ಯೋಜನೆ ಶಿಸ್ತುಭದ್ಧವಾಗಿ ಸಿದ್ಧಪಡಿಸಿ: ಶಾಸಕ ನಾಡಗೌಡ
Prepare the draft development plan in a disciplined manner: MLA Nadagowda
ತಾಳಿಕೋಟಿ 27: ಮುದ್ದೇಬಿಹಾಳ ಎರಡೂ ತಾಲೂಕಿನ ಎಲ್ಲ ಇಲಾಖೆಗಳ ಸಂಯೋಜನೆಯೊಂದಿಗೆ ತಾಲೂಕ ವಾರ್ಷಿಕ ಕರಡು ಅಭಿವೃದ್ಧಿ ಯೋಜನೆಯನ್ನು ಶಿಸ್ತು ಬದ್ಧವಾಗಿ ಸಿದ್ಧಪಡಿಸಲು ಕೆ ಎಸ್ ಡಿ ಎಲ್ ಅಧ್ಯಕ್ಷ, ಶಾಸಕ ಸಿ.ಎಸ್. ನಾಡಗೌಡ ಅಪ್ಪಾಜಿ ಹೇಳಿದರು.
ಮಂಗಳವಾರ ಪಟ್ಟಣದ ತಾಲೂಕು ಪಂಚಾಯತ್ ಸಭಾಂಗಣದಲ್ಲಿ 2026-27ನೇ ಸಾಲಿನ ವಾರ್ಷಿಕ ಕರಡು ಅಭಿವೃದ್ಧಿ ಕ್ರಿಯಾ ಯೋಜನೆ ಸಿದ್ಧಪಡಿಸಲು ಕರೆದ ತಾಲೂಕ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು. ಸಭೆಯಲ್ಲಿ ಎಲ್ಲಾ ಇಲಾಖೆಗಳು ಸಲ್ಲಿಸಿದ ಬೇಡಿಕೆಗಳನ್ನು ಪರೀಶೀಲಿಸಿದ ಅವರು ಅಧಿಕಾರಿಗಳೊಂದಿಗೆ ಚರ್ಚಿಸಿದರು ಇನ್ನು ಅಗತ್ಯವಿರುವ ಕಾಮಗಾರಿಗಳ ಬೇಡಿಕೆಯನ್ನು ಸಲ್ಲಿಸಲು ತಿಳಿಸಿದರು.
ಇವುಗಳಲ್ಲಿ ಪ್ರಮುಖವಾಗಿ ಕುಡಿಯುವ ನೀರು ಮತ್ತು ಗ್ರಾಮೀಣ ನೈರ್ಮಲ್ಯ ಇಲಾಖೆ, ಮಹಿಳಾ ಮತ್ತು ಕಲ್ಯಾಣ ಇಲಾಖೆ, ಶಿಕ್ಷಣ ಇಲಾಖೆ, ಆರೋಗ್ಯ ಇಲಾಖೆ, ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ, ಪ್ರಾದೇಶಿಕ ಅರಣ್ಯ ಇಲಾಖೆ, ಸಾಮಾಜಿಕ ಅರಣ್ಯ ಇಲಾಖೆ ಇವುಗಳ ಸಯೋಜನೆಯೊಂದಿಗೆ ಶಿಸ್ತುಬದ್ಧವಾಗಿ ಕರಡು ಯೋಜನೆಯನ್ನು ಸಿದ್ಧಪಡಿಸಲು ತಿಳಿಸಿದರು.
ಸಭೆಯಲ್ಲಿ ತಹಸಿಲ್ದಾರ್ ಡಾ.ವಿನಯಾ ಹೂಗಾರ, ತಾಪಂ ಇಓ ಅನಸೂಯಾ ಚಲವಾದಿ, ಪಂಚಾಯತ್ ರಾಜ್ ಸಹಾಯಕ ನಿರ್ದೇಶಕ ಬಿ ಎಂ ಸಾಗರ, ತಾಲೂಕ ಯೋಜನಾಧಿಕಾರಿ ಖುಬಸಿಂಗ್ ಜಾಧವ, ಸಹಾಯಕ ನಿರ್ದೇಶಕ (ಗ್ರಾ.ಉ.) ಎಸ್.ಎಸ್. ಗಣಾಚಾರ್ಯ, ವಿವಿಧ ಇಲಾಖೆಗಳ ತಾಲೂಕ ಮಟ್ಟದ ಅಧಿಕಾರಿಗಳು, ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು ಹಾಗೂ ತಾಪಂ ಸಿಬ್ಬಂದಿಗಳು ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 