ರಾಷ್ಟ್ರೀಯ

ರಾಯಗಡ ಕಟ್ಟಡ ಕುಸಿತ : ಜೀವಹಾನಿಗಾಗಿ ರಾಷ್ಟ್ರಪತಿ ಸಂತಾಪ

ರಾಯಗಡ ಕಟ್ಟಡ ಕುಸಿತ : ಜೀವಹಾನಿಗಾಗಿ ರಾಷ್ಟ್ರಪತಿ ಸಂತಾಪ

ನವದೆಹಲಿ, ಆಗುಸ್ಟ್25: ಮಹಾರಾಷ್ಟ್ರದ ರಾಯಗಡದಲ್ಲಿ ಕಟ್ಟಡ ಕುಸಿದು ಜೀವ ಹಾನಿ ಸಂಭವಿಸಿರುವ ಪ್ರಕರದ ಕುರಿತು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮತ್ತು ಉಪ ರಾಷ್ಟ್ರಪತಿ  ಎಂ.ವೆಂಕಯ್ಯ ನಾಯ್ಡು ಮಂಗಳವಾರ ಬೇಸರ ವ್ಯಕ್ತಪಡಿಸಿದ್ದಾರೆ. 

ಸ್ಥಳೀಯ ಅಧಿಕಾರಿಗಳು ಮತ್ತು ಎನ್‌ಡಿಆರ್‌ಎಫ್ ತಂಡಗಳು ಅಲ್ಲಿ ರಕ್ಷಣಾ ಮತ್ತು ಪರಿಹಾರ ಕಾರ್ಯಗಳನ್ನು ಸಂಘಟಿಸುತ್ತಿವೆ ಎಂದು ಹೇಳಿದ್ದಾರೆ.

"ಮಹಾರಾಷ್ಟ್ರದ ರಾಯಗಡದ ಮಹಾದ್ ನಲ್ಲಿ ಕಟ್ಟಡ ಕುಸಿತ ಮತ್ತು ಪ್ರಾಣಹಾನಿಯ ಸುದ್ದಿ ದುಃಖಕರವಾಗಿದೆ. ನನ್ನ ಆಲೋಚನೆಗಳು ಮತ್ತು ಪ್ರಾರ್ಥನೆಗಳು ಸಂತ್ರಸ್ತರಿಗಾಗಿದೆ.  ಗಾಯಾಳುಗಳು ಶೀಘ್ರ ಚೇತರಿಸಿಕೊಳ್ಳಬೇಕೆಂದು ಬಯಸುತ್ತೇನೆ” ಎಂದು ರಾಷ್ಟ್ರಪತಿ ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ. 

ಮಹಾರಾಷ್ಟ್ರದ ರಾಯಗಡ ಜಿಲ್ಲೆಯಲ್ಲಿ ಸೋಮವಾರ ಸಂಜೆ ಐದು ಅಂತಸ್ತಿನ ಕಟ್ಟಡ ಕುಸಿದು, 60 ಕ್ಕೂ ಹೆಚ್ಚು ಜನರನ್ನು ರಕ್ಷಿಸಲಾಗಿದೆ ಮತ್ತು ಇನ್ನೂ ಅನೇಕರು ಭಗ್ನಾವಶೇಷದಲ್ಲಿ ಸಿಲುಕಿಕೊಂಡಿದ್ದಾರೆ ಎಂದು ವರದಿಗಳು ತಿಳಿಸಿವೆ. 

ಉಪ ರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು,  "ದುಃಖಿತ ಕುಟುಂಬಗಳಿಗೆ ನನ್ನ ಸಂತಾಪ ಮತ್ತು ಗಾಯಾಳುಗಳ ಶೀಘ್ರ ಚೇತರಿಕೆಗಾಗಿ ಪ್ರಾರ್ಥನೆ. ರಕ್ಷಣಾ ಕಾರ್ಯಗಳು ನಡೆಯುತ್ತಿವೆ, ಸ್ಥಳೀಯ ಅಧಿಕಾರಿಗಳು ಮತ್ತು ಎನ್‌ಡಿಆರ್‌ಎಫ್ ತಂಡಗಳು ಅಗತ್ಯ ಸಹಾಯವನ್ನು ನೀಡುತ್ತಿವೆ" ಎಂದು ಸಂದೇಶದಲ್ಲಿ ತಿಳಿಸಿದ್ದಾರೆ. 

ಸುದ್ದಿ ಓದಿ