ರಾಷ್ಟ್ರಪತಿ ಚುನಾವಣೆ: ದೇವೇಗೌಡರನ್ನು ಭೇಟಿ ಮಾಡಿದ ದ್ರೌಪದಿ ಮುರ್ಮು
ಬೆಂಗಳೂರು: ಜುಲೈ 10: ಕರ್ನಾಟಕ ಪ್ರವಾಸದಲ್ಲಿರುವ ರಾಷ್ಟ್ರಪತಿ ಹುದ್ದೆಯ ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರು ಇಂದು ಮಾಜಿ ಪ್ರಧಾನಿಗಳಾದ ಎಚ್ ಡಿ ದೇವೇಗೌಡರನ್ನು ಭೇಟಿ ಮಾಡಿದರು.
ರಾಷ್ಟ್ರಪತಿ ಸ್ಥಾನಕ್ಕೆ ಎನ್ ಡಿಎ ಮತ್ತು ಇತರೆ ಪಕ್ಷಗಳ ಅಭ್ಯರ್ಥಿಯಾಗಿರುವ ದ್ರೌಪದಿ ಮುರ್ಮು ಅವರು ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಜತೆ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರನ್ನು ಭೇಟಿ ಮಾಡಿ ಮತಯಾಚಿಸಿದರು.
ಈ ಸಂದರ್ಭದಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಷಿ, ಕಿಶನ ರೆಡ್ಡಿ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ, ಮಾಜಿ ಸಿಎಂ ಎಚ್ ಡಿ ಕುಮಾರ ಸ್ವಾಮಿ, ಮಾಜಿ ಸಚಿವ ಎಚ್ ಡಿ ರೇವಣ್ಣ ಮತ್ತು ಇತರರು ಉಪಸ್ಥಿತರಿದ್ದರು.
ಕೆಲವು ದಿನಗಳ ಹಿಂದೆ ಜೆಡಿಎಸ್ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು, ದ್ರೌಪದಿ ಮುರ್ಮು ಅವರು ರಾಷ್ಟ್ರಪತಿ ಹುದ್ದೆಗೆ ಆಯ್ಕೆಯಾಗುವುದು ಖಚಿತ. ಜೆಡಿಎಸ್ ನ ಬೆಂಬಲ ದ್ರೌಪದಿ ಅವರಿಗೆ ಅವಶ್ಯಕತೆ ಇಲ್ಲ. ಆದ್ರೂ ಬಿಜೆಪಿ ಅಭ್ಯರ್ಥಿಗೆ ಬೆಂಬಲಿಸುವುದಾಗಿ ಘೋಷಿಸಿದ್ದರು.