ಗದಗ

ಗ್ಯಾರಂಟಿ ಹೆಸರಿನಲ್ಲಿ ಜನರಿಗೆ ಬೆಲೆ ಏರಿಕೆಯ ಶಾಕ್‌: ಬಿಜೆಪಿ ಮುಖಂಡ ಮುತ್ತು ರಾಠೋಡ್ ಆಕ್ರೋಶ

ಗ್ಯಾರಂಟಿ ಹೆಸರಿನಲ್ಲಿ ಜನರಿಗೆ ಬೆಲೆ ಏರಿಕೆಯ ಶಾಕ್‌: ಬಿಜೆಪಿ ಮುಖಂಡ ಮುತ್ತು ರಾಠೋಡ್ ಆಕ್ರೋಶ
Price hikes shock the public under the guise of 'guarantees': BJP leader Muthu Rathod expresses out


             ಶಿರಹಟ್ಟಿ, ನ.6: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ರಾಜ್ಯದ ಜನರಿಗೆ ಗ್ಯಾರಂಟಿಗಳಿಗಿಂತ ಬೆಲೆ ಏರಿಕೆಯ ಬರೆ ಹೆಚ್ಚಾಗಿದೆ. ಜನರ ಜೇಬಿಗೆ ಕತ್ತರಿ ಹಾಕುವ ಮೂಲಕ ಸರ್ಕಾರ ತನ್ನ ಖಜಾನೆ ತುಂಬಿಸಿಕೊಳ್ಳುತ್ತಿದೆ ಎಂದು ಬಿಜೆಪಿ ಯುವ ಮುಖಂಡ ಹಾಗೂ ಮಾಜಿ ಜವಳಿ ನಿಗಮದ ನಿರ್ದೇಶಕ ಮುತ್ತು ರಾಠೋಡ್ ಆರೋಪಿಸಿದರು.

           ಪಟ್ಟಣದಲ್ಲಿ ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಂದಿನಿ ಹಾಲು, ಬಸ್ ಪ್ರಯಾಣ, ಮೆಟ್ರೋ, ವಿದ್ಯುತ್, ಪೆಟ್ರೋಲ್‌-ಡೀಸೆಲ್, ವಾಹನ ನೋಂದಣಿ ಹಾಗೂ ಇತರೆ ಸೇವೆಗಳ ದರ ಹೆಚ್ಚಳದಿಂದ ಜನಸಾಮಾನ್ಯರು ತತ್ತರಿಸಿದ್ದಾರೆ. ಐದು ಗ್ಯಾರಂಟಿಗಳ ಹೆಸರಿನಲ್ಲಿ ಒಂದು ಕೈಯಲ್ಲಿ ಹಣ ನೀಡಿ, ಮತ್ತೊಂದು ಕೈಯಲ್ಲಿ ಬೆಲೆ ಏರಿಕೆ ಮೂಲಕ ಜನರಿಂದ ಹಣ ವಸೂಲಿ ಮಾಡಲಾಗುತ್ತಿದೆ ಎಂದು ಟೀಕಿಸಿದರು.

               ಐದು ಗ್ಯಾರಂಟಿಗಳಿಗೆ ವಾರ್ಷಿಕ ಸಾವಿರಾರು ಕೋಟಿ ರೂ. ವೆಚ್ಚವಾಗುತ್ತಿದ್ದು, ಇದರಿಂದ ರಾಜ್ಯದ ಹಣಕಾಸಿನ ಸ್ಥಿತಿ ಒತ್ತಡಕ್ಕೆ ಸಿಲುಕಿದೆ. ಅಭಿವೃದ್ಧಿ ಕಾಮಗಾರಿಗಳು, ಮೂಲಸೌಕರ್ಯ ಹಾಗೂ ಗ್ರಾಮೀಣ ಅಭಿವೃದ್ಧಿಗೆ ಹಣದ ಕೊರತೆ ಎದುರಾಗಿದೆ. ಇದು ಅಭಿವೃದ್ಧಿಯ ಸರ್ಕಾರವಲ್ಲ, ಸಾಲದ ಸರ್ಕಾರ ಎಂದು ರಾಠೋಡ್ ವಾಗ್ದಾಳಿ ನಡೆಸಿದರು.ಬೆಲೆ ಏರಿಕೆಯನ್ನು ಕೂಡಲೇ ಹಿಂಪಡೆಯಬೇಕು. ಜನರ ಮೇಲಿನ ಆರ್ಥಿಕ ಹೊರೆ ಕಡಿಮೆ ಮಾಡಬೇಕು.

          ಇಲ್ಲದಿದ್ದರೆ ಬಿಜೆಪಿ ವತಿಯಿಂದ ಸರ್ಕಾರದ ವಿರುದ್ಧ ಹೋರಾಟ ತೀವ್ರಗೊಳಿಸಲಾಗುವುದು ಎಂದು ಎಚ್ಚರಿಸಿದರು.ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಣಿ ಸದಸ್ಯ ಬಿ.ಡಿ. ಪಲ್ಲೇದ್, ಲಕ್ಷ್ಮೇಶ್ವರ ಪಿ ಎಲ್ ಡಿ ಬ್ಯಾಂಕ್ ನಿರ್ದೇಶಕ ಗುರ​‍್ಪ ವಡ್ಡರ್, ರಣತೂರು ಗ್ರಾಪಂ ಮಾಜಿ ಅಧ್ಯಕ್ಷ ಅಶೋಕ್ ಬಳ್ಳಾರಿ, ನ್ಯಾಯವಾದಿ ಎಸ್‌.ಎಸ್‌. ಪಾಟೀಲ, ಸಾವಯವ ಕೃಷಿಕ ಬಸವರಾಜ ಶಾಳಿ, ಗೌತಮ್, ಸೇರಿದಂತೆ ಹಲವರು ಉಪಸ್ಥಿತರಿದ್ದರು. 


ಸುದ್ದಿ ಓದಿ