ಕೊರೊನಾ ಸೋಂಕು ತೀವ್ರತೆಯ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ಮೋದಿ ಇಂದು ಸಮಾಲೋಚನೆ
ನವದೆಹಲಿ,
ನವೆಂಬರ್ 24: ಪ್ರಧಾನಿ ನರೇಂದ್ರ ಮೋದಿ
ಅವರು ಹೆಚ್ಚಿನ ಸಂಖ್ಯೆಯ ಕೊರೊನಾ ಸೋಂಕು
ಪ್ರಕರಣಗಳು ವರದಿಯಾಗುತ್ತಿರುವ ದೇಶದ ಎಂಟು
ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ ಮುಖ್ಯಮಂತ್ರಿಗಳೊಂದಿಗೆ ಮಂಗಳವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಲಿದ್ದಾರೆ.
ಕೋವಿಡ್ -19 ಪರಿಸ್ಥಿತಿ ಪರಿಶೀಲಿಸಲು ಹಾಗೂ ಕೋವಿಡ್ ಲಸಿಕೆ ಪೂರೈಕೆಗೆ ಅನುಸರಿಸಬೇಕಾದ ಕ್ರಮಗಳ ಬಗ್ಗೆ ಪ್ರಧಾನಿ ಚರ್ಚೆ ನಡೆಸಲಿದ್ದಾರೆ ಎಂದು ಮೂಲಗಳು ಹೇಳಿವೆ.
ಕೊರೊನಾ ಪ್ರಕರಣಗಳು ಹೆಚ್ಚಿನ ಪ್ರಮಾಣದಲ್ಲಿ ವರದಿಯಾಗಿತ್ತಿರುವ ಎಂಟು ರಾಜ್ಯಗಳೊಂದಿಗೆ ಮೊದಲು ಸಮಾಲೋಚನೆ ನಡೆಸಲಿದ್ದಾರೆ. ನಂತರ ಉಳಿದ ರಾಜ್ಯಗಳು ಹಾಗೂ ಕೆಂದ್ರಾಡಳಿತ ಪ್ರದೇಶಗಳೊಂದಿಗೆ ಸಭೆ ನಡೆಸಲಿದ್ದಾರೆ ಎಂದು ವರದಿಯಾಗಿದೆ,