ಪ್ರವಾಸಿ ತಾಣಗಳ ಸ್ವಚ್ಛತೆ, ಸಂರಕ್ಷಣೆಗೆ ಆದ್ಯತೆ ನೀಡಿ: ಮುಕುಲ್ ಜೈನ್
Prioritize cleanliness and conservation of tourist spots: Mukul Jain
ಗದಗ 27: ಕರ್ನಾಟಕವು ಪ್ರವಾಸೋದ್ಯಮದ ದೃಷ್ಟಿಯಿಂದ ಶ್ರೀಮಂತ ಹಾಗೂ ಐತಿಹಾಸಿಕ ಹಿನ್ನೆಲೆಯುಳ್ಳ ರಾಜ್ಯವಾಗಿದ್ದು, ಗದಗ ಜಿಲ್ಲೆಯಲ್ಲಿಯೂ ತ್ರಿಕೂಟೇಶ್ವರ ದೇವಸ್ಥಾನ, ಲಕ್ಕುಂಡಿ ಸೇರಿದಂತೆ ಹಲವು ಪ್ರಮುಖ ಪ್ರವಾಸಿ ತಾಣಗಳಿವೆ. ಈ ತಾಣಗಳ ಸಂಪೂರ್ಣ ಸಾಮರ್ಥ್ಯ ಬಳಸಿಕೊಳ್ಳಲು ಪ್ರವಾಸಿ ತಾಣಗಳು ಹಾಗೂ ಸುತ್ತಮುತ್ತಲಿನ ಪ್ರದೇಶವನ್ನು ಸ್ವಚ್ಛವಾಗಿಟ್ಟುಕೊಳ್ಳುವುದು, ಪ್ರವಾಸಿಗರ ಸುರಕ್ಷತೆ ಮತ್ತು ಭದ್ರತೆಗೆ ಆದ್ಯತೆ ನೀಡುವುದು ಹಾಗೂ ನೈಸರ್ಗಿಕ ಮತ್ತು ಐತಿಹಾಸಿಕ ತಾಣಗಳನ್ನು ಸಂರಕ್ಷಿಸುವುದು ಅಗತ್ಯ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಮುಕುಲ್ ಜೈನ್ ಹೇಳಿದರು.
ನಗರದ ಬಸವೇಶ್ವರ ಮೂರ್ತಿ ಉದ್ಯಾನವನದ ಭೀಷ್ಮ ಕೆರೆಯ ವಿಹಾರಧಾಮದಲ್ಲಿ ಭಾನುವಾರ ವಿಶ್ವ ಪ್ರವಾಸೋದ್ಯಮ ಹಿ2026 ಅಂಗವಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಪ್ರವಾಸೋದ್ಯಮ ಇಲಾಖೆ ಹಾಗೂ ಜಿಲ್ಲಾ ಎನ್‌ಎಸ್‌ಎಸ್ ಘಟಕದ ಸಹಯೋಗದಲ್ಲಿ ಆಯೋಜಿಸಿದ್ದ ಡಿಜಿಟಲ್ ಕಾರ್ಯಸೂಚಿ ಮತ್ತು ಕೃತಕ ಬುದ್ಧಿಮತ್ತೆ ಬಳಸಿ ಪ್ರವಾಸೋದ್ಯಮ ಮರುಸೃಷ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ವಿದ್ಯಾರ್ಥಿಗಳು ಎಲ್ಲೆಡೆ ಸಂಚರಿಸುವಾಗ ಸ್ವಚ್ಛತೆ, ಆರೋಗ್ಯ, ನೈರ್ಮಲ್ಯ ಹಾಗೂ ಉತ್ತಮ ನಡವಳಿಕೆ ಕಾಪಾಡಿಕೊಳ್ಳಬೇಕು. ಜಿಲ್ಲೆ, ರಾಜ್ಯ ಹಾಗೂ ದೇಶದ ಸಂಸ್ಕೃತಿ ಮತ್ತು ಪ್ರವಾಸೋದ್ಯಮದ ರಾಯಭಾರಿಗಳಂತೆ ಕಾರ್ಯನಿರ್ವಹಿಸಬೇಕು. ಉತ್ತಮ ನಡವಳಿಕೆ ಮತ್ತು ಸ್ವಚ್ಛತೆಯಿಂದ ಪ್ರವಾಸಿಗರಲ್ಲಿ ಉತ್ತಮ ಅಭಿಪ್ರಾಯ ಮೂಡಿ, ಪ್ರವಾಸೋದ್ಯಮದ ಅಭಿವೃದ್ಧಿಗೆ ಸಹಕಾರಿಯಾಗುತ್ತದೆ ಎಂದು ಸಲಹೆ ನೀಡಿದರು.
ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕಿ ಡಾ. ನಂದಾ ಹನಬರಹಟ್ಟಿ ಮಾತನಾಡಿ, ಪ್ರವಾಸಿ ತಾಣಗಳ ವೈಶಿಷ್ಟ್ಯ ಮತ್ತು ಮಹತ್ವ ಅರಿತು ಅವುಗಳನ್ನು ಸ್ವಚ್ಛವಾಗಿ ಹಾಗೂ ಜಾಗರೂಕತೆಯಿಂದ ಸಂರಕ್ಷಿಸುವುದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿ ಎಂದರು. ಪ್ರವಾಸಿಗರು ಹಾಗೂ ಸಾರ್ವಜನಿಕರು ಎಲ್ಲೆಡೆ ತ್ಯಾಜ್ಯವನ್ನು ನಿಗದಿತ ಕಸದ ಬುಟ್ಟಿಗಳಲ್ಲಿಯೇ ಹಾಕುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಹೇಳಿದರು.
ಗಣೇಶ ವಿಸರ್ಜನೆ ವೇಳೆ ದುರಂತ : ಬೆಳಗಾವಿಯ ಯುವಕ ನೀರಲ್ಲಿ ಮುಳುಗಿ ಸಾವು
ಚನ್ನಮ್ಮ ಪ್ರತಿಮೆ ಪ್ರತಿಷ್ಠಾಪನೆಗೆ ನವೆಂಬರ 1ರ ಗಡುವು ನೀಡಿದ ಕನ್ನಡ ಸಂಘಟನೆಗಳು
ಎನ್ಒಸಿ ನೀಡಲು ಲಂಚ : ಖಾನಾಪುರ ತಾಲೂಕು ಆರೋಗ್ಯಾಧಿಕಾರಿ ಲೋಕಾಯುಕ್ತ ಬಲೆಗೆ
ಅರ್ಧಕ್ಕೆ ನಿಂತ ಚನ್ನಮ್ಮ ಪ್ರತಿಮೆ ಕಾಮಗಾರಿ: ಅವ್ಯವಹಾರದ ಶಂಕೆ : ಲೆಕ್ಕ ಕೊಡಿ ಹೋರಾಟಕ್ಕೆ ಕನ್ನಡ ಹೋರಾಟಗಾರರು ಸಜ್ಜು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ 