ಸರ್ಕಾರಿ ಉದ್ಯೋಗದ ಜೊತೆಗೆ ಸ್ವಯಂ ಉದ್ಯೋಗಕ್ಕೂ ಆದ್ಯತೆ ನೀಡಿ: ಶಾಸಕ ರುದ್ರ​‍್ಪ ಲಮಾಣಿ

ಸರ್ಕಾರಿ ಉದ್ಯೋಗದ ಜೊತೆಗೆ ಸ್ವಯಂ ಉದ್ಯೋಗಕ್ಕೂ ಆದ್ಯತೆ ನೀಡಿ: ಶಾಸಕ ರುದ್ರ​‍್ಪ ಲಮಾಣಿ  Prioritize self-employment alongside government jobs: MLA Rudrappa Lamani

ಲೋಕದರ್ಶನ ವರದಿ 

ಹಾವೇರಿ 02 : ಇಂದಿನ ತೀವ್ರ ಸ್ಪರ್ಧಾತ್ಮಕ ಪರಿಸ್ಥಿತಿಯಲ್ಲಿ ಯುವಕರು ಕೇವಲ ಸರ್ಕಾರಿ ಉದ್ಯೋಗದ ನೀರೀಕ್ಷೆಯಲ್ಲಿರದೆ, ಸ್ವಯಂ ಉದ್ಯೋಗದತ್ತಲೂ ಗಮನ ಹರಿಸಬೇಕು ಎಂದು ವಿಧಾನಸಭೆ ಸಭಾಧ್ಯಕ್ಷರು ಹಾಗೂ ಸ್ಥಳೀಯ ಶಾಸಕ ರುದ್ರ​‍್ಪ ಲಮಾಣಿ ಕರೆ ನೀಡಿದರು.  ನಗರದ ಬಸವೇಶ್ವರ ನಗರದ 12ನೇ ಕ್ರಾಸ್ನಲ್ಲಿರುವ ಸ್ವಾಮಿ ವಿವೇಕಾನಂದ ಸೈನ್ಸ್‌ ಪಿಯು ಕಾಲೇಜಿನಲ್ಲಿ ಆಯೋಜಿಸಿದ್ದ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಸ್ವಾಗತ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಹಾವೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್‌.ಎಫ್‌.ಎನ್‌. ಗಾಜಿಗೌಡ್ರ ಮಾತನಾಡಿ, ವಿದ್ಯಾರ್ಥಿಗಳು ಅಧ್ಯಯನಕ್ಕೆ ಹೆಚ್ಚಿನ ಆದ್ಯತೆ ನೀಡಿ ಪೋಷಕರು ಹಾಗೂ ಶಿಕ್ಷಣ ಸಂಸ್ಥೆಗೆ ಉತ್ತಮ ಹೆಸರು ತರುವಂತೆ ಶ್ರಮಿಸಬೇಕು ಎಂದು ಹೇಳಿದರು. ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿವೃತ್ತ ಉಪನಿರ್ದೇಶಕ ಎಚ್‌.ಎಸ್‌. ಚಿನ್ನಿಕಟ್ಟಿ ಮಾತನಾಡಿ, ದೇಶದಲ್ಲಿ ವಿಜ್ಞಾನಿಗಳ ಸಂಖ್ಯೆ ಕಡಿಮೆಯಾಗುತ್ತಿರುವುದು ಆತಂಕದ ಸಂಗತಿ. ವಿದ್ಯಾರ್ಥಿಗಳು ವಿಜ್ಞಾನ ಮತ್ತು ತಾಂತ್ರಿಕ ಕ್ಷೇತ್ರಗಳಲ್ಲಿ ಹೆಚ್ಚಿನ ಆಸಕ್ತಿ ಬೆಳೆಸಿಕೊಳ್ಳಬೇಕು. ನೀಟ್ ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಈಗಿನಿಂದಲೇ ಸಜ್ಜಾಗಬೇಕು.

ಅನಗತ್ಯ ಚಟುವಟಿಕೆಗಳಿಂದ ದೂರವಿದ್ದು ಲಭ್ಯವಿರುವ ಅವಕಾಶಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು. ಕಾರ್ಯಕ್ರಮದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಎಂ. ಮೈದೂರ, ಮುಖಂಡರಾದ ಎನ್‌.ವಿ. ದೊಡ್ಡಗೌಡ್ರ, ರಾಜೇಂದ್ರ ಹಿರೇಮಠ ಉಪಸ್ಥಿತರಿದ್ದರು. ಕಾಲೇಜಿನ ಪ್ರಾಂಶುಪಾಲ ರವಿಕುಮಾರ ಪೂಜಾರ ಅಧ್ಯಕ್ಷತೆ ವಹಿಸಿದ್ದರು. ಸಂದರ್ಭದಲ್ಲಿ ಪ್ರಸಕ್ತ ಸಾಲಿನ ಪಿಯುಸಿಯಲ್ಲಿ ಉನ್ನತ ಅಂಕ ಗಳಿಸಿದ ಸುವರ್ಣ ಗುಂಡಣ್ಣವರ, ರಾಜು ಅಕ್ಕಿ ಹಾಗೂ ಮಹಾಲಕ್ಷ್ಮೀ ಚೌಟಿ ಅವರನ್ನು ಸನ್ಮಾನಿಸಲಾಯಿತು. ಅಶ್ವಿನಿ ಹಿರೇಗೌಡ್ರ ನಿರೂಪಿಸಿದರು. ಕಾವ್ಯ ಹಕ್ಕಿ ಸ್ವಾಗತಿಸಿದರು. ಅರ​‍್ಿತಾ ಕುಂದಗೋಳ ವಂದಿಸಿದರು.